Homeರಾಷ್ಟ್ರೀಯಅಸ್ಸಾಮಿ ಮುಸ್ಲಿಮರನ್ನು ‘ವಿಶಿಷ್ಟ ಗುಂಪು’ ಎಂದು ಗುರುತಿಸಲು ಶಿಫಾರಸು!

ಅಸ್ಸಾಮಿ ಮುಸ್ಲಿಮರನ್ನು ‘ವಿಶಿಷ್ಟ ಗುಂಪು’ ಎಂದು ಗುರುತಿಸಲು ಶಿಫಾರಸು!

- Advertisement -
- Advertisement -

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ರಚಿಸಿದ ಸಮಿತಿಯು ರಾಜ್ಯದಲ್ಲಿನ ‘ಅಸ್ಸಾಮಿ ಮುಸ್ಲಿಮರನ್ನು’ ಒಂದು ವಿಶಿಷ್ಟ ಗುಂಪು ಎಂದು ಗುರುತಿಸಲು ಶಿಫಾರಸು ಮಾಡಿದೆ. ಕಳೆದ ಜುಲೈನಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಮುದಾಯದ ಸಾಮಾಜಿಕ-ಆರ್ಥಿಕ ಸಮಸ್ಯೆಗಳನ್ನು ಚರ್ಚಿಸಲು ವಿವಿಧ ಕ್ಷೇತ್ರಗಳ ಅಸ್ಸಾಮಿ ಮುಸ್ಲಿಂ ಸಮುದಾಯದ ಪ್ರತಿನಿಧಿಗಳನ್ನು ಭೇಟಿ ಮಾಡಿದ ನಂತರ ಈ ಸಮಿತಿಯನ್ನು ರಚಿಸಲಾಗಿತ್ತು. ಏಳು ಉಪಸಮಿತಿಗಳಾಗಿ ವಿಂಗಡಣೆಯಾದ ಸಮಿತಿಯು ತಿಂಗಳುಗಟ್ಟಲೆ ಚರ್ಚೆ ನಡೆಸಿ ಗುರುವಾರ ವರದಿ ಸಲ್ಲಿಸಿದೆ.

ಅಸ್ಸಾಮಿ ಮುಸ್ಲಿಮರಿಗೆ ಗುರುತಿನ ಕಾರ್ಡ್‌ಗಳನ್ನು ನೀಡುವುದರ ಜೊತೆಗೆ ಸಮುದಾಯವನ್ನು ‘ಗುರುತಿಸಲು ಮತ್ತು ದಾಖಲಿಸಲು’ ಜನಗಣತಿಯನ್ನು ನಡೆಸುವಂತೆ ಸಮಿತಿಯು ಸಲಹೆಗಳನ್ನು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಥಳೀಯ ಅಸ್ಸಾಮಿ ಮುಸ್ಲಿಂ ಸಮುದಾಯದಲ್ಲಿ ಮೂರು ಪ್ರಮುಖ ಗುಂಪುಗಲಿವೆ: ಗೋರಿಯಾಗಳು, ಮೊರಿಯಾಗಳು (ಉತ್ತರ ಅಸ್ಸಾಂನಿಂದ) ಮತ್ತು ದೇಶಿಗಳು (ದಕ್ಷಿಣ ಅಸ್ಸಾಂನಿಂದ).

ಇದನ್ನೂ ಓದಿ: ಅಸ್ಸಾಂ: ನಿರುದ್ಯೋಗದ ಬಗ್ಗೆ ಮಾತನಾಡಿ ಸದನದಿಂದ ಅಮಾನತುಗೊಂಡ ಶಾಸಕ ಅಖಿಲ್ ಗೊಗೊಯ್ 

ದೇಶಿಗಳು 13ನೇ ಶತಮಾನದ ಕೋಚ್ ರಾಜ್‌ಬೊಂಗ್‌ಶಿ ಮತ್ತು ಮೆಚ್‌ನಂತಹ ಸ್ಥಳೀಯ ಬುಡಕಟ್ಟು ಸಮುದಾಯಗಳಿಂದ ಮತಾಂತರಗೊಂಡವರಾಗಿದ್ದಾರೆ. ಗೋರಿಯಾಗಳು ಮತ್ತು ಮೊರಿಯಾಗಳು ತಮ್ಮ ವಂಶಾವಳಿಯನ್ನು ಅಹೋಮ್ ಆಳ್ವಿಕೆಯ ಸಮಯದಲ್ಲಿ ಈ ಪ್ರದೇಶಕ್ಕೆ ಬಂದ ಸೈನಿಕರು, ಕುಶಲಕರ್ಮಿಗಳು ಸೇರಿದಂತೆ ಇತ್ಯಾದಿ ಸಮುದಾಯಗಳಿಂದ ಗುರುತಿಸುತ್ತಾರೆ. ಜುಲ್ಹಾ ಮುಸಲ್ಮಾನರಂತಹ ಸಣ್ಣ ಗುಂಪುಗಳೂ ಈ ವರ್ಗಕ್ಕೆ ಸೇರುತ್ತವೆ.

ಈ ಗುಂಪುಗಳು ಪೂರ್ವ ಬಂಗಾಳ ಅಥವಾ ಬಾಂಗ್ಲಾದೇಶದಿಂದ ವಲಸೆ ಬಂದ ಬಂಗಾಳಿ-ಮಾತನಾಡುವ ಮುಸ್ಲಿಮರಿಂದ ತಮ್ಮನ್ನು ತಾವು ಭಿನ್ನವೆಂದು ಪರಿಗಣಿಸುತ್ತವೆ.

ಗುರುವಾರ ವರದಿಯನ್ನು ಅಂಗೀಕರಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಎಲ್ಲಾ ಶಿಫಾರಸುಗಳನ್ನು ಹಂತವಾರು ರೀತಿಯಲ್ಲಿ ಅನುಷ್ಠಾನಗೊಳಿಸಬಹುದು ಎಂದು ಹೇಳಿದ್ದಾರೆ. ‘ನಾವು ಅವುಗಳನ್ನು ಅಲ್ಪಾವಧಿ, ಮಧ್ಯಮ ಮತ್ತು ದೀರ್ಘಾವಧಿ ಎಂದು ವರ್ಗೀಕರಿಸಬಹುದು’ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ವಿಸ್ ರಿವಾಲ್ವರ್ ಬಳಸಿ ಗರ್ಭಿಣಿ ಪತ್ನಿಯ ಹತ್ಯೆಗೈದ ಅಸ್ಸಾಂ ಪೊಲೀಸ್‌ ಪೇದೆ, ಬಂಧನ

ಸಮಿತಿಯು ವರದಿಯಲ್ಲಿ ಅಸ್ಸಾಮಿ ಮುಸ್ಲಿಮರ ವ್ಯಾಖ್ಯಾನವನ್ನು ಮುಂದಿಟ್ಟಿದೆ ಎಂದು ಅವರು ಹೇಳಿದ್ದಾರೆ. “ನಾವು ಸಮಿತಿ ನೀಡಿರುವ ವ್ಯಾಖ್ಯಾನವನ್ನು ಒಪ್ಪಿಕೊಂಡಿದ್ದೇವೆ…ಯಾವ ಗುಂಪಿಗೆ ಏನು ಕೆಲಸ ಮಾಡಬೇಕಾಗಿದೆ ಎಂದು ನಮ್ಮ ಗುರಿ ಸ್ಪಷ್ಟವಾಗಿರುತ್ತದೆ” ಎಂದು ಅವರು ಹೇಳಿದ್ದಾರೆ.

ನಮ್ಮ ಮುಂದಿನ ಹಂತವು ಈ ಗುಂಪುಗಳಿಗೆ, ಶಾಸಕಾಂಗದ ಕಾರ್ಯವಿಧಾನಗಳು, ಆಡಳಿತಾತ್ಮಕ ನಿರ್ಧಾರಗಳು ಮತ್ತು ಹಣಕಾಸಿನ ಬೆಂಬಲ ಒಳಗೊಂಡಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಸಮುದಾಯದ ಗುರುತಿನ ಹೊರತಾಗಿಯು, ಗುಂಪಿಗೆ ಹೆಚ್ಚಿನ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ತನ್ನ ವರದಿಯಲ್ಲಿ ಹೇಳಲಾಗಿದೆ. “ಸಂಸತ್ತು ಮತ್ತು ಅಸ್ಸಾಂ ವಿಧಾನಸಭೆಯಲ್ಲಿ ಅಸ್ಸಾಮಿ ಮುಸ್ಲಿಮರಿಗೆ ಪ್ರಾತಿನಿಧ್ಯವನ್ನು ಒದಗಿಸಲು ಸಂವಿಧಾನದ 333 ನೇ ವಿಧಿಯಂತೆಯೇ ಒಂದು ವಿಧಿಗೆ ಅದು ಕರೆ ನೀಡಿದೆ.

ಇದನ್ನೂ ಓದಿ: 10ನೇ ತರಗತಿವರೆಗೆ ಹಿಂದಿ ಕಡ್ಡಾಯಕ್ಕೆ ಅಮಿತ್ ಶಾ ಪ್ರಸ್ತಾಪ: ಪ್ರತಿಭಟನೆ ಎಚ್ಚರಿಕೆ ನೀಡಿದ ಅಸ್ಸಾಂ ವಿದ್ಯಾರ್ಥಿಗಳು

“ಭಾರತೀಯ ಸಂವಿಧಾನದ 169 ನೇ ವಿಧಿಯ ಪ್ರಕಾರ ಅಸ್ಸಾಂನಲ್ಲಿ ಮೇಲ್ಮನೆ (ವಿಧಾನ ಪರಿಷತ್ತು) ರಚಿಸಬಹುದು. ಲೆಜಿಸ್ಲೇಟಿವ್ ಕೌನ್ಸಿಲ್ ರಚನೆಯಾದ ನಂತರ, ಈ ಕೌನ್ಸಿಲ್‌ನಲ್ಲಿ ಅಸ್ಸಾಮಿ ಮುಸ್ಲಿಂ ಸಮುದಾಯಕ್ಕೆ ನಿರ್ದಿಷ್ಟ ಸಂಖ್ಯೆಯ ಸ್ಥಾನಗಳನ್ನು ಮೀಸಲಿಡಬಹುದು” ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ.

ಶಿಕ್ಷಣ, ರಾಜಕೀಯ ಪ್ರಾತಿನಿಧ್ಯ, ಆರೋಗ್ಯ, ಕೌಶಲ್ಯಾಭಿವೃದ್ಧಿ ಮತ್ತು ಮಹಿಳಾ ಸಬಲೀಕರಣಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ವರದಿಯು ಸಲಹೆಗಳನ್ನು ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...