Homeಅಂತರಾಷ್ಟ್ರೀಯಪಾಕಿಸ್ತಾನದಲ್ಲಿ ಮೂಲಭೂತವಾದಿ ಮುಸ್ಲಿಮರಿಂದ ಧ್ವಂಸಗೊಂಡಿದ್ದ ಹಿಂದೂ ದೇವಾಲಯ ಪುನರ್‌ನಿರ್ಮಾಣ: ಮುಖ್ಯ ನ್ಯಾಯಮೂರ್ತಿಗಳಿಂದ ಉದ್ಘಾಟನೆ

ಪಾಕಿಸ್ತಾನದಲ್ಲಿ ಮೂಲಭೂತವಾದಿ ಮುಸ್ಲಿಮರಿಂದ ಧ್ವಂಸಗೊಂಡಿದ್ದ ಹಿಂದೂ ದೇವಾಲಯ ಪುನರ್‌ನಿರ್ಮಾಣ: ಮುಖ್ಯ ನ್ಯಾಯಮೂರ್ತಿಗಳಿಂದ ಉದ್ಘಾಟನೆ

2020ರ ಡಿಸೆಂಬರ್‌ 30 ರಂದು ಶ್ರೀ ಪರಮ್ ಹನ್ಸ್ ಮಹಾರಾಜ್ ದೇವಾಲಯವನ್ನು ಜಮೈತ್ ಉಲೆಮಾ ಎ ಇಸ್ಲಾಂ ಫಜ್ಲ್ ಮೂಲಭೂತವಾದಿ ಪಕ್ಷದ ಸದಸ್ಯರ ನೇತೃತ್ವದಲ್ಲಿ ಗುಂಪೊಂದು ಧ್ವಂಸಗೊಳಿಸಿ, ಬೆಂಕಿ ಹಚ್ಚಿತ್ತು.

- Advertisement -
- Advertisement -

ಕಳೆದ ವರ್ಷದ ಡಿಸೆಂಬರ್‌ನಲ್ಲಿ ಪಾಕಿಸ್ತಾನದ ಖೈಬರ್ ಪಾಖ್ತುನ್‌‌‌ಖ್ವಾ ಪ್ರಾಂತ್ಯದಲ್ಲಿ ಮೂಲಭೂತವಾದಿ ಮುಸ್ಲಿಮರಿಂದ ಧ್ವಂಸಗೊಂಡಿದ್ದ ಶತಮಾನಗಳಷ್ಟು ಹಳೆಯದಾದ ಹಿಂದೂ ದೇವಾಲಯವನ್ನು ಪುನರ್ ನಿರ್ಮಾಣ ಮಾಡಲಾಗಿದೆ. ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್‌ರವರು ನೂತನ ದೇವಾಲಯಗಳ ಉದ್ಘಾಟನೆ ನೆರವೇರಿಸಿದ್ದಾರೆ.

2020ರ ಡಿಸೆಂಬರ್‌ 30 ರಂದು ಶ್ರೀ ಪರಮ್ ಹನ್ಸ್ ಮಹಾರಾಜ್ ದೇವಾಲಯವನ್ನು ಜಮೈತ್ ಉಲೆಮಾ ಎ ಇಸ್ಲಾಂ ಫಜ್ಲ್ ಮೂಲಭೂತವಾದಿ ಪಕ್ಷದ ಸದಸ್ಯರ ನೇತೃತ್ವದಲ್ಲಿ ಗುಂಪೊಂದು ಧ್ವಂಸಗೊಳಿಸಿ, ಬೆಂಕಿ ಹಚ್ಚಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಪಾಕಿಸ್ತಾನ ಪೊಲೀಸರು 350 ಕ್ಕೂ ಹೆಚ್ಚು ಜನರ ಮೇಲೆ ಎಫ್‌ಐಆರ್‌ ದಾಖಲಿಸಿದ್ದು 55ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.

ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್ ದಾಳಿಯ ಬಗ್ಗೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿ, ಪ್ರಕರಣದ ವಿಚಾರಣೆ ನಡೆಸಿದ್ದರು. ದಾಳಿಯನ್ನು ತೀವ್ರವಾಗಿ ಖಂಡಿಸಿದ್ದ ಅವರು ಎರಡು ವಾರಗಳ ಅವಧಿಯಲ್ಲಿ ದೇವಾಲಯ ಪುನರ್‌ನಿರ್ಮಾಣಕ್ಕೆ ಮುಂದಾಗಬೇಕೆಂದು ಪ್ರಾಂತೀಯ ಸರ್ಕಾರಕ್ಕೆ ಆದೇಶಿಸಿದ್ದರು. ಈ ಘಟನೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನಕ್ಕೆ ಕೆಟ್ಟ ಹೆಸರು ತಂದಿದ್ದು ದಾಳಿಕೋರರಿಂದಲೇ ದೇವಾಲಯ ನಿರ್ಮಾಣದ ಹಣ ವಸೂಲಿ ಮಾಡಬೇಕೆಂದು ಮುಖ್ಯ ನ್ಯಾಯಮೂರ್ತಿಗಳು ಹೇಳಿದ್ದರು.

ಸೋಮವಾರ ನಡೆದ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಗುಲ್ಜಾರ್ ಅಹ್ಮದ್‌ ರವರು ಭಾಗವಹಿಸಿದ್ದರು. ದೀಪಾವಳಿ ಹಬ್ಬದೊಂದಿಗೆ ಅದ್ದೂರಿಯಾಗಿ ದೇವಾಲಯದಲ್ಲಿ ಪೂಜೆಗಳು ಜರುಗಿವೆ. ಪಾಕಿಸ್ತಾನದಲ್ಲಿರುವ ಹಿಂದೂ ಧರ್ಮೀಯರೊಂದಿಗೆ ಐಕ್ಯಮತ್ಯ ಘೋಷಿಸುತ್ತೇವೆ ಎಂದು ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದ್ದಾರೆ.

ಈ ವೇಳೆ ಮಾತನಾಡಿರುವ ಅವರು, “ಪಾಕಿಸ್ತಾನದ ಸುಪ್ರೀಂ ಕೋರ್ಟ್ ಯಾವಾಗಲೂ ಅಲ್ಪಸಂಖ್ಯಾತರರ ಹಕ್ಕುಗಳನ್ನು ರಕ್ಷಿಸುವ ಕ್ರಮಗಳನ್ನು ಕೈಗೊಂಡಿದೆ. ಮುಂದೆಯೂ ಅದನ್ನು ಕಾಪಾಡಲಿದೆ. ನಮ್ಮ ಸಂವಿಧಾನದ ಪ್ರಕಾರ ಹಿಂದೂಗಳು ಇತರ ಧರ್ಮೀಯರು ಹೊಂದಿರುವ ಎಲ್ಲಾ ಧಾರ್ಮಿಕ ಹಕ್ಕುಗಳನ್ನು ಹೊಂದಿದ್ದಾರೆ” ಎಂದಿದ್ದಾರೆ ಎಂದು ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಪಾಕಿಸ್ತಾನದಲ್ಲಿ ಮತ್ತೊಬ್ಬರ ಧಾರ್ಮಿಕ ಹಕ್ಕುಗಳ ಮೇಲೆ ದಾಳಿ ನಡೆಸುವ ಅಧಿಕಾರ ಯಾರಿಗೂ ಇಲ್ಲ. ಸುಪ್ರೀಂ ಕೋರ್ಟ್ ಎಲ್ಲಾ ಅಲ್ಪಸಂಖ್ಯಾತರ ಧಾರ್ಮಿಕ ಸ್ವಾತಂತ್ರ್ಯವನ್ನು ರಕ್ಷಿಸುತ್ತದೆ ಎಂದಿದ್ದಾರೆ.

ಈ ಸಂದರ್ಭದಲ್ಲಿ ಪಾಕಿಸ್ತಾನ್ ಹಿಂದೂ ಕೌನ್ಸಿಲ್ ಮತ್ತು ಹಿಂದೂ ಸಮುದಾಯದ ಭಕ್ತಾದಿಗಳು ಮುಖ್ಯ ನ್ಯಾಯಮೂರ್ತಿಗಳಿಗೆ ಪೇಟ ತೊಡಿಸಿ, ಡಿಜಿಟಲ್ ಕುರಾನ್ ಅನ್ನು ಉಡುಗೊರೆಯಾಗಿ ನೀಡಿ ಗೌರವಿಸಿದ್ದಾರೆ.

ಸರ್ಕಾರವು ಹಾನಿಗೊಳಗಾದ ದೇವಾಲಯ ಮತ್ತು ಸಮಾಧಿಯನ್ನು ಆದಷ್ಟು ಕಡಿಮೆ ಸಮಯದಲ್ಲಿ ಪುನರ್‌ ನಿರ್ಮಿಸುವುದಾಗಿ ಭರವಸೆ ನೀಡುತ್ತೇವೆ. ಪ್ರಾಂತ್ಯದಲ್ಲಿ ಧಾರ್ಮಿಕ ಸಹಿಷ್ಣುತೆಯನ್ನು ಕಾಪಾಡಲಾಗುವುದು ಎಂದು ಖೈಬರ್ ಪಾಖ್ತುನ್‌‌ಟ್ವಾ ಮುಖ್ಯಮಂತ್ರಿ ಮಹಮೂದ್ ಖಾನ್ ಈ ಹಿಂದೆ ಹೇಳಿದ್ದರು.


ಇದನ್ನೂ ಓದಿ: ಇರುಳಿಗರ ನೋವಿಗೆ ಕೊನೆ ಯಾವಾಗ? ವ್ಯಕ್ತಿ ಸಾವಿನ ಬಳಿಕ ಸ್ಥಳಕ್ಕೆ ಅಧಿಕಾರಿಗಳು ದೌಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...