Homeರಾಜಕೀಯ‘ಮೈತ್ರಿ ತೊರೆಯುವ ಬಗ್ಗೆ ಚರ್ಚಿಸುತ್ತೇವೆ, ಬಂಡಾಯ ಶಾಸಕರು ಹಿಂತಿರುಗುವ ಧೈರ್ಯ ತೋರಲಿ’: ಶಿವಸೇನೆ ವಕ್ತಾರ ಸಂಜಯ್...

‘ಮೈತ್ರಿ ತೊರೆಯುವ ಬಗ್ಗೆ ಚರ್ಚಿಸುತ್ತೇವೆ, ಬಂಡಾಯ ಶಾಸಕರು ಹಿಂತಿರುಗುವ ಧೈರ್ಯ ತೋರಲಿ’: ಶಿವಸೇನೆ ವಕ್ತಾರ ಸಂಜಯ್ ರಾವತ್‌

- Advertisement -
- Advertisement -

ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ ನಡುವೆ ಶಿವಸೇನೆ ಸಂಸದ, ಪಕ್ಷದ ವಕ್ತಾರ ಸಂಜಯ್ ರಾವತ್ ಅವರು ಬಂಡಾಯ ಪಾಳಯದ ನಾಯಕ ಏಕನಾಥ್ ಶಿಂಧೆ ಪರ ನಿಂತ 22 ಶಾಸಕರೊಂದಿಗೆ ಸಂಪರ್ಕದಲ್ಲಿರುವುದಾಗಿ ಗುರುವಾರ ಹೇಳಿದ್ದಾರೆ. ಒಂದು ವೇಳೆ ವಿಶ್ವಾಸ ಮತಯಾಚನೆ ನಡೆದರೆ ಆಡಳಿತರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟ ಗೆಲ್ಲುತ್ತದೆ ಎಂದು ಅವರು ತಿಳಿಸಿದ್ದಾರೆ.

ತಮ್ಮ ಪಕ್ಷವು ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗಿನ ಮೈತ್ರಿಯಿಂದ ಹೊರಬರಬೇಕು ಎಂದು ಬಂಡಾಯ ಶಾಸಕರು ಬಯಸುವುದಾರೆ ಅವರು ‘24 ಗಂಟೆಗಳಲ್ಲಿ’ ಮುಂಬೈಗೆ ಹಿಂತಿರುಗಬೇಕು ಎಂದು ಸಂಜಯ್ ರಾವತ್ ಹೇಳಿದ್ದಾರೆ. ‘‘ಈ ಬಗ್ಗೆ ನಾವು ಚರ್ಚಿಸುತ್ತೇವೆ, ಆದರೆ ಅವರು ಹಿಂತಿರುಗುವ ಧೈರ್ಯವನ್ನು ತೋರಿಸಬೇಕು” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅವರು ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಸೂರತ್‌ನಿಂದ ಮುಂಬೈಗೆ ಹಿಂದಿರುಗಿದ ಶಾಸಕರಾದ ನಿತಿನ್ ದೇಶಮುಖ್ ಮತ್ತು ಕೈಲಾಶ್ ಪಾಟೀಲ್ ಅವರು ಉಪಸ್ಥಿತರಿದ್ದರು. ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ಬಿಜೆಪಿ ರೂಪಿಸಿದ ಸಂಚು ಎಂದು ನಿತಿನ್‌ ದೇಶಮುಖ್ ಆರೋಪಿಸಿದರೆ, ಹಲವಾರು ಶಾಸಕರು ಮುಂಬೈಗೆ ಮರಳಲು ತಯಾರಿದ್ದಾರೆ ಎಂದು ಕೈಲಾಶ್‌‌ ಪಾಟೀಲ್ ಹೇಳಿಕೊಂಡಿದ್ದಾರೆ.

ಬಂಡಾಯ ಶಾಸಕರು ಇದೀಗ ಬಿಜೆಪಿ ಆಡಳಿತವಿರುವ ಅಸ್ಸಾಂನ ಗುವಾಹಟಿಯ ರ್‍ಯಾಡಿಸನ್‌ ಬ್ಲೂ ಹೋಟೆಲ್‌ನಲ್ಲಿ ಇದ್ದಾರೆ. ಇಲ್ಲಿಂದ ಇಂದು ಹೊರ ಬಂದ ಹೊಸ ದೃಶ್ಯಾವಳಿಗಳು ಒಟ್ಟು 42 ಬಂಡಾಯ ಶಾಸಕರು ಶಿಂಧೆ ಅವರೊಂದಿಗೆ ಇದ್ದಾರೆ ಎಂಬುವುದು ತೋರಿಸಿದೆ ಎಂದು ಮಾಧ್ಯಮಗಳು ಹೇಳಿವೆ. ಇವರಲ್ಲಿ ಶಿವಸೇನೆಯ 34 ಶಾಸಕರಿದ್ದು, ಏಳು ಶಾಸಕರು ಪಕ್ಷೇತರರಾಗಿದ್ದಾರೆ.

ಇದನ್ನೂ ಓದಿ: ‘ಉದ್ಧವ್ ಠಾಕ್ರೆ ರಾಜೀನಾಮೆ ಬೇಡ; ಬಿಜೆಪಿ ಜೊತೆಗೆ ಮೈತ್ರಿ ಮಾಡೋಣ’- ಶಿವಸೇನೆಯ ಬಂಡಾಯ ಶಾಸಕ

ಪಕ್ಷಾಂತರ ವಿರೋಧಿ ಕಾನೂನು ಜಾರಿಯಾಗದಂತೆ ಇರಲು ಶಿಂಧೆ ಅವರಿಗೆ ಶಿವಸೇನೆಯ 55 ಶಾಸಕರಲ್ಲಿ 37 ಶಾಸಕರ ಬೆಂಬಲದ ಅಗತ್ಯವಿದೆ. ನಿನ್ನೆಯಷ್ಟೆ ಮತ್ತೆ ಆರು ಶಾಸಕರು ಶಿಂಧೆ ನೇತೃತ್ವದ ಬಂಡಾಯ ಪಾಳಯವನ್ನು ಸೇರಿದ್ದರು.

ಶಿಂಧೆ ಅವರ ಪಾಳಯದ 22 ಶಾಸಕರೊಂದಿಗೆ ಶಿವಸೇನೆ ಸಂಪರ್ಕದಲ್ಲಿದೆ ಎಂಬ ರಾವತ್ ಹೇಳಿದ್ದು, ನಿನ್ನೆ ಅವರು 20 ಬಂಡಾಯ ನಾಯಕರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...