Homeಮುಖಪುಟಇಂಧನದ ಮೇಲಿನ ಅಬಕಾರಿ ಶುಂಕ ಕೊಂಚ ಕಡಿಮೆ: ಪೆಟ್ರೋಲ್-ಡೀಸೆಲ್‌ ಬೆಲೆ ಇಳಿಕೆ

ಇಂಧನದ ಮೇಲಿನ ಅಬಕಾರಿ ಶುಂಕ ಕೊಂಚ ಕಡಿಮೆ: ಪೆಟ್ರೋಲ್-ಡೀಸೆಲ್‌ ಬೆಲೆ ಇಳಿಕೆ

- Advertisement -
- Advertisement -

ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 8 ರೂ ಮತ್ತು ಡೀಸೆಲ್‌ಗೆ 6 ರೂನಷ್ಟು  ಕಡಿತಗೊಳಿಸಲಾಗಿದೆ. ಹಾಗಾಗಿ ನಾಳೆಯಿಂದ ಲೀಟರ್ ಪೆಟ್ರೋಲ್ ಮೇಲೆ 9.5 ರೂ ಮತ್ತು ಡೀಸೆಲ್ ಮೇಲೆ 7 ರೂ ಕಡಿತ ಆಗಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಇದೇ ರೀತಿ ರಾಜ್ಯಗಳು ಸಹ ತಮ್ಮ ವ್ಯಾಟ್, ಸೇಲ್ಸ್‌ ಟ್ಯಾಕ್ಸ್ ಕಡಿಮೆ ಮಾಡುವ ಮೂಲಕ ಗ್ರಾಹಕರಿಗೆ ನೆರವಾಗಬೇಕೆಂದು ಅವರು ರಾಜ್ಯಗಳಿಗೆ ತಾಕೀತು ಮಾಡಿದ್ದಾರೆ. ಅದರಲ್ಲಿಯೂ ಕಳೆದ ನವೆಂಬರ್ ತಿಂಗಳಿನಲ್ಲಿ ಯಾವ ರಾಜ್ಯಗಳು ವ್ಯಾಟ್ ಕಡಿಮೆ ಮಾಡಲಿಲ್ಲವೋ ಅವರು ಮಾಡಬೇಕೆಂದು ಹೇಳಿದ್ದಾರೆ.

ತಮ್ಮ ಈ ನಿರ್ಧಾರದಿಂದಾಗಿ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 1 ಲಕ್ಷ ಕೋಟಿ ಆದಾಯ ಕಡಿಮೆಯಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಬಡಜನರು ಮತ್ತು ಜನಸಾಮಾನ್ಯರಿಗೆ ಅನುಕೂಲವಾಗುವ ದೃಷ್ಟಿಯಿಂದ ನರೇಂದ್ರ ಮೋದಿಯವರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಪಂಚರಾಜ್ಯಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನವೆಂಬರ್ 04ರಂದು ಪೆಟ್ರೋಲ್ ಮೇಲೆ 05 ರೂ, ಮತ್ತು ಡೀಸೆಲ್ ಮೇಲೆ 10 ರೂ ಕಡಿಮೆ ಮಾಡಿತ್ತು. ಆದರೆ ಚುನಾವಣೆಗಳು ಮುಗಿದ ನಂತರ ಹಣದುಬ್ಬರ ಮತ್ತು ಅಂತರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆ ಏರಿಕೆಯಾದ ಕಾರಣ ಮತ್ತೆ ಪೆಟ್ರೋಲ್ – ಡೀಸೆಲ್ ಬೆಲೆ ಏರಿಕೆಯಾಗಿತ್ತು.

ಇದನ್ನೂ ಓದಿ: ಪುಸ್ತಕದಲ್ಲಿ ಹೆಡಗೇವಾರ್ ಪಠ್ಯ ಸೇರ್ಪಡೆಗೆ ಸ್ವಪಕ್ಷೀಯರಿಂದಲೆ ವಿರೋಧ: ಸರ್ಕಾರಕ್ಕೆ ಚಾಟಿ ಬೀಸಿದ ಎಚ್.ವಿಶ್ವನಾಥ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಸಾರ್ವಜನಿಕರ ಮೇಲೆ ಸವಾರಿ ಮಾಡಲು ಬಿಡುವುದಿಲ್ಲ..’; ತಪ್ಪುದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಸುಪ್ರೀಂ ಕಿಡಿ

0
"ಸಾರ್ವಜನಿಕರ ಮೇಲೆ ಸವಾರಿ ಮಾಡಲು ನಾವು ಬಿಡುವುದಿಲ್ಲ" ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದ್ದು, ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಎದುರಿಸಲು ತಾವು ಸಕ್ರಿಯರಾಗಿರಬೇಕು ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳಳಿಗೆ ಸೂಚನೆ ನೀಡಿದೆ. 1945ರ...