“ವಕ್ಫ್ ಕಾಯ್ದೆ ರದ್ದಾಗದಿದ್ದರೆ ಜೀವ ತೆಗೆಯಲು ಮತ್ತು ಜೀವ ಕೊಡಲು ಸಿದ್ಧರಿದ್ದೇವೆ” ಎಂದು ಕಲಬುರಗಿಯ ಮಾರಾಳದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.
ಅಫಜಲಪುರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರವಿವಾರ ನಡೆದ ʼವಕ್ಫ್ ಹಠಾವೋ ದೇಶ ಬಚಾವೋʼ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಯುವಕರ ಮನೆಯಲ್ಲಿ ತಲ್ವಾರ್‌ಗಳಿವೆ, ಯಾರೂ ಬರುತ್ತಾರೆ ಅವರನ್ನು ಕಡಿಯುತ್ತೇವೆ. ಇನ್ಮುಂದೆ ನಾವು ಮಕ್ಕಳ ಕೈಯಲ್ಲಿ ಪೆನ್ನು ಕೊಡುವುದರ ಬದಲು ತಲ್ವಾರ್ ಕೊಡಬೇಕಾಗುತ್ತದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿ, ಸಭೆಯಲ್ಲಿದ್ದವರನ್ನು ಪ್ರಚೋದಿಸಿದ್ದಾರೆ.
“ವಕ್ಫ್ ಕಾಯ್ದೆ ರದ್ದಾಗದಿದ್ದರೆ ಜೀವ ತೆಗೆಯಲು ಮತ್ತು ಜೀವ ಕೊಡಲು ಸಿದ್ಧರಿದ್ದೇವೆ. ಕಲಬುರಗಿ ಜಿಲ್ಲೆಯಲ್ಲಿ 27 ಸಾವಿರ ಎಕರೆ ವಕ್ಫ್ ಆಸ್ತಿ ಇದೆ. ಭಾರತವನ್ನು ಪಾಕಿಸ್ತಾನ ಮಾಡುತ್ತೇವೆ ಎನ್ನುತ್ತಿದ್ದಾರೆ. ನೀವೇನಾದರೂ ಎಚ್ಚೆತ್ತುಕೊಳ್ಳದಿದ್ದರೆ ಭಾರತ ದೇಶವೇ ಇರಲ್ಲ” ಎಂದು ಹೇಳಿದ್ದಾರೆ.
ಪ್ರತಿಭಟನಾ ಧರಣಿಯಲ್ಲಿ ಸ್ವಾಮೀಜಿ ನೀಡಿರುವ ಈ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಪ್ರಚೋದನಾಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಇದೀಗ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಾಯಿದೆ 299, 353/2 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ; ಅತ್ಯಾಚಾರ ಪ್ರಕರಣ: ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್



It’s better for him and us , let him take action
Very sensitive issue and created furor for nothing