Homeಮುಖಪುಟದೀದಿ ನಿಜವಾದ ಬಂಗಾಳಿ ಟೈಗರ್‌: ಮಮತಾ ಬ್ಯಾನರ್ಜಿಗೆ ಬೆಂಬಲ ನೀಡಿದ ಶಿವಸೇನೆ

ದೀದಿ ನಿಜವಾದ ಬಂಗಾಳಿ ಟೈಗರ್‌: ಮಮತಾ ಬ್ಯಾನರ್ಜಿಗೆ ಬೆಂಬಲ ನೀಡಿದ ಶಿವಸೇನೆ

ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಕೂಡ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಶಿವಸೇನೆ ಬೆಂಬಲ ಸೂಚಿಸಿದೆ. ಮಮತಾ ಬ್ಯಾನರ್ಜಿಯನ್ನು ’ನಿಜವಾದ ಬಂಗಾಳಿ ಟೈಗರ್’‌ ಎಂದ ಶಿವಸೇನೆಯ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ರಾವತ್, ಈ ಬಾರಿ “ದೀದಿ Vs ಎಲ್ಲರೂ” ಎಂಬ ಚುನಾವಣಾ ಹೋರಾಟದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆ ಈ ಬಾರಿ “ದೀದಿ Vs ಎಲ್ಲರೂ” ಎಂಬ ಸ್ಪರ್ಧೆಯಾಗಿ ಮಾರ್ಪಟ್ಟಿದ್ದು, ಮಾರ್ಚ್ 27 ರಿಂದ ಏಪ್ರಿಲ್ 29 ರವರೆಗೆ ಸುಧೀರ್ಘ 8 ಹಂತಗಳಲ್ಲಿ ಮತದಾನ ನಡೆಯಲಿದೆ. ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

ಚುನಾವಣೆಯಲ್ಲಿ ಶಿವಸೇನೆಯು ಅಖಾಡಕ್ಕೆ ಇಳಿಯುತ್ತದೆಯೋ ಇಲ್ಲ ಮಮತಾ ಬ್ಯಾನರ್ಜಿಗೆ ಬೆಂಬಲ ನೀಡುತ್ತದೆಯೋ ಎಂಬ ಗೊಂದಲಗಳಿಗೆ ಇಂದು ಟ್ವಿಟರ್‌ನಲ್ಲಿ ಸ್ಪಷ್ಟನೆ ನೀಡಿರುವ ಸಂಜಯ್ ರಾವತ್, ಪಕ್ಷ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಮಮತಾ ದೀದಿಗೆ ಘರ್ಜಿಸುವಂತ ಯಶಸ್ಸು ಸಿಗಲಿ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ: ಪ.ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿಗೆ ಬೆಂಬಲ ಘೋಷಿಸಿದ ತೇಜಸ್ವಿ ಯಾದವ್

’ಪ.ಬಂಗಾಳ ರಾಜ್ಯದ ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಬಹು ದೊಡ್ಡ ಸವಾಲು ಇದೆ. “ದೀದಿ ವರ್ಸಲ್ ಎಲ್ಲರೂ” ಎಂಬ ರಾಜಕೀಯ ಚಿತ್ರಣ ಇಲ್ಲಿದೆ. ಎಲ್ಲರು ಎಂದರೆ ಹಣ, ಬಲ, ಮಾಧ್ಯಮ. ಈ ಎಲ್ಲವನ್ನೂ ಮಮತಾ ಬ್ಯಾನರ್ಜಿ ವಿರುದ್ಧ ಪ್ರಯೋಗಿಸಲಾಗುತ್ತಿದೆ. ಹೀಗಾಗಿಯೇ ದೀದಿ ಪರವಾಗಿ ನಾವು ನಿಲ್ಲಲಿದ್ದೇವೆ’ ಎಂದು ಸಂಜಯ್ ರಾವತ್ ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಬಹುಕಾಲದ ಮಿತ್ರಪಕ್ಷವಾಗಿದ್ದ ಶಿವಸೇನೆ 2019 ರಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಜೊತೆ ಮೈತ್ರಿ ಮಾಡಿಕೊಂಡು ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ರಚಿಸಿದೆ. ಈಗಾಗಲೇ ಎನ್‌ಸಿಪಿ ಪಶ್ಚಿಮ ಬಂಗಾಳದ ತೃಣಮೂಲದೊಂದಿಗೆ ಮೈತ್ರಿ ಮಾಡಿಕೊಂಡಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿ ಸೇರಿದ ಕ್ರಿಕೆಟಿಗ ಮನೋಜ್ ತಿವಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಆಳ್ವಿಕೆ ನಡೆಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರದಿಂದ ದೂರವಿದೆ. ಆದರೆ ಟಿಎಂಸಿ ನಾಯಕರನ್ನು ತನ್ನ ತೆಕ್ಕೆಗೆ ಸೆಳೆಯುವುದರಲ್ಲಿ ಬಿಜೆಪಿ ಮುಂದಿದೆ. ಇದರ ಜೊತೆಗೆ ರಾಜ್ಯದಲ್ಲಿ ಹಿಂಸಾಚಾರ ನಡೆಯುತ್ತಿದೆ ಮತ್ತು ಬಿಜೆಪಿ ನಾಯಕರನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಇತ್ತ, ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. “ಬಿಹಾರದ ಅನೇಕ ಜನರು ಪಶ್ಚಿಮ ಬಂಗಾಳದಲ್ಲಿ ವಾಸಿಸುತ್ತಿದ್ದಾರೆ. ಮಮತಾ ಜಿ ಅವರನ್ನು ಬೆಂಬಲಿಸುವಂತೆ ನಾನು ಬಿಹಾರದ ಎಲ್ಲರಿಗೂ ಮನವಿ ಮಾಡುತ್ತೇನೆ” ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.


ಇದನ್ನೂ ಓದಿ: ‘ಕಮಲದ ಗುಂಡಿ ಒತ್ತಿ, ಮಮತಾ ತನ್ನ ಕುರ್ಚಿಯಿಂದ ಎರಡು ಅಡಿ ಹಾರಿ ಬೀಳುವ ಕರೆಂಟ್ ಹೊಡೆಯುತ್ತದೆ’-ನಿತಿನ್ ಗಡ್ಕರಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...