ಕೊರೊನಾ ರೋಗಿಗಳನ್ನು ದಾಖಲಿಸಿಕೊಳ್ಳದ ಖಾಸಗಿ ಆಸ್ಪತ್ರೆಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಕರ್ನಾಟಕ ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ಪುನರುಚ್ಚರಿಸಿದ್ದಾರೆ.
ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳಲ್ಲಿ ದಿಢೀರ್ ಏರಿಕೆಯಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ಈ ಕಷ್ಟದ ಸಮಯದಲ್ಲಿ ಎಲ್ಲಾ ಖಾಸಗಿ ಆಸ್ಪತ್ರೆಗಳು ಸಹ ಕೊರೊನಾ ರೋಗಿಗಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು. ನಿರಾಕರಿಸಿದವರ ಮೇಲೆ ಕ್ರಿಮಿನಲ್ ಕೇಸು ಖಂಡಿತ” ಎಂದಿದ್ದಾರೆ.
Criminal case will be filed against those private hospitals that refuse to admit #COVID19 patients: Karnataka Medical Education Minister Dr K Sudhakar (file pic) pic.twitter.com/D6Pye2eynn
— ANI (@ANI) July 5, 2020
ಕರ್ನಾಟಕವು ಶನಿವಾರ ಒಂದೇ ದಿನ 1,839 ಹೊಸ COVID-19 ಪ್ರಕರಣಗಳನ್ನು ವರದಿ ಮಾಡಿದೆ. ಅವುಗಳಲ್ಲಿ 1,172 ಪ್ರಕರಣಗಳು ಬೆಂಗಳೂರಿನಲ್ಲೇ ದಾಖಲಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕುಗಳ ಸಂಖ್ಯೆ 21,549 ಮತ್ತು ಸಾವುಗಳು 335 ಕ್ಕೆ ತಲುಪಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ವಾರವೊಂದರಲ್ಲಿ ಅತಿ ಹೆಚ್ಚು ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳ ಬೆಡ್‌ಗಳು ತುಂಬುತ್ತಾ ಬಂದಿವೆ. ಇಂತಹ ಸಂದರ್ಭದಲ್ಲಿ ರೋಗಿಗಳನ್ನು ಬೀದಿಯಲ್ಲಿಯೇ ಇರಿಸಿರುವ ಹಲವು ವರದಿಗಳು ಕಂಡುಬಂದು ಸಾರ್ವಜನಿಕ ಆಕ್ರೋಶವನ್ನು ಹೆಚ್ಚಿಸಿವೆ.
ಈ ಹಿನ್ನೆಲೆಯಲ್ಲಿ ಎಲ್ಲಾ ಖಾಸಗಿ ಆಸ್ಪತ್ರೆಗಳು ಸಹ ಕೊರೊನಾ ರೋಗಿಗಳನ್ನು ದಾಖಲು ಮಾಡಿಕೊಳ್ಳಬೇಕು ಎಂದು ಕರ್ನಾಟಕ ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ತಾಕೀತು ಮಾಡಿದ್ದಾರೆ.
ಇದನ್ನೂ ಓದಿ: ಆಂಬುಲೆನ್ಸ್ ವಿಳಂಬ, ಸೋಂಕಿತ ಸಾವು: ಕೈಮುಗಿದ ಕ್ಷಮೆ ಕೇಳಿದ BBMP ಕಮಿಷನರ್


