Homeಮುಖಪುಟಕೃಷಿ ಕಾಯ್ದೆಗಳ ಕುರಿತು ಚರ್ಚೆಗೆ ನಿರಾಕರಣೆ: ರಾಷ್ಟ್ರಪತಿಗಳ ವಿರುದ್ಧ ಪ್ರತಿಭಟನೆಗೆ ಮುಂದಾದ ಪಂಜಾಬ್ ಸಿಎಂ ಅಮರಿಂದರ್...

ಕೃಷಿ ಕಾಯ್ದೆಗಳ ಕುರಿತು ಚರ್ಚೆಗೆ ನಿರಾಕರಣೆ: ರಾಷ್ಟ್ರಪತಿಗಳ ವಿರುದ್ಧ ಪ್ರತಿಭಟನೆಗೆ ಮುಂದಾದ ಪಂಜಾಬ್ ಸಿಎಂ ಅಮರಿಂದರ್ ಸಿಂಗ್

- Advertisement -
- Advertisement -

ವಿವಾದಿತ ಮೂರು ಕೃಷಿ ಕಾಯ್ದೆಗಳ ಕುರಿತು ಚರ್ಚೆಗೆ ಅವಕಾಶ ನೀಡದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿರುದ್ಧ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ನಾಳೆ ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಕೇಂದ್ರದ ಕೃಷಿ ಕಾಯ್ದೆಗಳಿಗೆ ಸೆಡ್ಡು ಹೊಡೆದು ಪಂಜಾಬ್‌ನಲ್ಲಿ ಹೊಸ ಕಾನೂನುಗಳನ್ನು ಅಮರಿಂದರ್ ಸಿಂಗ್ ಅಂಗೀಕರಿಸಿದ್ದರು. ಆದರೂ ರಾಜ್ಯದಲ್ಲಿ ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಅಲ್ಲದೇ ರಾಜ್ಯಕ್ಕೆ ಬರುವ ರೈಲುಗಳನ್ನು ರೈತರು ತಡೆಯುತ್ತಿರುವುದರಿಂದ ರಾಜ್ಯಕ್ಕೆ ಅಗತ್ಯ ವಸ್ತುಗಳ ವ್ಯತ್ಯಯವಾಗಿದೆ. ಈ ಹಿನ್ನೆಲೆಯಲ್ಲಿ ಚರ್ಚಿಸಲು ರಾಷ್ಟ್ರಪತಿಗಳ ಬಳಿ ಸಮಯ ಕೇಳಿದ್ದರು ಎನ್ನಲಾಗಿದೆ.

ಇದಕ್ಕೆ ರಾಷ್ಟ್ರಪತಿ ರಾಮ್ ನಾಥ್‌ ಕೋವಿಂದ್‌ರವರು ನಿರಾಕರಿಸಿದ ಹಿನ್ನೆಲೆಯಲ್ಲಿ ನವೆಂಬರ್ 03 ರಿಂದ ನವದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮಾ ಗಾಂಧೀಜಿಯವರ ಸ್ಮಾರಕದ ಬಳಿ ಪಂಜಾಬ್ ಸಿಎಂ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ ; ಕೇಂದ್ರದ ಕೃಷಿ ಕಾಯ್ದೆಗಳಿಗೆ ಸೆಡ್ಡು: ಪಂಜಾಬ್‌ ಅಸೆಂಬ್ಲಿಯಲ್ಲಿ ಮೂರು ಹೊಸ ಮಸೂದೆಗಳ ಮಂಡನೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೆಡ್ಗೆವಾರ್‌ ಸಂಘಪರಿವಾರದವರಿಗೆ ಮಾತ್ರ ಆದರ್ಶ, ರಾಜ್ಯದ ಜನತೆ ಅಲ್ಲ: ಎಸ್‌ಎಫ್‌ಐ ಕಿಡಿ | Naanu Gauri

ಹೆಡ್ಗೆವಾರ್‌ ಸಂಘಪರಿವಾರದವರಿಗೆ ಮಾತ್ರ ಆದರ್ಶ, ರಾಜ್ಯದ ಜನತೆ ಅಲ್ಲ: ಭಗತ್‌ ಸಿಂಗ್‌ ಪಾಠ ಕೈ...

0
ರಾಜ್ಯದ ಪಠ್ಯ ಪುಸ್ತಕದಲ್ಲಿ ಸ್ವಾತಂತ್ಯ ಹೋರಾಟಗಾರ ಭಗತ್‌ ಸಿಂಗ್ ಪಾಠ ಸೇರಿ ಅನೇಕ ಪ್ರಗತಿಪರ ಚಿಂತನೆಯ ಪೂರಕ ಪಾಠಗಳನ್ನು ಕೈ ಬಿಟ್ಟು ಸಂಘಪರಿವಾರದ ಸಂಸ್ಥಾಪಕ ಹೆಡಗೇವಾರ್ ಭಾಷಣ ಸೇರ್ಪಡೆ ಹಾಗೂ ಶಿಕ್ಷಣದ ಕೇಸರೀಕರಣ...