Homeಮುಖಪುಟ‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

‘ಜೈಶ್ರೀರಾಮ್’ ಹೇಳದೇ ಇದ್ದುದಕ್ಕೆ 10 ವರ್ಷದ ಬಾಲಕನನ್ನು ತೀವ್ರವಾಗಿ ಥಳಿಸಿದ ಬಿಜೆಪಿ ಕಾರ್ಯಕರ್ತ!

- Advertisement -
- Advertisement -

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯ ಫುಲಿಯಾದಲ್ಲಿ ಸೋಮವಾರ ಮಧ್ಯಾಹ್ನ ‘ಜೈ ಶ್ರೀ ರಾಮ್’ ಎಂದು ಜಪಿಸಲು ನಿರಾಕರಿಸಿದ್ದಕ್ಕಾಗಿ 10 ವರ್ಷದ ಬಾಲಕನನ್ನು ಬಿಜೆಪಿ ಕಾರ್ಯಕರ್ತರೊಬ್ಬರು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಟೆಲೆಗ್ರಾಫ್ ಇಂಡಿಯಾ ವರದಿ ಮಾಡಿದೆ.

ಇತ್ತೀಚೆಗೆ ತಾಯಿಯನ್ನು ಕಳೆದುಕೊಂಡ 4 ನೇ ತರಗತಿ ವಿದ್ಯಾರ್ಥಿ ಮಹಾದೇವ್ ಶರ್ಮಾಗೆ ಅನೇಕ ಗಾಯಗಳಾಗಿದ್ದು, ರಣಘಾಟ್ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ಆರೋಪಿ ಫುಲಿಯಾಪರಾದ ಚಹಾ ಅಂಗಡಿಯ ಮಾಲೀಕ ಮಹಾದೇಬ್ ಪ್ರಮಣಿಕ್ ಅವರನ್ನು ಥಳಿಸಿದ್ದಾರೆ. ಪ್ರತಿಭಟನಾಕಾರರು ಪ್ರಮಣಿಕ್ ಬಂಧನಕ್ಕೆ ಒತ್ತಾಯಿಸಿ ಎನ್‌ಎಚ್-12 ಹೆದ್ದಾರಿಯನ್ನು ಬಂದ್ ಮಾಡಿದ್ದರು.

ಸು-ಮೋಟು ಆಧಾರದ ಮೇಲೆ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಯನ್ನು ಬಂಧಿಸುವುದಾಗಿ ಪೊಲೀಸರು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು. ಬಿಜೆಪಿಯ ಮಹಿಳಾ ವಿಭಾಗದ ಸ್ಥಳೀಯ ಮುಖ್ಯಸ್ಥೆ ಮಿಥು ಪ್ರಮಣಿಕ್ ಅವರ ಪತಿ ಮಹಾದೇವ್ ಪ್ರಮಣಿಕ್ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಲಕ ತೃಣಮೂಲ ಕಾಂಗ್ರೆಸ್ ಬೆಂಬಲಿಗನಾಗಿರುವ ಬಡಗಿಯೊಬ್ಬರ ಮಗ ಎಂದು ಪೊಲೀಸರು ಹೇಳಿದ್ದಾರೆ. “ಹುಡುಗ ಪ್ರಮಣಿಕ್ ಚಹಾ ಅಂಗಡಿ ಎದುರು ಹಾದುಹೋಗುತ್ತಿದ್ದ. ಹುಡುಗನ್ನು ಕರೆದ ಪ್ರಮಣಿಕ್, ಹುಡುಗನ ತಂದೆ ಟಿಎಂಸಿ ಬೆಂಬಲಿಸುತ್ತಿರುವುದನ್ನು ಉಲ್ಲೇಖಿಸಿ ನಿಂದಿಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಏಪ್ರಿಲ್ 17 ರಂದು ಇಲ್ಲಿ ನಡೆದ ಮತದಾನದ ಸಂದರ್ಭದಲ್ಲಿ ಬಾಲಕನ ತಂದೆ ಟಿಎಂಸಿ ಪರ ಕೆಲಸ ಮಾಡಿದ್ದಕ್ಕೆ ಪ್ರಮಣಿಕ್ ಕೆರಳಿದ್ದ ಎನ್ನಲಾಗಿದೆ.

“ಆರೋಪಿ ಹುಡುಗನಿಗೆ ಬೆದರಿಕೆ ಹಾಕಿ ಜೈಶ್ರೀರಾಮ್ ಎಂದು ಜಪಿಸಲು ಒತ್ತಾಯ ಮಾಡಿದ. ಹುಡುಗ ಅದನ್ನು ನಿರಾಕರಿಸಿದನು” ಎಂದು ಆ ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ ಎಂದು ಟೆಲೆಗ್ರಾಫ್ ಇಂಡಿಯಾ ವರದಿಯಲ್ಲಿ ಹೇಳಲಾಗಿದೆ.

ನಂತರ ಪ್ರಮಣಿಕ್ ಬಾಲಕನ ಮೇಲೆ ವಿಪರೀತವಾಗಿ ಹಲ್ಲೆ ನಡೆಸಿದ್ದಾನೆ. ಕೆಲವು ಗ್ರಾಮಸ್ಥರು ಸಹಾಯಕ್ಕಾಗಿ ಧಾವಿಸುವವರೆಗೂ ಬಾಲಕನಿಗೆ ಪ್ರಮಣಿಕ್ ಹೊಡೆದ ಎಂದು ವರದಿಯಾಗಿದೆ.
ಆಘಾತಕ್ಕೊಳಗಾಗಿದ್ದ ಬಾಲಕ ಆಸ್ಪತ್ರೆಯ ಹಾಸಿಗೆಯಿಂದ ಹೀಗೆ ಹೇಳಿದ್ದಾನೆ: “ಅವನು (ಪ್ರಮಣಿಕ್) ನಾನು‘ ಜೈ ಶ್ರೀ ರಾಮ್ ’ಎಂದು ಜಪಿಸಲು ಒತ್ತಾಯಿಸಿ ನನ್ನ ತಂದೆಯನ್ನು ನಿಂದಿಸುತ್ತಿದ್ದ. ನಾನು ನಿರಾಕರಿಸಿದಾಗ, ಅವನು ನನ್ನನ್ನು ಹೊಡೆಯಲು ಶುರು ಮಾಡಿದ ತದನಂತರ ನನ್ನನ್ನು ಒದೆಯತೊಡಗಿದ.. ಅದೃಷ್ಟವಶಾತ್, ಕೆಲವು ಸ್ಥಳೀಯರು ಸಹಾಯ ಮಾಡಲು ಧಾವಿಸಿದರು.”

ಬಾಲಕನ ಮುಖ, ತಲೆ ಮತ್ತು ಬೆನ್ನಿಗೆ ಗಾಯಗಳಾಗಿವೆ ಮತ್ತು ಸಿ.ಟಿ ಸ್ಕ್ಯಾನ್‌ಗೆ ಸೂಚಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. “ಹುಡುಗ ಆಘಾತದಲ್ಲಿದ್ದಾನೆ, ಆದರೆ ವೈದ್ಯಕೀಯವಾಗಿ ಆರೋಗ್ಯ ಸ್ಥಿರವಾಗಿದೆ” ಎಂದು ವೈದ್ಯರೊಬ್ಬರು ಹೇಳಿದ್ದಾರೆ.

ಸ್ಥಳೀಯ ತೃಣಮೂಲ ಯುವ ವಿಭಾಗದ ನಾಯಕ ಪೀಟರ್ ಮುಖರ್ಜಿ, “ಕೆಲವು ಗ್ರಾಮಸ್ಥರು ಹುಡುಗನನ್ನು ಅರೆ ಪ್ರಜ್ಞೆಯ ಸ್ಥಿತಿಯಲ್ಲಿ ರಕ್ಷಿಸಿ ನನಗೆ ಮಾಹಿತಿ ನೀಡಿದರು. ನಾನು ತಕ್ಷಣ ಸ್ಥಳಕ್ಕೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ದೆ. ಬಿಜೆಪಿ ಎಷ್ಟು ಕ್ರೂರವಾಗಬಹುದು ಎಂಬುದನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿತು. ತಾಯಿಯನ್ನು ಕಳೆದುಕೊಂಡ 10 ವರ್ಷದ ಬಾಲಕನ್ನು ಅವರು ಬಿಡಲಿಲ್ಲ ಎಂದು ಊಹಿಸಲಾಗದು’ ಎಂದಿದ್ದಾರೆ.

ಆರೋಪಿ ಪತ್ನಿ ಬಿಜೆಪಿ ಮಹಿಳಾ ಮೋರ್ಚಾ ನಾಯಕಿ ಮಿಥು ಪ್ರಮಣಿಕ್, ಈ ದಾಳಿಯನ್ನು ಒಪ್ಪಿಕೊಂಡಿದ್ದಾರೆ, ಆದರೆ ಹುಡುಗ ಪ್ರಚೋದನೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
“ನನ್ನ ಪತಿ ಹುಡುಗನಿಗೆ ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಕೇಳಿದ್ದು ನಿಜ. ಆದರೆ ಹುಡುಗನು ಅವನಿಗೆ ತಿಳಿದಿರುವ ಕಾರಣ ಹಾಗೆ ಕೇಳಿದ್ದಾನೆ. ವಾಸ್ತವವಾಗಿ, ಅಂಗಡಿಯಲ್ಲಿದ್ದ ಕೆಲವು ಗ್ರಾಹಕರು, ಹುಡುಗ ನನ್ನ ಗಂಡ ‘ಜೈ ಬಾಂಗ್ಲಾ’ ಎಂದು ಜಪಿಸುವಂತೆ ಕೇಳಬೇಕು ಎಂದು ತಮಾಷೆ ಮಾಡಿದರು. ಆದರೆ ಆ ಹುಡುಗ ಕಲ್ಲು ಎತ್ತಿಕೊಂಡು ಅಂಗಡಿಯ ಮೇಲೆ ಎಸೆದು ಗಾಜಿನ ಪಾತ್ರೆಗಳನ್ನು ಒಡೆದ. ಇದು ನನ್ನ ಪತಿಗೆ ಕೋಪ ತರಿಸಿದ್ದರಿಂದ ಹೊಡೆದಿದ್ದಾನೆ’ ಎಂದು ಸಮರ್ಥಸಿಕೊಂಡಿದ್ದಾರೆ.

ಹುಡುಗನ ತಂದೆ, ಶ್ಯಾಮ್‌ಚಂದ್ ಶರ್ಮಾ, ತನ್ನ 10 ವರ್ಷದ ಮಗನನ್ನು ತನ್ನ ರಾಜಕೀಯ ಒಲವುಗಳಿಗಾಗಿ ಹಿಂಸಾಚಾರಕ್ಕೆ ಒಳಪಡಿಸಬಹುದೆಂದು ಊಹಿಸಿರಲಿಲ್ಲ ಎಂದಿದ್ದಾರೆ.

“ಚುನಾವಣೆಯ ದಿನದಂದು ಬಿಜೆಪಿ ಕಾರ್ಯಕರ್ತರು ಮತದಾರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದರು, ಅದನ್ನು ನಾನು ಪ್ರತಿಭಟಿಸಿದೆ. ಆದ್ದರಿಂದ, ಅವರು ನನ್ನ ಮಗನ ಮೇಲೆ ಹಲ್ಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡರು ಎಂದು ತೋರುತ್ತದೆ” ಎಂದು ಅವರು ಹೇಳಿದ್ದಾರೆ.

ಈಗಾಗಲೇ ತನಿಖೆ ಆರಂಭಿಸಲಾಗಿದೆ ಎಂದು ಸಂತಪುರ ಪೊಲೀಸರು ತಿಳಿಸಿದ್ದಾರೆ. “ಪೊಲೀಸ್ ತಂಡ ಆರೋಪಿ ಮನೆಗೆ ಭೇಟಿ ನೀಡಿದೆ. ನಿಖರವಾಗಿ ಏನಾಯಿತು ಎಂದು ಕಂಡುಹಿಡಿಯಲು ನಾವು ಪ್ರಯತ್ನಿಸುತ್ತಿದ್ದೇವೆ. ಸಂಜೆಯವರೆಗೆ ಯಾವುದೇ ಔಪಚಾರಿಕ ದೂರು ದಾಖಲಾಗಿಲ್ಲ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ: 2017ರಲ್ಲಿಯೇ ಆಕ್ಸಿಜನ್ ಕೊರತೆ ಬಗ್ಗೆ ದನಿಯೆತ್ತಿದ್ದೆ, ಆದರೆ ನನ್ನನ್ನು ಜೈಲಿಗೆ ಹಾಕಲಾಯಿತು: ಡಾ.ಕಫೀಲ್ ಖಾನ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...