Homeಕರ್ನಾಟಕಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್‌ ಕಡಿತ: ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್‌ ಕಡಿತ: ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಹತ್ತಿಕ್ಕುವುದರ ಜೊತೆಗೆ, ಮನುಸ್ಮೃತಿಯ ಆಶಯವನ್ನು ಗಟ್ಟಿಗೊಳಿಸುವುದು ಈ ಸರ್ಕಾರಗಳ ಗುರಿಯಾಗಿದೆ ಎಂದು ವಿದ್ಯಾರ್ಥಿ ಸಂಘಟನೆಗಳು ಕಿಡಿಕಾರಿವೆ.

- Advertisement -
- Advertisement -

ಪಿಎಚ್‌ಡಿ ಹಾಗು ಎಂಫಿಲ್ ಅಧ್ಯಯನ ಕೈಗೊಳ್ಳುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು ರಾಜ್ಯ ಅಲ್ಪಸಂಖ್ಯಾತ ಇಲಾಖೆ ಕಡಿತಗೊಳಿಸಿ ಆದೇಶ ಹೊರಡಿಸಿರುವುಕ್ಕೆ ಹಲವಾರು ವಿದ್ಯಾರ್ಥಿ ಸಂಘಟನೆ ಸೇರಿದಂತೆ, ರಾಜಕೀಯ ಪಕ್ಷಗಳು ವಿರೋಧಿಸಿದ್ದು ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಗಳೊಂದಿಗೆ ತಮ್ಮ ಹಕ್ಕುಗಳನ್ನು ಕೇಳುತ್ತಿರುವ ಸಮುದಾಯಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವುದೆ ಈ ಸರ್ಕಾರದ ಹುನ್ನಾರವಾಗಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ(KVS)ಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ ಆಕ್ರೋಶ ವ್ಯಕ್ತಪಡಿಸಿದ್ದು, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಫೆಲೋಶಿಪ್‌ ಅನ್ನು ಕಡಿತಗೊಳಿಸಿ ಹೊಡಿಸಿರುವ ಆದೇಶವನ್ನು ಹಿಂಪಡೆದು ಇನ್ನೂ ಹೆಚ್ಚಿನ ನೆರವನ್ನು ಸರ್ಕಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

“ಹೊಸ ಶಿಕ್ಷಣ ನೀತಿ ಸೇರಿದಂತೆ ಸರ್ಕಾರದ ಇತ್ತೀಚೆಗಿನ ಬೆಳವಣಿಗೆಯನ್ನು ನೋಡಿದರೆ ಶಿಕ್ಷಣದಿಂದ ಅಲ್ಪಸಂಖ್ಯಾತ ಹಾಗೂ ದಲಿತ ವಿದ್ಯಾರ್ಥಿಗಳನ್ನು ದೂರ ಇಡುವ ಎಲ್ಲಾ ಹುನ್ನಾರಗಳನ್ನು ಮಾಡುತ್ತಿದೆ. ರಾಜ್ಯ ಸರ್ಕಾರದ ಸಾಮಾಜ ಕಲ್ಯಾಣ ಇಲಾಖೆಯಲ್ಲಿ 19 ಸಾವಿರ ಕೋಟಿ ಉಳಿದಿದ್ದು ಅದನ್ನು ಬೇರೆ ಇಲಾಖೆಗೆ ವರ್ಗಾಯಿಸಲು ಹೊರಟಿದ್ದಾರೆ. ಅದೇ ಸಮಯದಲ್ಲಿ ದಲಿತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಲ್ಯಾಪ್‌ಟಾಪ್ ನಿಲ್ಲಿಸಿದ್ದಾರೆ, ಸ್ಕಾಲರ್‌ಶಿಪ್‌ಗಳನ್ನು ಕಡಿಮೆ ಮಾಡುತ್ತಿದ್ದಾರೆ. ಇವೆಲ್ಲವೂ ಈ ಹುನ್ನಾರದ ಭಾಗವೆ ಆಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಪಿಎಚ್‌‌ಡಿ, ಎಂಫಿಲ್ ಫೆಲೋಶಿಪ್ ಕಡಿತಗೊಳಿಸಿದ ಸರ್ಕಾರ!

“ಶಿಕ್ಷಣ ಪಡೆದುಕೊಂಡಿರುವ ದಲಿತ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಪ್ರಶ್ನೆ ಹಾಗೂ ಧ್ವನಿ ಎತ್ತುತ್ತಿದ್ದಾರೆ. ಇದಕ್ಕೆ ಸರಿಯಾದ ಉದಾಹರಣೆ ಜಾಮಿಯಾ ಮತ್ತು ಜೆಎನ್‌‌ಯು ಆಗಿದೆ. ಆದ್ದರಿಂದಲೇ ಇವರು ಈ ವಿಶ್ವವಿದ್ಯಾನಿಲಯಗಳನ್ನು ಗುರಿಯಾಗಿಸುತ್ತಿದ್ದಾರೆ. ಇಲ್ಲಿ ಅಧ್ಯಯನ ಮಾಡುತ್ತಿರುವ ಬಡ ಹಿನ್ನಲೆಯಲ್ಲಿರುವ ವಿದ್ಯಾರ್ಥಿಗಳು ಶಿಕ್ಷಿತರಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದಾರೆ. ಇಂತಹ ವಿದ್ಯಾರ್ಥಿಗಳನ್ನು ಹತ್ತಿಕ್ಕುವುದರ ಜೊತೆಗೆ, ಮನುಸ್ಮೃತಿಯ ಆಶಯವನ್ನು ಗಟ್ಟಿಗೊಳಿಸುವುದು ಈ ಸರ್ಕಾರಗಳ ಗುರಿಯಾಗಿದೆ” ಎಂದು ಸರೋವರ್‌ ಬೆಂಕಿಕೆರೆ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರ ಬಂದ ನಂತರದಲ್ಲಿ ವಿದ್ಯಾರ್ಥಿಗಳ ಹಕ್ಕುಗಳನ್ನು ದಮನ ಮಾಡುತ್ತಿರುವುದಲ್ಲದೆ ಅವರಿಗೆ ಸಿಗಬೇಕಾದ ಶೈಕ್ಷಣಿಕ ಪ್ರೋತ್ಸಾಹ ಧನವನ್ನೂ ಕಡಿತಗೊಳಿಸುತ್ತಿದೆ ಎಂದು ವಿದ್ಯಾರ್ಥಿ ಸಂಘಟನೆಯಾಗಿರುವ SFI ಹೇಳಿದ್ದು, “ಕಳೆದ 10 ತಿಂಗಳಿನಿಂದ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಫೆಲೋಶಿಪ್ ಹಣವನ್ನು ವಿದ್ಯಾರ್ಥಿಗಳಿಗೆ ತಲುಪಿಸಲು ಸರ್ಕಾರ ವಿಫಲವಾಗಿದೆ. ಈಗ ಏಕಾಏಕಿ ವರ್ಷಕ್ಕೆ ಒಂದು ಲಕ್ಷ ಮಾತ್ರ ನೀಡಲಾಗುವುದು ಎಂಬ ಸುತ್ತೋಲೆ ಹೊರಡಿಸಿರುವುದು ವಿದ್ಯಾರ್ಥಿಗಳಿಗೆ ಆತಂಕ ಉಂಟುಮಾಡಿದೆ” ಎಂದಿದೆ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಲ್ಲಿ ಬಹಳ ಕಡಿಮೆ ಸಂಖ್ಯೆಯಲ್ಲಿದ್ದಾರೆ ರಾಜಕೀಯವಾಗಿ ಆರ್ಥಿಕವಾಗಿ ಸಾಮಾಜಿಕವಾಗಿ ಅವರನ್ನು ತುಳಿತಕ್ಕೆ ಒಳಪಡಿಸಿದಷ್ಟೇ ಅಲ್ಲದೇ, ಈಗ ಶೈಕ್ಷಣಿಕವಾಗಿಯೂ ಅವರನ್ನು ವಂಚಿಸುವ, ದುರ್ಬಲರನ್ನಾಗಿ ಮಾಡುವ ನಡೆ ಇದು ಎಂದಿರುವ SFI, “ಈ ಕೂಡಲೇ ಈ ವಿದ್ಯಾರ್ಥಿ ವಿರೋಧಿ ನೀತಿಗಳನ್ನು ಕೈ ಬಿಡಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾದ ಆರ್ಥಿಕ ಯೋಜನೆಗಳನ್ನು ಮುಂದುವರೆಸಬೇಕು” ಎಂದು ಅದು ಒತ್ತಾಯಿಸಿದೆ.

ಇದನ್ನೂ ಓದಿ: ನಾಸಾ ಹ್ಯೂಮನ್ ಎಕ್ಸ್‌ಪ್ಲೋರೇಶನ್ ರೋವರ್ ಚಾಲೆಂಜ್‌ಗೆ ಒಡಿಶಾ ಶಾಲಾ ವಿದ್ಯಾರ್ಥಿಗಳ ತಂಡ! 

ನಿರ್ದಿಷ್ಟ ಸಮುದಾಯದ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುವ ತಾರತಮ್ಯದ ಪರಮಾವಧಿ: SDPI ಖಂಡನೆ

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಫೆಲೋಶಿಪ್‌ ಮೊತ್ತವನ್ನು ರಾಜ್ಯ ಸರ್ಕಾರ ಕಡಿತಗೊಳಿಸಿರುವುದು‌ ಒಂದು ನಿರ್ದಿಷ್ಟ ಸಮುದಾಯದ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುವ ಉದ್ದೇಶವಾಗಿದ್ದು, ಇದು ತಾರತಮ್ಯದ ಪರಮಾವಧಿ ಎಂದು SDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಇದ್ದಕ್ಕಿದ್ದಂತೆ ಫೆಲೋಷಿಪ್ ಮೊತ್ತ ಕಡಿತಗೊಳಿಸುವುದಾಗಿ ಆದೇಶ ಮಾಡಿರುವುದು ಖೇದಕರ. ಬಿಜೆಪಿ ಸರ್ಕಾರ ಪ್ರಾರಂಭದಿಂದಲೂ ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನ ಕಡಿತಗೊಳಿಸುತ್ತಿದೆ. 2020–21ನೇ ಸಾಲಿನಲ್ಲಿ 44% ದಷ್ಟು ಅನುದಾನ ಕಡಿತಗೊಳಿಸಿದೆ. ಇದರ ಮುಂದುವರಿದ ಭಾಗವಾಗಿ ಉನ್ನತ ಶಿಕ್ಷಣದ ನೆರವನ್ನು ಕಡಿತ ಮಾಡಲಾಗಿದೆ” ಎಂದು ಅವರು ಹೇಳಿದ್ದಾರೆ.

“ವಿದ್ಯಾರ್ಥಿಗಳ‌ ಭವಿಷ್ಯದ ಜೊತೆ ಚೆಲ್ಲಾಟ ಮಾಡಿ ಖಜಾನೆ ತುಂಬಿಸಲು ಹೊರಟಿರುವ ಸರ್ಕಾರದ ಈ‌ ನಡೆ ಒಪ್ಪುವಂತದಲ್ಲ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳ ಯೋಜನೆಗಳಲ್ಲಿ ತಾರತಮ್ಯವೆಸಗುವುದನ್ನು SDPI ಸಹಿಸುವುದಿಲ್ಲ. ಸರ್ಕಾರ ಈ ಕೊಡಲೇ ಎಚ್ಚೆತ್ತು ಕೊಂಡು ಬಾಕಿ ಉಳಿದಿರುವ ಫೆಲೋಶಿಪ್ ಹಣ ನೀಡುವುದರ ಜೊತೆ ಎಂದಿನಂತೆ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಆರ್ಥಿಕ ಸಹಾಯ ಮುಂದುವರಿಸ ಬೇಕು” ಎಂದು ಹನ್ನಾನ್ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಯಾರಿಗೂ ಹೊರೆಯಾಗಲಾರೆ ಎಂದು ನೇಣಿಗೆ ಕೊರಳೊಡ್ಡಿದ ಪ್ರತಿಭಾನ್ವಿತ ವಿದ್ಯಾರ್ಥಿನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...