Homeಮುಖಪುಟಕೆಂಪು ಕೋಟೆ ದಾಂಧಲೆ ಪ್ರಕರಣ: ಆರೋಪಿ ದೀಪ್ ಸಿಧು ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್

ಕೆಂಪು ಕೋಟೆ ದಾಂಧಲೆ ಪ್ರಕರಣ: ಆರೋಪಿ ದೀಪ್ ಸಿಧು ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್

- Advertisement -
- Advertisement -

ಕಳೆದ ಗಣರಾಜ್ಯೋತ್ಸವದಂದು ಕೆಂಪು ಕೋಟೆ ಬಳಿ ನಡೆದ ದಾಂಧಲೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ನಟ ದೀಪ್ ಸಿಧು ಅವರ ಜಾಮೀನು ಅರ್ಜಿಯ ಕುರಿತ ಆದೇಶವನ್ನು ದೆಹಲಿ ನ್ಯಾಯಾಲಯ ಸೋಮವಾರ ಕಾಯ್ದಿರಿಸಿದೆ.

ವಿಶೇಷ ನ್ಯಾಯಾಧೀಶ ನೀಲೋಫರ್ ಅಬಿದಾ ಪರ್ವೀನ್ ಮಾತನಾಡಿ, ಸಿಧು ಅವರ ಜಾಮೀನು ಅರ್ಜಿಯ ಆದೇಶವನ್ನು ಏಪ್ರಿಲ್ 15 ರಂದು ಘೋಷಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: ಕೆಂಪು ಕೋಟೆಯಲ್ಲಿ ಧ್ವಜ ಹಾರಾಟ – ಸುಳ್ಳು ಸುದ್ದಿ ಹರಡುತ್ತಿರುವ ಬಿಜೆಪಿ ಮತ್ತು ಮಾಧ್ಯಮಗಳು: ಭಾರಿ ಆಕ್ರೋಶ

ಕೇವಲ ಅಲ್ಲಿ ಅವರು ಉಪಸ್ಥಿತರಿದ್ದ ಮಾತ್ರಕ್ಕೆ ಅವರು ಕಾನೂನುಬಾಹಿರ ಘಟನೆ ಭಾಗವಾಗಲು ಸಾಧ್ಯವಿಲ್ಲ. ಅವರು ರೈತ ಪ್ರತಿಭಟನೆಯ ಭಾಗವಾಗಿದ್ದ ಪ್ರಾಮಾಣಿಕ ಪ್ರಜೆ ಎಂದು ಸಿಧು ಅವರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ದೆಹಲಿ ಪೊಲೀಸರನ್ನು ಪ್ರತಿನಿಧಿಸುವ ಪಬ್ಲಿಕ್ ಪ್ರಾಸಿಕ್ಯೂಟರ್, ಸಿಧು ಹಿಂಸಾಚಾರವನ್ನುಉಂಟುಮಾಡಲು ಮತ್ತು ರಾಷ್ಟ್ರಧ್ವಜವನ್ನು ಕಡೆಗಣಿಸುವ ಉದ್ದೇಶದಿಂದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಜೊತೆಗೆ ಕಾನೂನುಬಾಹಿರ ಸಭೆಯ ಮುಖ್ಯ ಪ್ರಚೋದಕ ಅವರೆ ಆಗಿದ್ದಾರೆ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಕೇಂದ್ರದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರ ಟ್ರಾಕ್ಟರ್ ಮೆರವಣಿಗೆಯಲ್ಲಿ ಅಹಿತಕರ ಘಟನೆ ನಡೆಸಿತ್ತು. ಈ ವೇಳೆ ರೈತರ ಗುಂಪೊಂದು ಕೆಂಪು ಕೋಟೆಗೆ ನುಗ್ಗಿ ದಾಂಧಲೆ ಮಾಡಿದ್ದರು. ಈ ಪ್ರಕರಣಕ್ಕೆ  ಸಂಬಂಧಿಸಿದಂತೆ ಫೆಬ್ರವರಿ 9 ರಂದು ದೀಪ್‌ ಸಿಧು ಅವರನ್ನು ಬಂಧಿಸಲಾಯಿತು.

ಇದನ್ನೂ ಓದಿ: ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳು: ಕೆಂಪುಕೋಟೆಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಕೆಳಗಿಳಿಸಲಾಗಿಲ್ಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...