Homeಮುಖಪುಟವಾಯು ಮಾಲಿನ್ಯ ತಡೆಗೆ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಲು ಸಿದ್ಧ: ದೆಹಲಿ ಸರ್ಕಾರ

ವಾಯು ಮಾಲಿನ್ಯ ತಡೆಗೆ ಸಂಪೂರ್ಣ ಲಾಕ್‌ಡೌನ್‌ ಜಾರಿಗೊಳಿಸಲು ಸಿದ್ಧ: ದೆಹಲಿ ಸರ್ಕಾರ

- Advertisement -
- Advertisement -

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ತಡೆಯಲು  “ಸಂಪೂರ್ಣ ಲಾಕ್‌ಡೌನ್”ನಂತಹ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧ ಎಂದು ದೆಹಲಿ ಸರ್ಕಾರ ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಇದರ ಜೊತೆಗೆ ನೆರೆಯ ರಾಜ್ಯಗಳ ಕುರಿತು ಉಲ್ಲೇಖಿಸಿರುವ ದೆಹಲಿ ಸರ್ಕಾರವು, “ಅಂತಹ ಕ್ರಮವು ನೆರೆಯ ರಾಜ್ಯಗಳ ಎನ್‌ಸಿಆರ್‌ನಲ್ಲಿ (ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ) ಜಾರಿಗೆ ಬಂದರೆ ಅರ್ಥಪೂರ್ಣವಾಗಿರುತ್ತದೆ” ಎಂದೂ ಹೇಳಿದೆ.

“ಇಂಗಾಲ ಹೊರಸೂಸುವಿಕೆ ನಿಯಂತ್ರಿಸಲು ಸ್ಥಳೀಯವಾಗಿ ಸಂಪೂರ್ಣ ಲಾಕ್‌ಡೌನ್‌ನಂತಹ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧವಿದ್ದೇವೆ. ಆದಾಗ್ಯೂ, ನೆರೆಯ ರಾಜ್ಯಗಳ ಎನ್‌ಸಿಆರ್ ಪ್ರದೇಶಗಳಾದ್ಯಂತ ಇದನ್ನು ಜಾರಿಗೊಳಿಸಿದರೆ ಲಾಕ್‌ಡೌನ್‌‌ ಅರ್ಥಪೂರ್ಣವಾಗಿರುತ್ತದೆ. ದೆಹಲಿಯಲ್ಲಿನ ಲಾಕ್‌ಡೌನ್ ವಾಯುಮಾಲಿನ್ಯದ ಮೇಲೆ ಸೀಮಿತ ಪರಿಣಾಮ ಬೀರುತ್ತದೆ” ಎಂದು ಸರ್ಕಾರ ತಿಳಿಸಿದೆ.

“ಭಾರತ ಸರ್ಕಾರದಿಂದ ಅಥವಾ ವಾಯು ಗುಣಮಟ್ಟ ನಿರ್ವಹಣಾ ಆಯೋಗದಿಂದ ಸಂಪೂರ್ಣ ಲಾಕ್‌ಡೌನ್‌ ಎನ್‌ಸಿಆರ್ ಪ್ರದೇಶಗಳಿಗೆ ಕಡ್ಡಾಯಗೊಳಿಸಿದರೆ ಈ ಹಂತವನ್ನು ಪರಿಗಣಿಸಲು ನಾವು ಸಿದ್ಧರಿದ್ದೇವೆ” ಎಂದು ಸರ್ಕಾರ ಅಫಿಡವಿಟ್ ಸಲ್ಲಿಸಿದೆ. ಸುಪ್ರೀಂ ಕೋರ್ಟ್ ವಿಚಾರಣೆಗೆ ಮುನ್ನ ಸೋಮವಾರ ದೆಹಲಿ ಸರ್ಕಾರ ತನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಪರಿಸರ ಕಾರ್ಯಕರ್ತ ಆದಿತ್ಯ ದುಬೆ ಮತ್ತು ಕಾನೂನು ವಿದ್ಯಾರ್ಥಿ ಅಮನ್ ಬಂಕಾ ಅವರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಅಫಿಡವಿಟ್ ಸಲ್ಲಿಸಲಾಗಿದೆ. ಅರ್ಜಿದಾರರು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಚಿತವಾಗಿ ಹುಲ್ಲು ತೆಗೆಯುವ ಯಂತ್ರಗಳನ್ನು ನೀಡಬೇಕೆಂದು ಆಗ್ರಹಿಸಿದ್ದಾರೆ.

ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಶನಿವಾರ, ದೆಹಲಿ-ಎನ್‌ಸಿಆರ್‌ನಲ್ಲಿ ವಾಯು ಮಾಲಿನ್ಯದ ಹೆಚ್ಚಳವನ್ನು “ತುರ್ತು” ಪರಿಸ್ಥಿತಿ ಎಂದು ಬಣ್ಣಿಸಿತ್ತು. ಪರಿಸ್ಥಿತಿ ಸುಧಾರಿಸಲು ಎರಡು ದಿನಗಳ ಲಾಕ್‌ಡೌನ್ ಸೇರಿದಂತೆ ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಕ್ಕೆ ಕೇಳಿತ್ತು. ದೆಹಲಿಯಲ್ಲಿನ ಪರಿಸ್ಥಿತಿಗೆ ಪಂಜಾಬ್‌ನಲ್ಲಿ ಹುಲ್ಲು ಸುಡುವ ಸಮಸ್ಯೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ದೂಷಿಸುವುದನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಒತ್ತಿಹೇಳಿದೆ. ನಗರದಲ್ಲಿ ಶಾಲೆಗಳು ತೆರೆದಿದ್ದು, ಮಕ್ಕಳು ತೀವ್ರ ಮಾಲಿನ್ಯಕ್ಕೆ ಒಳಗಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದೆ.

ಈ ವಿಷಯದ ಕುರಿತು ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಗಾಳಿಯ ಗುಣಮಟ್ಟದ ಬಿಕ್ಕಟ್ಟನ್ನು ಎದುರಿಸಲು ಹಲವು ಕ್ರಮಗಳನ್ನು ಜಾರಿಗೊಳಿಸಿದ್ದಾರೆ. ಒಂದು ವಾರ ಶಾಲೆಗಳನ್ನು ಮುಚ್ಚುವುದು, ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸುವುದು ಮತ್ತು ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡುವುದಾಗಿ ಕೇಜ್ರಿವಾಲ್‌ ಘೋಷಿಸಿದ್ದಾರೆ. 


ಇದನ್ನೂ ಓದಿರಿ: ಒಂದು ವಾರ ಪ್ರತಿದಿನ 6 ಗಂಟೆಗಳ ಕಾಲ ರೈಲು ‘ಬುಕ್ಕಿಂಗ್ ಮತ್ತು ರದ್ದತಿ’ ಸೇವೆ ಸ್ಥಗಿತ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

0
ಜಾತಿ ಗಣತಿ ನನ್ನ ಜೀವನದ ಪ್ರಮುಖ ಗುರಿಯಾಗಿದೆ. ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿಯನ್ನು ಮಾಡುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ...