Homeಮುಖಪುಟಮದುವೆಗೆ ನಿರಾಕರಣೆ | ಅಪ್ರಾಪ್ತೆಯ ಕತ್ತು ಸೀಳಿ ಹತ್ಯೆ ಮಾಡಿದ ದುಷ್ಕರ್ಮಿ

ಮದುವೆಗೆ ನಿರಾಕರಣೆ | ಅಪ್ರಾಪ್ತೆಯ ಕತ್ತು ಸೀಳಿ ಹತ್ಯೆ ಮಾಡಿದ ದುಷ್ಕರ್ಮಿ

- Advertisement -
- Advertisement -

ಮದುವೆಯಾಗಲು ನಿರಾಕರಿಸಿದ್ದ ಅಪ್ರಾಪ್ತ ಬಾಲಕಿಯನ್ನು ಯುವಕಬೊಬ್ಬ ಆಕೆಯ ಕತ್ತು ಸೀಳಿ ಹತ್ಯೆಗೈದ ಘಟನೆ ಹರಿಯಾಣದ ಫರಿದಾಬಾದ್‌ನ ದಬುವಾ ಕಾಲೋನಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಆರೋಪಿಯನ್ನು ಪವನ್ ಎಂದು ಗುರುತಿಸಲಾಗಿದ್ದು, ಮೃತ ಬಾಲಕಿಯನ್ನು ಖುಷ್ನುಮಾ ಅಲಿಯಾಸ್ ಕರಿಷ್ಮಾ ಎಂದು ಗುರುತಿಸಲಾಗಿದೆ. ಮದುವೆಗೆ ನಿರಾಕರಣೆ

ಕಳೆದ ಏಪ್ರಿಲ್‌ನಲ್ಲಿ ಪವನ್ ಮತ್ತು ಕರಿಷ್ಮಾ ಇಬ್ಬರು ಮನೆ ಬಿಟ್ಟು ಹೋಗಿದ್ದರು. ಪೊಲೀಸರು ಇಬ್ಬರನ್ನು ಪತ್ತೆ ಹಚ್ಚಿ ಕರಿಷ್ಮಾ ಬಾಲಕಿಯಾದ ಕಾರಣ ಅವರನ್ನು ಕುಟುಂಬಸ್ಥರಿಗೆ ಒಪ್ಪಿಸಿದ್ದರು. ಈ ವೇಳೆ ಪವನ್ ಅನ್ನು ಜೈಲಿಗೆ ಹಾಕಲಾಗಿತ್ತು. ಸೆಪ್ಟೆಂಬರ್‌ನಲ್ಲಿ ಜಾಮೀನಿನ ಮೇಲೆ ಹೊರಬಂದ ಪವನ್ ತನ್ನನ್ನು ಮದುವೆಯಾಗುವಂತೆ ಕರಿಷ್ಮಾಗೆ ಒತ್ತಾಯಿಸುತ್ತಿದ್ದ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶನಿವಾರ ಕರಿಷ್ಮಾ ತನ್ನ ನೆರೆಮನೆಗೆ ಹೋಗಿದ್ದ ವೇಳೆ, ಅಲ್ಲಿದ್ದ ಪವನ್ ಮದುವೆಯಾಗುವಂತೆ ಬಾಲಕಿಯನ್ನು ಪೀಡಿಸಿದ್ದು, ಈ ವೇಳೆ ಅವರು ಮದುವೆಯಾಗಲು ನಿರಾಕರಿಸಿದ್ದರು. ಹಾಗಾಗಿ ಕೋಪಗೊಂಡ ಆರೋಪಿ ಬಾಲಕಿಯ ಕತ್ತು ಸೀಳಿ ಸ್ಥಳದಿಂದ ಪರಾರಿಯಾಗಿದ್ದಾನೆ. ಮದುವೆಗೆ ನಿರಾಕರಣೆ

ಬಾಲಕಿಯ ತಂದೆಯ ದೂರಿನ ಆಧಾರದಲ್ಲಿ ದಬುವಾ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯಡಿ ಎಫ್‌ಐಆರ್ ದಾಖಲಿಸಲಾಗಿದೆ.

“ಪವನ್ ನನ್ನ ಮಗಳನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದನು. ಆದರೆ ಆಕೆ ನಿರಾಕರಿಸುತ್ತಿದ್ದಳು. ಆಕೆಯನ್ನು ಕೊಲ್ಲುವುದಾಗಿ ಪವನ್ ಬೆದರಿಕೆ ಹಾಕುತ್ತಿದ್ದನು. ಕೊನೆಗೆ ನನ್ನ ಮಗಳನ್ನು ಕೊಂದುಬಿಟ್ಟ” ಎಂದು ಬಾಲಕಿಯ ತಂದೆ ಅನ್ಸರ್ ಖಾನ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಫರಿದಾಬಾದ್ ಪೊಲೀಸ್ ವಕ್ತಾರರು, “ಎಫ್‌ಐಆರ್ ದಾಖಲಿಸಲಾಗಿದ್ದು, ಇನ್ನೂ ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸಲು ನಮ್ಮ ತಂಡ ಕಾರ್ಯಾಚರಣೆ ನಡೆಸುತ್ತಿವೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂಓದಿ:  Gaza ceasefire | ಕದನ ವಿರಾಮ ಒಪ್ಪಂದ ವಿಳಂಬ, ಇಸ್ರೇಲ್ ದಾಳಿ 8 ಮಂದಿ ಸಾವು

Gaza ceasefire | ಕದನ ವಿರಾಮ ಒಪ್ಪಂದ ವಿಳಂಬ, ಇಸ್ರೇಲ್ ದಾಳಿ 8 ಮಂದಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...