Homeಮುಖಪುಟಬಿಜೆಪಿ ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈಜೋಡಿಸಲು ಸಿದ್ಧ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈಜೋಡಿಸಲು ಸಿದ್ಧ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯು ಫೆಬ್ರವರಿ 27ರಂದು ನಡೆಯುತ್ತಿದ್ದು, ಈ ಚುನಾವಣೆಯಲ್ಲಿ ತಮ್ಮ ಪಕ್ಷ ಉತ್ತಮ ಪ್ರದರ್ಶನ ನೀಡಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಂದಿನ ವರ್ಷ ನಡೆಯುವ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸಮಾನ ಮನಸ್ಕ ಪಕ್ಷಗಳೊಂದಿಗೆ ತಮ್ಮ ಪಕ್ಷವು ಒಗ್ಗೂಡಲಿದೆ ಎಂದು ಮಂಗಳವಾರ ಅವರು ಹೇಳಿದ್ದಾರೆ.

ದಿಮಾಪುರ್‌ನ ದೀಪುಪರ್ ವಿಲೇಜ್ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಬಿಜೆಪಿಯನ್ನು ಟೀಕಿಸಿದ ಖರ್ಗೆ, ”ನೀವು ನಿರಂಕುಶಾಧಿಕಾರಿ ಅಲ್ಲ, ಸರ್ವಾಧಿಕಾರಿಯೂ ಅಲ್ಲ. ನೀವು ಪ್ರಜಾಪ್ರಭುತ್ವದಲ್ಲಿದ್ದೀರಿ ಎನ್ನುವುದನ್ನು ನೆನಪಿಟ್ಟುಕೊಳ್ಳಬೇಕು.. ಜನರಿಂದ ಚುನಾಯಿತರಾಗಿದ್ದೀರಿ ಮತ್ತು ಜನರು 2024ರಲ್ಲಿ (ಸಾಮಾನ್ಯ ಚುನಾವಣೆ) ನಿಮಗೆ ತಕ್ಕ ಪಾಠ ಕಲಿಸುತ್ತಾರೆ” ಎಂದರು.

ನಾಗಾಲ್ಯಾಂಡ್ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ”ಕೇಸರಿ ಪಕ್ಷವು ಪರಿಸ್ಥಿತಿಯ ಲಾಭ ಪಡೆದುಕೊಂಡು ಇಲ್ಲಿ ರಾತ್ರೋರಾತ್ರಿ ಸರ್ಕಾರವನ್ನು ಉರುಳಿಸಿತು. ಬಿಜೆಪಿಯಿಂದ ಮೋಸ ಮಾಡಲಾಗಿದೆ, ನಾಗಾಲ್ಯಾಂಡ್ ಜನತೆ ಮತ್ತೊಮ್ಮೆ ಮೋಸ ಹೋಗಿದ್ದಾರೆ” ಎಂದು ಖರ್ಗೆ ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್‌ನ ಸರ್ವಸದಸ್ಯರ ಅಧಿವೇಶನಕ್ಕೂ ಮುನ್ನ ಛತ್ತೀಸ್‌ಗಢದಲ್ಲಿ ಇಡಿ ದಾಳಿ; ಕೈ ನಾಯಕರಿಂದ ಟೀಕೆ

“ಬಿಜೆಪಿಯು ಇಲ್ಲಿ ಮುಖ್ಯಮಂತ್ರಿಯನ್ನು ಬ್ಲಾಕ್ ಮೇಲ್ ಮಾಡುವ ಮೂಲಕ ಸರ್ಕಾರವನ್ನು ರಚಿಸಿತು. ಇಲ್ಲಿ ಮಾತ್ರವಲ್ಲದೆ 6-7 ರಾಜ್ಯಗಳಲ್ಲಿ ಅವರು ಶಾಸಕರ ಮೇಲೆ ಒತ್ತಡ ಹೇರಿ, ಆಮಿಷ ಒಡ್ಡಿ ಅಲ್ಲಿನ ಸರ್ಕಾರಗಳನ್ನು ಉರುಳಿಸಿದ್ದಾರೆ” ಎಂದು ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದರು.

2024 ರ ಸಾರ್ವತ್ರಿಕ ಚುನಾವಣೆಗೆ ಕಾರ್ಯತಂತ್ರವನ್ನು ರೂಪಿಸಲು ಬಿಜೆಪಿ ಇತರ ಸಮಾನ ಮನಸ್ಕ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದೆ. ಆದರೆ, ಬಿಜೆಪಿ ಬಹುಮತ ಪಡೆಯುವುದಿಲ್ಲ ಎಂದು ಖರ್ಗೆ ಭವಿಷ್ಯ ನುಡಿದರು.

”ನಾವು ಬಹುಮತ ಪಡೆಯುತ್ತೇವೆ, ಕಾಂಗ್ರೆಸ್ ಈ ದೇಶವನ್ನು ಮುನ್ನಡೆಸುತ್ತದೆ. ನಾವು ಸಂವಿಧಾನವನ್ನು ಮತ್ತು ಪ್ರಜಾಪ್ರಭುತ್ವವನ್ನು ಅನುಸರಿಸುತ್ತೇವೆ” ಎಂದು ಅವರು ಹೇಳಿದರು.

ಬಿಜೆಪಿಯವರು ಸಂವಿಧಾನದ ಬಗ್ಗೆ ಮಾತನಾಡುತ್ತಾರೆ ಆದರೆ ಅವರ ಕಾರ್ಯಗಳು ಪ್ರಜಾಪ್ರಭುತ್ವ ವಿರೋಧಿಯಾಗಿರುತ್ತವೆ ಎಂದು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಆರೋಪಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದ ಮಹಿಳೆಯೊಬ್ಬರ ಅಪಹರಣ ಪ್ರತ್ಯೇಕ ಪ್ರಕರಣದಲ್ಲಿ ಶಾಸಕ ಹೆಚ್‌.ಡಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ...