Homeಮುಖಪುಟಭಾರತದ ಧ್ವನಿಗಾಗಿ ಯಾವುದೇ ಬೆಲೆ ತೆರಲು ಸಿದ್ಧ: ಅನರ್ಹತೆ ಬಳಿಕ ರಾಹುಲ್ ಹೇಳಿಕೆ

ಭಾರತದ ಧ್ವನಿಗಾಗಿ ಯಾವುದೇ ಬೆಲೆ ತೆರಲು ಸಿದ್ಧ: ಅನರ್ಹತೆ ಬಳಿಕ ರಾಹುಲ್ ಹೇಳಿಕೆ

ರಾಹುಲ್ ಗಾಂಧಿಯವರ ಅನರ್ಹತೆಗೆ ಸಂಬಂಧಿಸಿದಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯಿಸಿದ್ದಾರೆ

- Advertisement -
- Advertisement -

“ನಾನು ಭಾರತದ ಧ್ವನಿಗಾಗಿ ಹೋರಾಡುತ್ತಿದ್ದೇನೆ. ಯಾವುದೇ ಬೆಲೆ ತೆರಲು ಸಿದ್ದನಿದ್ದೇನೆ” ಎಂದು ಲೋಕಸಭಾ ಸ್ಥಾನದಿಂದ ಅನರ್ಹಗೊಂಡ ಬಳಿಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

‘ಮೋದಿ ಸರ್‌ನೇಮ್‌‌’ ಬಳಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್‌ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕ, ಕೇರಳದ ವಯನಾಡ್ ಸಂಸದ ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಅನರ್ಹಗೊಳಿಸಲಾಗಿದೆ.

ಲೋಕಸಭಾ ಸೆಕ್ರೆಟರಿಯೇಟ್‌ರವರು ಈ ಕುರಿತು ಪ್ರಕಟಣೆ ಹೊರಡಿಸಿದ್ದು, “ಕೇರಳದ ವಯನಾಡ್ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯರಾದ ರಾಹುಲ್ ಗಾಂಧಿಯವರನ್ನು ಸೂರತ್‌ನ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅಪರಾಧಿ ಎಂದು ಘೋಷಿಸಿದ ನಂತರ, 1951ರ ಪ್ರಜಾಪ್ರತಿನಿಧಿ ಕಾಯ್ದೆಯ 8ನೇ ಪರಿಚ್ಛೇದದೊಂದಿಗೆ, ಭಾರತದ ಸಂವಿಧಾನದ 102(1)(ಇ) ವಿಧಿಯ ನಿಬಂಧನೆಗಳ ಪ್ರಕಾರ, ಮಾರ್ಚ್ 23, 2023 ರಿಂದ (ಶಿಕ್ಷೆಯಾದ ದಿನಾಂಕದಿಂದ) ಅವರು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ” ಎಂದು ಆದೇಶಿಸಲಾಗಿದೆ. ಈ ಸಂಬಂಧ ರಾಹುಲ್ ಪ್ರತಿಕ್ರಿಯಿಸಿ, “ಭಾರತದ ಧ್ವನಿಗಾಗಿ ಯಾವುದೇ ಬೆಲೆ ತೆರಲು ಸಿದ್ಧ” ಎಂದಿದ್ದಾರೆ.

ಕೇರಳ ಸಿಎಂ ಪಿಣರಾಯಿ ವಿಜಯನ್ ಪ್ರತಿಕ್ರಿಯೆ

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಈ ವಿದ್ಯಮಾನಕ್ಕೆ ಪ್ರತಿಕ್ರಿಯಿಸಿದ್ದು, “ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವವನ್ನು ತರಾತುರಿಯಲ್ಲಿ ರದ್ದುಗೊಳಿಸಿರುವುದು ಪ್ರಜಾಪ್ರಭುತ್ವದ ಮೇಲೆ ಸಂಘಪರಿವಾರ ನಡೆಸುತ್ತಿರುವ ಹಿಂಸಾತ್ಮಕ ದಾಳಿಯ ಅತ್ಯಂತ ಹೊಸ ಅಧ್ಯಾಯವಾಗಿದೆ” ಎಂದು ಟೀಕಿಸಿದ್ದಾರೆ.

“ಅಧಿಕಾರ ಬಳಸಿ ಭಿನ್ನಾಭಿಪ್ರಾಯವನ್ನು ಹತ್ತಿಕ್ಕುವುದು ಫ್ಯಾಸಿಸ್ಟ್ ವಿಧಾನವಾಗಿದೆ. ವಿರೋಧ ಪಕ್ಷದ ಪ್ರಮುಖ ನಾಯಕನ ಮೇಲೆಯೆ ಈ ರೀತಿಯಾಗಿ ದಾಳಿ ನಡೆಸಲಾಗಿದೆ. ಹೀಗಿರುವಾಗ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಜನ ಸಾಮಾನ್ಯರಿಗೆ ಇಲ್ಲಿ ರಕ್ಷಣೆಯಿದೆಯೆ? ಇವರು ಸಾಂವಿಧಾನಿಕ ಮೌಲ್ಯಗಳಿಗೆ ನೀಡುವ ಬೆಲೆ ಏನಿದೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ರಾಹುಲ್‌ ಗಾಂಧಿ ವಿರುದ್ಧ ನೀಡಿದ ತೀರ್ಪಿನಲ್ಲೇ ತಪ್ಪಿದೆ: ಜಸ್ಟೀಸ್ ದಾಸ್‌ ಮತ್ತು ಅರವಿಂದ್ ನಾರಾಯಣ್ ಅಭಿಪ್ರಾಯಗಳು

“ಟೀಕೆಗಳ ಬಗ್ಗೆ ಇರುವ ತೀವ್ರ ಅಸಹಿಷ್ಣುತೆ ನಮ್ಮ ಪ್ರಜಾಪ್ರಭುತ್ವಕ್ಕೆ ಅಪಾಯ ತಂದೊಡ್ಡುತ್ತಿದೆ. ರಾಹುಲ್ ಗಾಂಧಿ ಅವರ ವಿರುದ್ಧ ನಡೆದ ಕ್ರಮಗಳನ್ನು ಈ ಹಿನ್ನೆಲೆಯಲ್ಲಿ ನೋಡಬೇಕಾಗಿದ್ದು ಮತ್ತು ಈ ಕ್ರಮದ ವಿರುದ್ಧ ತೀವ್ರವಾಗಿ ಪ್ರತಿರೋಧಿಸಲು ಪ್ರಜಾಪ್ರಭುತ್ವವಾದಿಗಳು ಒಗ್ಗೂಡಿ ಮುಂದೆ ಬರಬೇಕಾಗಿದೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯೇತರ ರಾಜ್ಯಗಳಲ್ಲಿ ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ನಡೆಸಿದ ರಾಜಕೀಯ ಹಸ್ತಕ್ಷೇಪದಲ್ಲಿ ಮನೀಶ್ ಸಿಸೋಡಿಯಾ ಮತ್ತು ರಾಹುಲ್ ಗಾಂಧಿ ವಿರುದ್ಧದ ಪ್ರಕರಣಗಳಿಗೆ ದೆಹಲಿಯಲ್ಲಿ ವಿರೋಧ ವ್ಯಕ್ತಪಡಿಸಿದ ವಿರೋಧ ಪಕ್ಷದ ಸಂಸದರನ್ನು ಬಂಧಿಸಿರುವುದು ಕೂಡಾ ಇದರ ಇನ್ನೊಂದು ಭಾಗವಾಗಿದೆ. ಕೇಂದ್ರ ಸರ್ಕಾರದ ವಿರುದ್ಧ ಪೋಸ್ಟರ್ ಅಂಟಿಸಿದ್ದಕ್ಕಾಗಿ ದೆಹಲಿಯಲ್ಲಿ ಗುಂಪು ಗುಂಪಾಗಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಕೇಂದ್ರ ಸರ್ಕಾರದ ಈ ಯಾವುದೇ ಕ್ರಮಗಳು ನಮ್ಮ ಪ್ರಜಾಸತ್ತಾತ್ಮಕ ಸಮಾಜ ಮತ್ತು ಸಂವಿಧಾನದ ಮೌಲ್ಯಗಳಿಗೆ ಹೊಂದಿಕೆಯಾಗುವುದಿಲ್ಲ” ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...