Homeಕರ್ನಾಟಕಉದ್ಯೋಗ ಖಾತ್ರಿ ಯೋಜನೆಯ ಬಾಕಿ ವೇತನ ಬಿಡುಗಡೆ ಮಾಡಿ: ಕೇಂದ್ರಕ್ಕೆ ಆಗ್ರಹಿಸಿದ ಕರ್ನಾಟಕ

ಉದ್ಯೋಗ ಖಾತ್ರಿ ಯೋಜನೆಯ ಬಾಕಿ ವೇತನ ಬಿಡುಗಡೆ ಮಾಡಿ: ಕೇಂದ್ರಕ್ಕೆ ಆಗ್ರಹಿಸಿದ ಕರ್ನಾಟಕ

- Advertisement -
- Advertisement -

ಬಹುತೇಕ ತಾಲೂಕಿನಲ್ಲಿ ಬರಗಾಲದ ಹಿನ್ನೆಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿನ ಬಾಕಿ ವೇತನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಮನವಿ ಮಾಡಿದೆ. ರಾಜ್ಯದಾದ್ಯಂತ ಬಹುತೇಕ ತಾಲೂಕುಗಳಲ್ಲಿ ಬರಗಾಲದ ಹಿನ್ನೆಲೆಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಹಣ ಬಿಡುಗಡೆಗೆ ಆಗ್ರಹಿಸಲಾಗಿದೆ.

ಈ ಸಂಬಂಧ ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಶೈಲೇಶ್ ಕುಮಾರ್ ಸಿಂಗ್ ಅವರಿಗೆ ಕರ್ನಾಟಕದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಪತ್ರ ಬರೆದಿದ್ದಾರೆ. 2023ರ ಆ.29ರಿಂದ ಕರ್ನಾಟಕಕ್ಕೆ ವೇತನ ಬಿಡುಗಡೆ ಬಾಕಿಯಿದೆ. ಇದರ ಮೌಲ್ಯ 478.46 ಕೋಟಿ ರೂಪಾಯಿಗಳಾಗಿದ್ದು, ಆಗಸ್ಟ್ ಮತ್ತು ಸೆಪ್ಟೆಂಬರ್‌ಗೆ, ಸೆ. 24 ರಂದು ಬರೀ 1.55 ಕೋಟಿ ರೂ. ಕೊನೆಯ ಬಾರಿಗೆ ವೇತನ ಬಿಡುಗಡೆಯಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಗ್ರಾಮೀಣಾಭಿವೃದ್ಧಿ ಕಮಿಷನ್‌ ಈಗಾಗಲೇ ಪ್ರಸಕ್ತ ಮತ್ತು ಹಿಂದಿನ ವರ್ಷದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ವಾರ್ಷಿಕ ಲೆಕ್ಕಪರಿಶೋಧನೆಯ ಅಂಕಿ ಅಂಶಗಳನ್ನು ಸಲ್ಲಿಸಿದೆ ಎಂದು ಮುಖ್ಯ ಕಾರ್ಯದರ್ಶಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಅವರ ಪ್ರಕಾರ, ರಾಜ್ಯದ ಒಟ್ಟು 236 ತಾಲ್ಲೂಕುಗಳಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ ಮತ್ತು 195 ತಾಲ್ಲೂಕುಗಳಲ್ಲಿ 161 ತೀವ್ರ ಬರ ಮತ್ತು 34 ತಾಲ್ಲೂಕುಗಳು ಮಧ್ಯಮ ಬರಪೀಡಿತವಾಗಿವೆ. ಬರ ಪರಿಸ್ಥಿತಿಯಿಂದಾಗಿ ಗ್ರಾಮೀಣ ಕಾರ್ಮಿಕರು ತಮ್ಮ ಜೀವನೋಪಾಯಕ್ಕಾಗಿ MGNREGA ಉದ್ಯೋಗಗಳ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಗ್ರಾಮಗಳಿಂದ ನಗರ ಪ್ರದೇಶಗಳಿಗೆ ವಲಸೆ ಹೋಗುವವರ ಸಂಖ್ಯೆಯನ್ನು ಕಡಿಮೆ ಮಾಡುವುದು ಮತ್ತು ಗ್ರಾಮೀಣ ಜನರಿಗೆ ತಮ್ಮ ಗ್ರಾಮಗಳಲ್ಲೇ ಉದ್ಯೋಗಾವಕಾಶಗಳನ್ನು ಒದಗಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಶರ್ಮಾ ಅವರು ತಿಳಿಸಿದ್ದಾರೆ. ಮತ್ತು ವೇತನ ಪಾವತಿಯಲ್ಲಿನ ವಿಳಂಬದಿಂದಾಗಿ ಕಾರ್ಮಿಕರು ತಮ್ಮ ದೈನಂದಿನ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಮತ್ತು ಉದ್ಯೋಗಗಳನ್ನು ಅರಸಿ ಗ್ರಾಮೀಣ ಪ್ರದೇಶಗಳಿಂದ ನಗರ ಪ್ರದೇಶಗಳಿಗೆ ವಲಸೆ ಹೋಗಲು ಪ್ರಾರಂಭಿಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನಾವು ಭಾರತ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ 2022-23 ಆರ್ಥಿಕ ವರ್ಷದ ಆಡಿಟೆಡ್ ಯುಟಿಲೈಸೇಶನ್ ಪ್ರಮಾಣಪತ್ರ ಮತ್ತು ವಾರ್ಷಿಕ ಅಂಕಿಅಂಶಗಳನ್ನು ನಾವು ಸಲ್ಲಿಸಿದ್ದೇವೆ. ನಾವು ಯೋಜನೆಯ ಪರಿಣಾಮಕಾರಿ ಅನುಷ್ಟಾನಕ್ಕೆ  ವೇತನ ಬಿಡುಗಡೆಗಾಗಿ ವಿನಂತಿಸುತ್ತಿದ್ದೇವೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಇದನ್ನು ಓದಿ: ಸಲಿಂಗ ವಿವಾಹ: ಕಾನೂನು ರೂಪಿಸುವ ಅಧಿಕಾರ ಸಂಸತ್ತಿಗೆ ಇರುವುದು; ಸುಪ್ರೀಂಕೋರ್ಟ್‌

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read