Homeಮುಖಪುಟಬಂಡಾಯ ಶಾಸಕರು ಕೊಳೆತ ಎಲೆಗಳಿಂದಂತೆ, ಅವು ಉದುರಲೇಬೇಕು: ಉದ್ಧವ್ ಠಾಕ್ರೆ

ಬಂಡಾಯ ಶಾಸಕರು ಕೊಳೆತ ಎಲೆಗಳಿಂದಂತೆ, ಅವು ಉದುರಲೇಬೇಕು: ಉದ್ಧವ್ ಠಾಕ್ರೆ

- Advertisement -
- Advertisement -

ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶಿವಸೇನೆಯ ಬಂಡಾಯ ನಾಯಕರನ್ನು ಮರದ ಕೊಳೆತ ಎಲೆಗಳಿಗೆ ಹೋಲಿಸಿದ್ದಾರೆ. ಬಂಡಾಯ ಎದ್ದಿರುವವರನ್ನು ಜನರು ಬೆಂಬಲಿಸುತ್ತಾರೆಯೇ ಎಂಬುದನ್ನು ತಿಳಿಯಲು ಚುನಾವಣೆ ನಡೆಯಲಿ ಎಂದು ಆಶಿಸಿದ್ದಾರೆ.

ಕಳೆದ ತಿಂಗಳು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಶಿವಸೇನಾ ಮುಖವಾಣಿ ‘ಸಾಮ್ನಾ’ಕ್ಕೆ ನೀಡಿರುವ ಮೊದಲ ಮೊದಲ ಸಂದರ್ಶನದಲ್ಲಿ ಈ ಹೇಳಿಕೆ ನೀಡಿದ್ದಾರೆ. ‘ಪಕ್ಷದ ಕೆಲವು ನಾಯಕರನ್ನು ಹೆಚ್ಚು ನಂಬಿರುವುದು ತಪ್ಪು’ ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ಒಳಗೊಂಡ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವು ಕಳೆದ ತಿಂಗಳು ಪಥನಗೊಂಡಿತು. ಶಿವಸೇನಾ ಶಾಸಕ ಏಕನಾಥ್ ಶಿಂಧೆ ಮತ್ತು ಇತರ 39 ಶಾಸಕರು ಪಕ್ಷದ ನಾಯಕತ್ವದ ವಿರುದ್ಧ ಬಂಡಾಯ ಎದ್ದಿದ್ದರಿಂದ ಉದ್ಧವ್‌ ನೇತೃತ್ವದ ಸರ್ಕಾರ ಉರುಳಿಬಿದ್ದಿತು.

ನಂತರ ಶಿಂಧೆ ಅವರು ಮುಖ್ಯಮಂತ್ರಿಯಾಗಿ ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

“ಈ ದಂಗೆಕೋರರು ಮರದ ಕೊಳೆತ ಎಲೆಗಳಂತಿದ್ದಾರೆ. ಅವುಗಳು ಉದುರಲೇಬೇಕು. ಹೊಸ ಎಲೆಗಳು ಬಂದರೆ ಮರಕ್ಕೆ ಒಳ್ಳೆಯದು” ಎಂದು ಉದ್ಧವ್‌ ಠಾಕ್ರೆ ತಿಳಿಸಿದ್ದಾರೆ.

ತಾವು ನಿಜವಾದ ಶಿವಸೇನೆಯನ್ನು ಪ್ರತಿನಿಧಿಸುತ್ತೇವೆ ಎಂಬ ಬಂಡಾಯ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಠಾಕ್ರೆ, ‘ಚುನಾವಣೆ ನಡೆಯಲಿ. ಜನರು ಯಾರನ್ನು ಆಯ್ಕೆ ಮಾಡುತ್ತಾರೆ ಎಂಬುದನ್ನು ನೋಡೋಣ’ ಎಂದು ತಿಳಿಸಿದ್ದಾರೆ.

“ಜನರು ನಮಗೆ ಮತ ಹಾಕುತ್ತಾರೋ ಅಥವಾ ಅವರನ್ನು ಬೆಂಬಲಿಸುತ್ತಾರೋ ಎಂಬುದು ಒಮ್ಮೆ ಸ್ಪಷ್ಟವಾಗುತ್ತದೆ” ಎಂದು ಮಾಜಿ ಸಿಎಂ ತಿಳಿಸಿದ್ದಾರೆ.

ಬಂಡಾಯಕ್ಕೆ ಯಾರನ್ನು ದೂಷಿಸಬಹುದು ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, “ನಾನು ಕೆಲವು ಸೇನಾ ಕಾರ್ಯಕರ್ತರು ಮತ್ತು ಮುಖಂಡರ ಮೇಲೆ ಹೆಚ್ಚು ನಂಬಿಕೆ ಇಟ್ಟಿರುವಂತೆ ತೋರುತ್ತಿದೆ. ಇಷ್ಟು ದಿನ ಅವರನ್ನು ನಂಬಿದ್ದು ನನ್ನ ತಪ್ಪು. ಬಿಜೆಪಿಯು ಶಿವಸೇನೆಯನ್ನು ಒಡೆಯಲು ಪ್ರಯತ್ನಿಸುತ್ತಿಲ್ಲ. ಆದರೆ ಇತರ ಪಕ್ಷಗಳ ಶ್ರೇಷ್ಠ ನಾಯಕರನ್ನು ತನ್ನೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

“ಕಾಂಗ್ರೆಸ್‌ನವರಾದ ಸರ್ದಾರ್ ಪಟೇಲ್ ಅವರನ್ನು ಹೇಗೆ ತಮ್ಮವರೆಂದು ಬಿಂಬಿಸಲು ಯತ್ನಿಸಿದರೋ, ಹಾಗೆಯೇ ಶಿವಸೇನೆಯನ್ನು ಸ್ಥಾಪಿಸಿದ ನನ್ನ ತಂದೆ ಬಾಳಾಸಾಹೇಬ್ ಠಾಕ್ರೆಯವರನ್ನು ತಮ್ಮವರೆಂದು ಬಿಂಬಿಸಿಕೊಳ್ಳಲು ಯತ್ನಿಸಿದ್ದಾರೆ” ಎಂದು ದೂರಿದ್ದಾರೆ.

ಇದನ್ನೂ ಓದಿರಿ: ಕೇರಳ: ಎದೆನೋವು ಎಂದರೂ ಬಿಡದೆ ಥಳಿಸಿದ ಪೊಲೀಸರು; ಕಸ್ಟಡಿ ಚಿತ್ರಹಿಂಸೆಗೆ ವ್ಯಕ್ತಿ ಬಲಿ

“ಈ ಜನರು ನಂಬಲರ್ಹರಲ್ಲ ಎಂದು ತೋರುತ್ತಿದೆ. ಅವರು ಮೂಲತಃ ಸೇನಾ ಕಾರ್ಯಕರ್ತರ ನಡುವೆ ಆಂತರಿಕ ಕಲಹವನ್ನು ಉಂಟುಮಾಡುತ್ತಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮಹಾ ವಿಕಾಸ್ ಅಘಾಡಿ ಮೈತ್ರಿಯು ರಾಜಕೀಯದಲ್ಲಿ ಪ್ರಯತ್ನಿಸಲು ಯೋಗ್ಯವಾಗಿದೆ ಎಂಬ ಸೂಚನೆಯನ್ನೂ ಅವರು ನೀಡಿದ್ದಾರೆ.

“ಜನರ ಪ್ರಕಾರ ಅದು ತಪ್ಪು ಹೆಜ್ಜೆಯಾಗಿದ್ದರೆ, ಅವರು ನಮ್ಮ ಮೈತ್ರಿ ವಿರುದ್ಧ ಬಂಡೇಳುತ್ತಿದ್ದರು. ಮಹಾ ವಿಕಾಸ್ ಅಘಾಡಿಯಲ್ಲಿ ನಾವು ಪರಸ್ಪರ ಗೌರವವನ್ನು ಹೊಂದಿದ್ದೇವೆ” ಎಂದು ಉದ್ಧವ್‌ ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...