Homeಕರ್ನಾಟಕಕಲಬುರಗಿ ಕೇಂದ್ರೀಯ ವಿವಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ ಅಲ್ಲಗೆಳೆದ ರಿಜಿಸ್ಟ್ರಾರ್‌‌‌‌

ಕಲಬುರಗಿ ಕೇಂದ್ರೀಯ ವಿವಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ ಅಲ್ಲಗೆಳೆದ ರಿಜಿಸ್ಟ್ರಾರ್‌‌‌‌

- Advertisement -
- Advertisement -

ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಉಪಕುಲಪತಿ ಮತ್ತು ರಿಜಿಸ್ಟ್ರಾರ್‌‌‌‌ ಭ್ರಷ್ಟಾಚಾರ ಮತ್ತು ಅಧಿಕಾರ ದುರ್ಬಳಕೆ ಮಾಡಿದ್ದಾರೆ ಎಂಬ ಆರೋಪವನ್ನು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌‌ ಪ್ರೊ. ಬಸವರಾಜ ಡೋಣೂರ ಅವರು ಅಲ್ಲಗೆಳೆದಿದ್ದು, “ತಮ್ಮ ಮೇಲಿನ ಆರೋಪವು ಸಂಪೂರ್ಣ ಕಟ್ಟುಕತೆಯಾಗಿದೆ. ಸಂಘಟನೆಗಳು ಮಾಡಿದ ಆಪಾದನೆಗಳಲ್ಲಿ ಯಾವುದೇ ಹುರುಳಿಲ್ಲ. ವಿಶ್ವವಿದ್ಯಾಲಯದ ಹೆಸರಿಗೆ ಕಳಂಕ ತರುವ ದುರುದ್ದೇಶ ಈ ಆಪಾದನೆಗಳ ಹಿಂದೆ ಕೆಲಸ ಮಾಡಿದೆ” ಎಂದು ತಿಳಿಸಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ), ಅಹಿಂದ ಫೋರಂ ಮತ್ತು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಸ್ಥೆ ಸೇರಿದಂತೆ ಕೆಲವು ಸಂಸ್ಥೆಗಳು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಎಂ.ವಿ. ಅಳಗವಾಡಿ ಮತ್ತು ರಿಜಿಸ್ಟ್ರಾರ್ ಪ್ರೊ. ಬಸವರಾಜ ಡೋಣೂರ ಅವರು ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಹಲವು ಆರೋಪಗಳನ್ನು ಮಾಡಿದ್ದು ರಾಷ್ಟ್ರಪತಿಗೂ ಪತ್ರ ಬರೆದಿದ್ದಾರೆ ಎಂದು ವರದಿಯಾಗಿತ್ತು.

ಇದಕ್ಕೆ ಪತ್ರಿಕ್ರಿಯಿಸಿರುವ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಡೋಣೂರ ಅವರು, “ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಮತ್ತು ಪ್ರಭಾರ ಕುಲಸಚಿವರ ವಿರುದ್ಧ ವಿವಿಧ ಸಂಘಟನೆಗಳು ಮಾಡಿದ ಅಧಿಕಾರ ದುರ್ಬಳಿಕೆಯ ಆರೋಪ ಅಸತ್ಯದಿಂದ ಕೂಡಿದ್ದು ಇದೊಂದು ಸಂಪೂರ್ಣ ಕಟ್ಟುಕತೆಯಾಗಿದೆ. ಈ ಸಂಘಟನೆಗಳು ಮಾಡಿದ ಆಪಾದನೆಗಳಲ್ಲಿ ಯಾವುದೇ ಹುರುಳಿಲ್ಲ. ವಿಶ್ವವಿದ್ಯಾಲಯದ ಹೆಸರಿಗೆ ಕಳಂಕ ತರುವ ದುರುದ್ದೇಶ ಈ ಆಪಾದನೆಗಳ ಹಿಂದೆ ಕೆಲಸ ಮಾಡಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಪ್ರಭಾರಿಗಳ ಕಾರ್ಯಶೈಲಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ

ವಿಶ್ವವಿದ್ಯಾಲಯ ನೇಮಕಾತಿಯಲ್ಲಿ ಆಕ್ರಮ ಎಸಗಿದೆ ಎಂಬ ಆರೋಪಕ್ಕೆ ಪ್ರತಿಕ್ರಯಿಸಿರುವ ಅವರು, “ವಿಶ್ವವಿದ್ಯಾಲಯದಲ್ಲಿ ನೇಮಕಾತಿಯೇ ಮಾಡಿಲ್ಲ, ಆದ್ದರಿಂದ ಆಕ್ರಮ ಹೇಗೆ ನಡೆಯುತ್ತದೆ? ಹಂಗಾಮಿ ಆಡಳಿತ ಯಾವ ನೇಮಕಾತಿಯನ್ನೂ ಮಾಡಿಲ್ಲ. ಬದಲಿಗೆ ಆಕ್ರಮದಿಂದ ವಿಶ್ವವಿದ್ಯಾಲಯದ ಒಳಗೆ ನುಗ್ಗಿದ ಕೆಲವರನ್ನು ಮರಳಿ ಕಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ಹಣಕಾಸಿನ ದುರ್ಬಳಿಕೆಯ ಆರೋಪಕ್ಕೆ ಉತ್ತರಿಸಿರುವ ಅವರು, “ಕಾರ್ಯಕಾರಿ ಮಂಡಳಿಯು ಯಾವುದೇ ಅಧಿಕಾರಿಗೆ ಹಣಕಾಸು ಬಳಸುವ ಅಧಿಕಾರ ನೀಡುವುದಿಲ್ಲ. ಹೀಗಿರುವಾಗ ಕಾರ್ಯಕಾರಿ ಮಂಡಳಿಯ ನಿಯಮ ಮುರಿಯುವ ಪ್ರಶ್ನೆಯೇ ಇಲ್ಲಿ ಬರುವುದಿಲ್ಲ. ಹಂಗಾಮಿ ಕುಲಪತಿ 4 ಲಕ್ಷ ಹಣ ಬಳಸಲು ಕುಲಸಚಿವರಿಗೆ ಅಧಿಕಾರ ನೀಡಿದ್ದಾರೆ ಎಂಬುದು ಸಹ ಕಲ್ಪಿತ. ಕುಲಸಚಿವರಿಗೆ ಕೇವಲ 10 ಸಾವಿರ ರೂಪಾಯಿ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವಷ್ಟೆ ಇದೆ” ಎಂದು ಹೇಳಿದ್ದಾರೆ.

ಟೆಂಡರ್ ಪ್ರಕ್ರಿಯೆ ನಡೆಸದೆ 5 ಲಕ್ಷ ರೂಪಾಯಿವರೆಗೆ ಸಾಮಗ್ರಿಗಳನ್ನು ಖರೀದಿಸಿದ್ದಾರೆ ಎಂಬ ಆರೋಪವನ್ನು ಪ್ರೊ. ಡೋಣೂರ ಸಂಪೂರ್ಣ ಸುಳ್ಳು ಎಂದು  ಹೇಳಿದ್ದಾರೆ. “ವಿಶ್ವವಿದ್ಯಾಲಯದಲ್ಲಿ ಪರ್ಚೆಸ್ ವಿಭಾಗ ಮತ್ತು ಪರ್ಚೆಸ್ ಸಮಿತಿ ಇರುತ್ತವೆ. ಇವು ವಿಶ್ವವಿದ್ಯಾಲಯಕ್ಕೆ ಬೇಕಾದ ವಸ್ತುಗಳನ್ನು ಹಣಕಾಸು ನಿಯಮಗಳಿಗೆ ಅನುಸಾರವಾಗಿ ಖರೀದಿಸುತ್ತವೆ. ಟೆಂಡರ್ ಉಲ್ಲಂಘನೆಯಾಗಿದೆ ಎಂಬುದು ಕಫೋಲಕಲ್ಪಿತ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಸಕ್ಕರೆ ಕಾರ್ಖಾನೆ ಮಾಲೀಕರಿಗೆ ‘ನಾಡೋಜ’: ಹಂಪಿ ವಿವಿ ಮೌಲ್ಯ ಕುಸಿತ ಎಂದ ಹಿರಿಯರು

ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಶಿವಾನಂದ ಅವರನ್ನು ಕಾನೂನುಬಾಹಿರವಾಗಿ ಮುಂದುವರೆಸಲಾಗಿದೆ ಎಂಬ ಆರೋಪ ಕೂಡ ಸು‌ಳ್ಳು ಆರೋಪವಾಗಿದೆ ಎಂದು ಅವರು ತಿಳಿಸಿದ್ದಾರೆ. “ವಿಶ್ವವಿದ್ಯಾಲಯವು ಅವರನ್ನು ಐದು ವರ್ಷಗಳ ಅಥವಾ 62 ವರ್ಷ ಎರಡರಲ್ಲಿ ಯಾವುದು ಮೊದಲು ಸಂಭವಿಸುತ್ತದೆಯೋ ಆ ಅವಧಿಗೆ ಡೆಪ್ಯೂಟೇಶನ್ ಮೇಲೆ ನೇಮಕ ಮಾಡಿತ್ತು. ಅವರನ್ನು ಮುಂದುವರೆಸುವ ಬಗ್ಗೆ ಕಾರ್ಯಕಾರಿ ಮಂಡಳಿಯಲ್ಲಿ ಚರ್ಚಿಸಲಾಗಿದೆ. ಯುಜಿಸಿ,ಎಮ್‌ಎಚ್‌ಆರ್‌ಡಿ ಮತ್ತು ರಾಷ್ಟ್ರಪತಿ ನಿರ್ದೇಶಿತ ಸದಸ್ಯರನ್ನು ಒಳಗೊಂಡ 13 ಜನರ ಕಾರ್ಯಕಾರಿ ಮಂಡಳಿ ಶಿವಾನಂದ ಅವರನ್ನು ಮುಂದುವರೆಸುವ ವಿಷಯದಲ್ಲಿ ಸೂಕ್ತ ನಿರ್ಣಯ ತೆಗೆದುಕೊಂಡಿದೆ. ಇದು ಕೇವಲ ಕುಲಪತಿ ಮತ್ತು ಕುಲಸಚಿವರ ನಿರ್ಧಾರ ಅಲ್ಲ” ಎಂದು ಅವರು ತಿಳಿಸಿದ್ದಾರೆ.

“ಸಂಘಟನೆಗಳು ಮಾಡಿದ ಎಲ್ಲಾ ಆರೋಪಗಳಲು ಅಸತ್ಯದಿಂದ ಕೂಡಿದ್ದು ವಿಶ್ವವಿದ್ಯಾಲಯದ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಸಂದೇಶ ರವಾನಿಸುವ ಉದ್ದೇಶ ಇದರ ಹಿಂದೆ ಕೆಲಸ ಮಾಡಿದೆ. ಯಾವುದೇ ಒಂದು ಶಿಕ್ಷಣ ಸಂಸ್ಥೆಯ ಬಗ್ಗೆ ಇಂಥ ತಪ್ಪು ಮಾಹಿತಿ ನೀಡುವುದು, ಇಲ್ಲಸಲ್ಲದ ಸುಳ್ಳು ಆರೋಪ ಮಾಡುವುದು, ವಿಶ್ವವಿದ್ಯಾಲಯದ ಅಧಿಕಾರಿಗಳ ಚಾರಿತ್ರ‍್ಯದ ಮೇಲೆ ವೃತಾ ಆರೋಪ ಮಾಡುವುದು ಮತ್ತು ಒಂದು ರಾಷ್ಟ್ರೀಯ ವಿಶ್ವವಿದ್ಯಾಲಯದ ಬಗ್ಗೆ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವುದು ಪ್ರಶ್ನಾರ್ಹ ಕ್ರಮ. ಎಲ್ಲ ಸಾಮಾಜಿಕ, ಸಾಂಸ್ಕೃತಿಕ ಸಂಘಟನೆಗಳಿಗೂ ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಜವಾಬ್ದಾರಿಗಳು ಇರಬೇಕು” ಎಂದು ಪ್ರೊ. ಡೋಣೂರ ಹೇಳಿದ್ದಾರೆ.

“ವಿಶ್ವವಿದ್ಯಾಲಯದ ಪ್ರಗತಿ ಸಹಿಸದ, ಶೈಕ್ಷಣಿಕ, ಆಡಳಿತಾತ್ಮಕ ಮತ್ತು ಸಂಶೋಧನಾತ್ಮಕ ಅಭಿವೃದ್ಧಿಗಾಗಿ ಕುಲಪತಿಗಳು ಕೈಕೊಂಡ ಕ್ರಮಗಳನ್ನು ಸಹಿಸದ ಕೆಲವು ಶಕ್ತಿಗಳು ಇತ್ತೀಚೆಗೆ ವಿಶ್ವವಿದ್ಯಾಲಯದ ಹೆಸರಿಗೆ ಮಸಿ ಬಡಿಯುವ ಕೆಲಸದಲ್ಲಿ ತೊಡಗಿವೆ. ಇಂಥ ಆರೋಪಗಳನ್ನು ಸಾರ್ವಜನಿಕರು ನಂಬಬಾರದು” ಎಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ ಪ್ರೊ. ಬಸವರಾಜ ಡೋಣೂರ ಅವರು ತಮ್ಮ ಸ್ಪಷ್ಟೀಕರಣದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಿ.ಬಿ ಮೆಹ್ತಾ, ಅರವಿಂದ್ ಸುಬ್ರಮಣಿಯನ್ ರಾಜೀನಾಮೆ: ಲೋಪಗಳನ್ನು ಒಪ್ಪಿಕೊಂಡ ಅಶೋಕ ವಿವಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...