Homeಮುಖಪುಟಛತ್ತೀಸ್‌ಗಢದಲ್ಲಿ ಡಿಸಿಎಂ ನೇಮಕ; ಚುನಾವಣೆಯ ಹೊಸ್ತಿಲಲ್ಲಿ ಬಘೇಲ್-ದೇವ್ ತಿಕ್ಕಾಟಕ್ಕೆ ಕಾಂಗ್ರೆಸ್ ತೆರೆ

ಛತ್ತೀಸ್‌ಗಢದಲ್ಲಿ ಡಿಸಿಎಂ ನೇಮಕ; ಚುನಾವಣೆಯ ಹೊಸ್ತಿಲಲ್ಲಿ ಬಘೇಲ್-ದೇವ್ ತಿಕ್ಕಾಟಕ್ಕೆ ಕಾಂಗ್ರೆಸ್ ತೆರೆ

- Advertisement -
- Advertisement -

ಛತ್ತೀಸ್‌ಗಢದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳಿರುವಾಗ ಸಚಿವ ಟಿಎಸ್ ಸಿಂಗ್ ದೇವ್ ಅವರನ್ನು ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಬುಧವಾರ ನೇಮಕ ಮಾಡಿದೆ.

ಛತ್ತೀಸ್‌ಗಢದಲ್ಲಿ ಚುನಾವಣಾ ಕಾರ್ಯತಂತ್ರದ ಕುರಿತು ಚರ್ಚಿಸಲು ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕತ್ವದ ಸಭೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಾಘೇಲ್, ರಾಜ್ಯದ ಕಾಂಗ್ರೆಸ್ ಉಸ್ತುವಾರಿ ಅಧಿಕಾರಿ ಕುಮಾರಿ ಸೆಲ್ಜಾ, ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಟಿಎಸ್ ಸಿಂಗ್ ದೇವ್, ಉಪಸ್ಥಿತರಿದ್ದರು.

ಛತ್ತೀಸಗಢ ವಿಧಾನಸಭೆಗೆ ಈ ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿದ್ದು, ಕಾರ್ಯತಂತ್ರ ಸಭೆ ಸಲುವಾಗಿ ಈ ಇಬ್ಬರೂ ದೆಹಲಿಗೆ ಆಗಮಿಸಿದ್ದರು. ಸಭೆ ಬಳಿಕ ಉಭಯ ನಾಯಕರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ.

ಪಕ್ಷವು 2018ರಲ್ಲಿ ಅಧಿಕಾರಕ್ಕೇರಿದಾಗಿನಿಂದಲೂ ಮುಖ್ಯಮಂತ್ರಿ ಭೂಪೇಶ್ ಬಫೇಲ್ ಮತ್ತು ಸಿಂಗ್ ಡಿಯೊ ನಡುವೆ ಅಧಿಕ್ಕಾರಕ್ಕಾಗಿ ತಿಕ್ಕಾಟ ನಡೆಯುತ್ತಿದೆ.

ಭೂಪೇಶ್ ಬಘೇಲ್ ಮತ್ತು ತಮ್ಮ ನಡುವೆ ಅಧಿಕಾರ ಹಂಚಿಕೆಯಾಗಲಿದೆ ಎಂದು ಪಕ್ಷದ ನಾಯಕರು ಭರವಸೆ ನೀಡಿರುವುದಾಗಿ ಸಿಂಗ್ ಡಿಯೊ ಈ ಹಿಂದೆ ಹೇಳಿಕೆ ನೀಡಿದ್ದರು. ಅದನ್ನು ಭೂಪೇಶ್ ಬಘೇಲ್ ತಿರಸ್ಕರಿಸಿದ್ದರು. ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಸರತ್ತು ಆರಂಭಿಸಿದ್ದ ಸಿಂಗ್ ಡಿಯೊ, ಆಪ್ತ ಶಾಸಕರೊಂದಿಗೆ ಹೈಕಮಾಂಡ್ ಬಳಿ ತೆರಳಿ ಪ್ರಯತ್ನ ನಡೆಸಿದ್ದರು.

ಸಿಂಗ್ ಡಿಯೊ ಜೊತೆಗಿನ ಚಿತ್ರವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಭೂಪೇಶ್ ಬಘೇಲ್, ‘ನಾವು (ಚುನಾವಣೆಗೆ) ತಯಾರಾಗಿದ್ದೇವೆ. ಉಪಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡ ಮಹಾರಾಜ್ ಸಾಹೆಬ್ ಅವರಿಗೆ ಅಭಿನಂದನೆ ಮತ್ತು ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.

ದೇವು ಅವರನ್ನು ಉಪಮುಖ್ಯಮಂತ್ರಿ ಮಾಡುವುದರಿಂದ ಛತ್ತೀಸ್‌ಗಢಕ್ಕೆ ಹೆಚ್ಚಿನ ಲಾಭವಾಗಲಿದೆ ಎಂದು ವೇಣುಗೋಪಾಲ್ ಬುಧವಾರ ಹೇಳಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ‘ಅವರು (ಸಿಂಗ್ ಡಿಯೊ) ಕಾಂಗ್ರೆಸ್‌ನ ನಿಷ್ಠಾವಂತ ನಾಯಕ ಮತ್ತು ಸಮರ್ಥ ಆಡಳಿತಗಾರ. ಉಪ ಮುಖ್ಯಮಂತ್ರಿಯಾಗಿ ಅವರ ಸೇವೆಯನ್ನು ರಾಜ್ಯವು ಮತ್ತಷ್ಟು ಪಡೆಯಲಿದೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಬಹುಮತ ನೀಡುವ ಮೂಲಕ ಛತ್ತೀಸಗಢದ ಜನರು ಮತ್ತೊಮ್ಮೆ ಕಾಂಗ್ರೆಸ್‌ಗೆ ಅಧಿಕಾರ ನೀಡಲಿದ್ದಾರೆ ಎಂಬ ವಿಶ್ವಾಸದಲ್ಲಿದ್ದೇವೆ’ ಎಂದು ಟ್ವಿಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...