Homeಮುಖಪುಟ'ವಕ್ಫ್ ಕಾಯ್ದೆ ರದ್ದಾಗದಿದ್ದರೆ ಜೀವ ತೆಗೆಯಲು ಸಿದ್ಧ..'; ಮರುಳಾರಾಧ್ಯ ಶಿವಾಚಾರ್ಯರಿಂದ ಪ್ರಚೋದನಾಕಾರಿ ಹೇಳಿಕೆ

‘ವಕ್ಫ್ ಕಾಯ್ದೆ ರದ್ದಾಗದಿದ್ದರೆ ಜೀವ ತೆಗೆಯಲು ಸಿದ್ಧ..’; ಮರುಳಾರಾಧ್ಯ ಶಿವಾಚಾರ್ಯರಿಂದ ಪ್ರಚೋದನಾಕಾರಿ ಹೇಳಿಕೆ

- Advertisement -
- Advertisement -

“ವಕ್ಫ್ ಕಾಯ್ದೆ ರದ್ದಾಗದಿದ್ದರೆ ಜೀವ ತೆಗೆಯಲು ಮತ್ತು ಜೀವ ಕೊಡಲು ಸಿದ್ಧರಿದ್ದೇವೆ” ಎಂದು ಕಲಬುರಗಿಯ ಮಾರಾಳದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.

ಅಫಜಲಪುರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರವಿವಾರ ನಡೆದ ʼವಕ್ಫ್ ಹಠಾವೋ ದೇಶ ಬಚಾವೋʼ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಯುವಕರ ಮನೆಯಲ್ಲಿ ತಲ್ವಾರ್‌ಗಳಿವೆ, ಯಾರೂ ಬರುತ್ತಾರೆ ಅವರನ್ನು ಕಡಿಯುತ್ತೇವೆ. ಇನ್ಮುಂದೆ ನಾವು ಮಕ್ಕಳ ಕೈಯಲ್ಲಿ ಪೆನ್ನು ಕೊಡುವುದರ ಬದಲು ತಲ್ವಾರ್ ಕೊಡಬೇಕಾಗುತ್ತದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿ, ಸಭೆಯಲ್ಲಿದ್ದವರನ್ನು ಪ್ರಚೋದಿಸಿದ್ದಾರೆ.

“ವಕ್ಫ್ ಕಾಯ್ದೆ ರದ್ದಾಗದಿದ್ದರೆ ಜೀವ ತೆಗೆಯಲು ಮತ್ತು ಜೀವ ಕೊಡಲು ಸಿದ್ಧರಿದ್ದೇವೆ. ಕಲಬುರಗಿ ಜಿಲ್ಲೆಯಲ್ಲಿ 27 ಸಾವಿರ ಎಕರೆ ವಕ್ಫ್ ಆಸ್ತಿ ಇದೆ. ಭಾರತವನ್ನು ಪಾಕಿಸ್ತಾನ ಮಾಡುತ್ತೇವೆ ಎನ್ನುತ್ತಿದ್ದಾರೆ. ನೀವೇನಾದರೂ ಎಚ್ಚೆತ್ತುಕೊಳ್ಳದಿದ್ದರೆ ಭಾರತ ದೇಶವೇ ಇರಲ್ಲ” ಎಂದು ಹೇಳಿದ್ದಾರೆ.

ಪ್ರತಿಭಟನಾ ಧರಣಿಯಲ್ಲಿ ಸ್ವಾಮೀಜಿ ನೀಡಿರುವ ಈ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಪ್ರಚೋದನಾಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಇದೀಗ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಾಯಿದೆ 299, 353/2 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನೂ ಓದಿ; ಅತ್ಯಾಚಾರ ಪ್ರಕರಣ: ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....