Homeಕರ್ನಾಟಕಪದವೀಧರ ಭಾಷ ಶಿಕ್ಷಕರ ನೇಮಕಾತಿ: ಪದವಿಯಲ್ಲಿ ಆಂಗ್ಲಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದವರಿಗೂ ಅವಕಾಶ ನೀಡಲು ಒತ್ತಾಯ

ಪದವೀಧರ ಭಾಷ ಶಿಕ್ಷಕರ ನೇಮಕಾತಿ: ಪದವಿಯಲ್ಲಿ ಆಂಗ್ಲಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದವರಿಗೂ ಅವಕಾಶ ನೀಡಲು ಒತ್ತಾಯ

- Advertisement -
- Advertisement -

ಪದವೀಧರ ಭಾಷ ಶಿಕ್ಷಕರ ನೇಮಕಾತಿಗೆ ಸಂಭವಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ರಾಜ್ಯ ಗ್ಯಾಸೆಟಿಯರ್‌ನಲ್ಲಿ ಪ್ರಕಟಿಸಿರುವ ನೇಮಕಾತಿ ನಿಯಮಾವಳಿಯಲ್ಲಿ ಬದಲಾವಣೆ ಮಾಡಿ ಆಂಗ್ಲ ಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದವರಿಗೂ ಶಿಕ್ಷಕರ ಹುದ್ದೆಗೆ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.

ಪದವಿಯಲ್ಲಿ ಸಮಾಜಶಾಸ್ತ್ರ ಮತ್ತು ಆಂಗ್ಲ ಭಾಷೆಯನ್ನು ಐಚ್ಚಿಕ ವಿಷಯವಾಗಿ ಅಭ್ಯಾಸಿಸಿದ ಅಭ್ಯರ್ಥಿಗಳು
ಪದವೀಧರ ಪ್ರಾಥಮಿಕ ಸಮಾಜ ವಿಜ್ಞಾನ ಶಿಕ್ಷಕರ ಹುದ್ದೆಗೆ ಸ್ಪರ್ಧಿಸಲು ಅರ್ಹರಾಗಿದ್ದಾರೆ. ಆದರೆ ಪದವೀಧರ ಪ್ರಾಥಮಿಕ ಆಂಗ್ಲ ಭಾಷೆ ಶಿಕ್ಷಕರ ಹುದ್ದೆಗೆ ಸ್ಪರ್ಧಿಸಲು ಅರ್ಹರಲ್ಲ ಎಂಬುದನ್ನು ಸುತ್ತೋಲೆಯಿಂದ ತೆಗೆಯಬೇಕು. ಅವರಿಗೂ ಶಿಕ್ಷಕ ಹುದ್ದೆಗೆ ಸ್ಪರ್ಧಿಸಲು ಅವಕಾಶ ನೀಡಿ ತಿದ್ದುಪಡಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

“ಭಾಷಾ ವಿಷಯಗಳನ್ನು ಹೊರತುಪಡಿಸಿ ಐಚ್ಚಿಕ ವಿಷಯವಾಗಿ 3 ವರ್ಷಗಳ ಪದವಿಯಲ್ಲಿ ಕನ್ನಡ/ಆಂಗ್ಲ/ಹಿಂದಿ/ಮರಾಠಿ/ಇತಿಹಾಸ/ಅರ್ಥಶಾಸ್ತ್ರ/ರಾಜ್ಯಶಾಸ್ತ್ರ/ಭೌಗೋಳಿಕ ವಿಷಯಗಳನ್ನು ಅಭ್ಯಾಸ ಮಾಡಿರಬೇಕು” ಎಂದು GPSTRನ ಹೊಸ C&R ನಿಯಮಾವಳಿಯಲ್ಲಿ ಪ್ರಕಟವಾಗಿದ್ದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಅಘಾತವಾಗಿದೆ” ಎಂದು ಉದ್ಯೋಗಾಕಾಂಕ್ಷಿ ಮೋಹನರಾಜ ಜಿ. ಹೇಳಿದ್ದಾರೆ.

ಇದನ್ನೂ ಓದಿ: 5 ವರ್ಷಗಳ ಕಾನೂನು ಪದವಿಯ 2 & 4ನೇ ಸೆಮಿಸ್ಟರ್‌ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿಗಳು

“ಅಷ್ಟೆ ಅಲ್ಲದೆ ಪದವಿಯಲ್ಲಿ ಸಮಾಜಶಾಸ್ತ್ರ ಮತ್ತು ಆಂಗ್ಲವನ್ನು ಐಚ್ಚಿಕ ವಿಷಯವಾಗಿ ಓದಿದದವರು ಪದವೀಧರ ಪ್ರಾಥಮಿಕ ಸಮಾಜ ವಿಜ್ಞಾನ ಶಿಕ್ಷಕ ಹುದ್ದೆಗೆ ಅರ್ಹರು. ಆದರೆ ಆಂಗ್ಲ ಶಿಕ್ಷಕರಾಗಲು ಅರ್ಹರಲ್ಲ ಎಂಬ ಅವೈಜ್ಞಾನಿಕ ನಿಯಮ ಪ್ರಾಥಮಿಕ ಶಾಲೆಗಳು ಆಂಗ್ಲ ಶಿಕ್ಷಕರ ಕೊರತೆ ಎದುರಿಸಲು ಮುಖ್ಯ ಕಾರಣ. ಈ ಅವೈಜ್ಞಾನಿಕ ನಿಯಮವನ್ನು ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಮುಂದಾಗುವ ಮೊದಲೆ ಸಮಾಜಶಾಸ್ತ್ರ ಮತ್ತು ಆಂಗ್ಲ ವನ್ನು ಪದವಿಯಲ್ಲಿ ಅಭ್ಯಾಸಿಸಿದವರಿಗೆ ಪ್ರಾಥಮಿಕ ಆಂಗ್ಲ-ಭಾಷೆ ಶಿಕ್ಷಕ ಹುದ್ದೆಯ ಆರ್ಹರೆಂದು ಪರಿಗಣಿಸಿ ತಿದ್ದುಪಡಿ ಮಾಡಬೇಕು” ಎಂದು ಮೋಹನರಾಜ್ ಮನವಿ ಮಾಡಿದ್ದಾರೆ.

“ತಮ್ಮ 3 ವರ್ಷದ ಪದವಿಯಲ್ಲಿ ಐಚ್ಚಿಕ ವಿಷಯವಾಗಿ ಆಂಗ್ಲಭಾಷೆಯ ಜೊತೆಗೆ ಸಮಾಜಶಾಸ್ತ್ರ/ ಮನೋವಿಜ್ಞಾನ/ ಶಿಕ್ಷಣ/ಪತ್ರಿಕೋದ್ಯಮ ಅಭ್ಯಾಸಿದ ಲಕ್ಷಾಂತರ ವಿದ್ಯಾರ್ಥಿಗಳು ಇದ್ದು ಟಿಇಟಿ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದಿರುತ್ತಾರೆ. ಇಂತಹ ಅಭ್ಯರ್ಥಿಗಳಿಗೆ ಪದವಿ ಭಾಷಾ ಶಿಕ್ಷಕರ ನೇಮಕಾತಿ ಪರೀಕ್ಷೆಯನ್ನು ಬರೆಯಲು ಇಲಾಖಾ ನೇಮಾಕಾತಿ ನಿಯಮಗಳಲ್ಲಿ ಅವಕಾಶ ಸಿಗದೆ ಅವಕಾಶ ವಂಚಿತರಾಗುತ್ತಿದ್ದು. ಹಲವು ಬಾರಿ ಶಿಕ್ಷಣ ಸಚಿವರನ್ನು ಭೇಟಿಯಾಗಿ ಗಮನಕ್ಕೆ ತಂದಿದ್ದು ಶಿಕ್ಷಣ ಸಚಿವರು ಬದಲಾವಣೆ ಮಾಡುವ ಭರವಸೆ ನೀಡಿಯು ಕೂಡ ಯಾವುದೆ ಬದಲಾವಣೆಯಾಗಿಲ್ಲ. ಇದರಿಂದ ಲಕ್ಷಾಂತರ ಆಕಾಂಕ್ಷಿಗಳ ಪದವಿ ಮತ್ತು ತರಬೇತಿ ಪ್ರಯೋಜನಕ್ಕೆ ಬಾರದಂತಾಗಿದೆ” ಎಂದು ಅಳಲು ತೋಡಿಕೊಂಡಿದ್ದಾರೆ.

ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಪದವೀಧರ ಭಾಷ ಶಿಕ್ಷಕರ ನೇಮಕಾತಿ ನಿಯಮನಾವಳಿಗೆ ಮರುಪರಿಶೀಲನೆ ಮಾಡಿ ತಿದ್ದುಪಡಿ ತಂದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಪ್ರಯೋಜನವಾಗುವಂತೆ ಮಾಡಬೇಕು. 3 ವರ್ಷದ ಪದವಿಯಲ್ಲಿ ಐಚ್ಚಿಕ ವಿಷಯವಾಗಿ ಆಂಗ್ಲ ಭಾಷೆಯ ಜೊತೆಗೆ ಸಮಾಜಶಾಸ್ತ್ರ/ಮನೋವಿಜ್ಞಾನ/ಶಿಕ್ಷಣ/ಪತ್ರಿಕೋದ್ಯಮ ಅಭ್ಯಾಸ ಮಾಡಿದವರಿಗು ಅವಕಾಶ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...