Homeಕರ್ನಾಟಕ900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ

900 ಕಾರ್ಮಿಕರನ್ನು ಒಂದೇ ಗೋಡೌನ್‌ನಲ್ಲಿಟ್ಟು ನೋಂದಣಿ: ತುಮಕೂರಿನಲ್ಲಿ ಅಘಾತಕಾರಿ ಘಟನೆ

- Advertisement -
- Advertisement -

ತುಮಕೂರಿನಲ್ಲಿ ಉತ್ತರ ಭಾರತದ ಕಾರ್ಮಿಕರು ಊರಿಗೆ ತೆರಳಲು ಪರದಾಡುತ್ತಿದ್ದು, ಒಂದೇ ಗೋಡೌನ್ ನಲ್ಲಿ 900 ಕಾರ್ಮಿಕರನ್ನು ಕೂಡಿ ಹಾಕಿ ನೋಂದಣಿ ಮಾಡಲಾಗುತ್ತಿರುವ ಅಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ತುಮಕೂರಿನಲ್ಲಿ ಸಿಲುಕಿದ್ದ ಉತ್ತರ ಭಾರತದ ನೂರಾರು ಕಾರ್ಮಿಕರು ತವರಿಗೆ ಮರಳಲು ಹರಸಾಹಸ ಪಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಮೂರು ದಿನಗಳಿಂದ ಎಸ್‌ಎಲ್‌ಎನ್‌ಟಿ ರೈಸ್ ಮಿಲ್ ಗೋಡೌನ್‌ನಲ್ಲಿ 900ಕ್ಕೂ ಹೆಚ್ಚು ಸಂಘಟಿತ ವಲಯದ ಕಾರ್ಮಿಕರನ್ನ ಕೂಡಿಹಾಕಿದ್ದು, ನೋಂದಣಿ ಕೆಲಸ ನಿಧಾನಗತಿಯಲ್ಲಿ ಸಾಗಿದೆ. ಸೇವಾಸಿಂಧು ವೆಬ್ ಸೈಟ್ ನಲ್ಲಿ ಕಾರ್ಮಿಕರ ಸಂಫೂರ್ಣ ಮಾಹಿತಿ ಅಪ್ ಲೋಡ್ ಮಾಡುತ್ತಿದ್ದು ಇದುವರೆಗೆ ಕೇವಲ 80 ಮಂದಿ ಕಾರ್ಮಿಕರ ಹೆಸರನ್ನಷ್ಟೇ ನೋಂದಾಯಿಸಲು ಸಾಧ್ಯವಾಗಿದೆ ಎಂದು ತಿಳಿದು ಬಂದಿದೆ.

ಸರ್ವರ್ ಡೌನ್ ನೆಪವೊಡ್ಡಿ ಕಾರ್ಮಿಕರನ್ನು ಇಲ್ಲೇ ಉಳಿಸಿಕೊಳ್ಳುವ ಯತ್ನವೂ ಮುಂದುವರಿದಿದ್ದು, ಉತ್ತರ ಭಾರತದ ಕಾರ್ಮಿಕರಿಗೆ ಸರಿಯಾದ ವ್ಯವಸ್ಥೆ ಇಲ್ಲದೆ ಕಂಡಕಂಡವರ ಬಳಿ ನೋವು ತೋಡಿಕೊಳ್ಳುತ್ತಿದ್ದಾರೆ. ಆದಷ್ಟು ಬೇಗ ತಮ್ಮ ಊರುಗಳಿಗೆ ಮರಳಲು ಅವಕಾಶ ಮಾಡಿಕೊಂಡುವಂತೆ ಗೋಗರೆಯುತ್ತಿದ್ದರೂ ನೋಂದಣಿ ಕಾರ್ಯ ವಿಳಂಬ ಮಾಡಲಾಗುತ್ತಿದೆ.

ಅಂತರಸನಹಳ್ಳಿ ಮತ್ತು ವಸಂತನರಸಾಪುರ ಕೈಗಾರಿಕಾ ಪ್ರದೇಶದ ಕೈಗಾರಿಕೆಯಲ್ಲಿ ದುಡಿಯುತ್ತಿದ್ದವರು ಈಗ ನಿರುದ್ಯೋಗಿಗಳಾಗಿದ್ದಾರೆ. ಕಳೆದ ನಾಲ್ಕೈದು ತಿಂಗಳಿಂದ ಊರಿನ ಮುಖವೆ ನೋಡದ ಕಾರ್ಮಿಕರು, ಕೊರೊನ ಸೋಂಕಿನ ಭೀತಿಯಿಂದ ಕಂಗಾಲಾಗಿದ್ದಾರೆ. ಈ ನಡುವೆ ಕಾರ್ಮಿಕರಿಗೆ ಎರಡು ತಿಂಗಳಿಂದ ಸಂಬಳವನ್ನೇ ನೀಡಿಲ್ಲ ಎನ್ನಲಾಗಿದ್ದು, ಮುಂದಿನ ದಿನಗಳಲ್ಲಿ ಕೆಲಸ ಮಾಡಿದರೆ ಬಾಕಿ ವೇತನ ನೀಡುತ್ತೇವೆ ಎಂದು ಮಾಲಿಕರು ಹೇಳಿದ್ದಾರೆ ಎಂದು ಕಾರ್ಮಿಕರು ಹೇಳಿದ್ದಾರೆ. ಈ ಬಗ್ಗೆ ಕಾರ್ಮಿಕ ಇಲಾಖೆಯಾಗಲೀ, ಜಿಲ್ಲಾಡಳಿತವಾಗಲಿ ಉತ್ತರ ಭಾರತದ ಕಾರ್ಮಿಕರ ನೆರವಿಗೆ ಬಂದಿಲ್ಲ ಎಂದು ದೂರಲಾಗಿದೆ.


ಇದನ್ನೂ ಓದಿ:  2 ದಿನದಿಂದ ಊಟವಿಲ್ಲ, ದಯವಿಟ್ಟು ನಮ್ಮೂರಿಗೆ ಕಳಿಸಿಬಿಡಿ : ವಲಸೆ ಕಾರ್ಮಿಕರ ಅಳಲು


900 ಕಾರ್ಮಿಕರನ್ನು ನಗರದ ಹೊರವಲಯದ ಎಸ್ಎಲ್ಎಸ್.ಟಿ ರೈಸ್ ಮಿಲ್ ಗೋಡೌನ್ ನಲ್ಲಿ ಒಟ್ಟಿಗೆ ಇರಿಸಿದ್ದು ಊಟದ ವ್ಯವಸ್ಥೆ, ಕುಡಿಯುವ ನೀರು ಇತರೆ ಸೌಲಭ್ಯಗಳನ್ನು ಕಲ್ಪಿಸದೇ ಇರುವುದರಿಂದ ಬೇಸತ್ತ ಕಾರ್ಮಿಕರು ಬೆಂಗಳೂರು ಕಡೆಗೆ ತೆರಳಿದ್ದರು. ಡಾಬಸ್ ಪೇಟೆ ತಲುಪುವ ಹೊತ್ತಿಗೆ ಪೊಲೀಸರು ಕಾರ್ಮಿಕರನ್ನು ಹಿಂದಕ್ಕೆ ಕರೆತಂದಿದ್ದು, ಸಧ್ಯಕ್ಕೆ ಆಯಾ ಕಂಪನಿಗಳೇ ಕಾರ್ಮಿಕರಿಗೆ ದಿನಕ್ಕೆ ಎರಡು ಹೊತ್ತು ಊಟವನ್ನು ಒದಗಿಸುತ್ತಿವೆ. ಹಚ್ಚಿನ ಕಾರ್ಮಿಕರು ಬಿಹಾರದವರಾಗಿದ್ದು, ಇನ್ನುಳಿದವರು ಉತ್ತರಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಯಾವುದೇ ದೈಹಿಕ ಅಂತರವನ್ನು ಕಾಪಾಡದೆ ಗೋಡೌನಲ್ಲಿ ಎಲ್ಲರನ್ನೂ ಕೊಳೆಹಾಕಿದ್ದು ಅವರು ಪ್ರತಿಭಟಿಸದಂತೆ  ಪೊಲೀಸರನ್ನು ಕಾವಲಿಗೆ ಇಡಲಾಗಿದೆ.

ಪ್ರಧಾನಿ ಆಪ್ತ ಮುಖೇಶ್ ಕುಮಾರ್ ಒಡೆತನದ ವಿಶಾಲ್ ಗುಟ್ಕಾ ಮತ್ತು ಪಾನ್ ಮಸಾಲ ಕಂಪನಿಗಳಲ್ಲಿ ಸುಮಾರು 700ಕ್ಕೂ ಹೆಚ್ಚು ಬಿಹಾರದ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಅವರಲ್ಲಿ ಕೆಲವರನ್ನು ಕಳುಹಿಸಿ ಉಳಿದ ಕಾರ್ಮಿಕರನ್ನು ಕೆಲಸಕ್ಕೆ ಬಳಸಿಕೊಳ್ಳುವ ತಂತ್ರಗಳನ್ನು ಮಾಲಿಕರು ಹೆಣೆದಿದ್ದಾರೆ ಎಂದು ತಿಳಿದು ಬಂದಿದೆ. ಇದೇ ಕಾರಣಕ್ಕೆ ಅನಗತ್ಯ ವಿಳಂಬ ಮಾಡಲಾಗುತ್ತಿದ್ದು, ಕಾರ್ಮಿಕರ ಹಿತಕ್ಕಿಂತ ಲಾಭವಷ್ಟೇ ಮಾಲಿಕರಿಗೆ ಮುಖ್ಯವಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ರೈಸ್ ಮಿಲ್ ಕಾರ್ಮಿಕರು ಊರುಗಳಿಗೆ ತೆರಳಲು ವಿಳಂಬವಾಗುತ್ತಿರುವುದು ಮಾನಸಿಕ ಕಿರುಕುಳ ಅನುಭವಿಸಲು ಕಾರಣವಾಗಿದೆ.

ಸೇವಾಸಿಂಧು ವೆಬ್ ಸೈಟ್ ನಲ್ಲಿ 67 ಇಲಾಖೆಗಳಿಗೆ ಫಲಾನುಭವಿಗಳ ಅರ್ಜಿ ತುಂಬಲು ಅವಕಾಶವಿದೆ. ಕಟ್ಟಡ ಕಾರ್ಮಿಕರು, ಗುತ್ತಿಗೆದಾರರು ಮತ್ತು ಈಗ ಕಾರ್ಮಿಕರು ಕೂಡ ಅರ್ಜಿ ಸಲ್ಲಿಸಲು ಮುಂದಾಗಿರುವುದು ಸರ್ವರ್ ಡೌನ್ ಆಗಲು ಕಾರಣವಾಗಿದೆ. ಆನ್ ಲೈನ್ ನಲ್ಲಿ ಮಾಹಿತಿ ತುಂಬಿದ ನಂತರವೇ ಕಾರ್ಮಿಕರು ತಮ್ಮ ಊರುಗಳಿಗೆ ತೆರಳಬಹುದು. ತುಮಕೂರಿಗೆ ಬಂದಿರುವ ಕಾರ್ಮಿಕರಲ್ಲಿ ಬಹುತೇಕರು ಅಗತ್ಯ ದಾಖಲೆಗಳನ್ನು ಇಟ್ಟುಕೊಂಡಿಲ್ಲ ಎನ್ನಲಾಗಿದೆ.

ಮೇ 7ರವರೆಗೆ ಸಂಚಾರಕ್ಕೆ ಕೇಂದ್ರ ಸರ್ಕಾರ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದ್ದರಿಂದ ಇನ್ನೆರಡು ದಿನಗಳಲ್ಲಿ ಎಲ್ಲಾ 900 ಕಾರ್ಮಿಕರ ನೋದಂಣಿ ಆಗಬೇಕಿದೆ. ಇದು ಸಾಧ್ಯವಾಗದಿದ್ದರೆ ಕಾರ್ಮಿಕರು ಮತ್ತಷ್ಟು ಸಂಕಟಕ್ಕೆ ಗುರಿಯಾಗಲಿದ್ದಾರೆ. ಆರಂಭದಲ್ಲಿ ಎಲ್ಲಾ ಕಾರ್ಮಿಕರ ಮಾಹಿತಿ ಸಂಗ್ರಹಿಸಿದ್ದರೆ ಇಂತಹ ಸಮಸ್ಯೆ ಉದ್ಭವಿಸುತ್ತಿರಲಿಲ್ಲ ಎನ್ನಲಾಗಿದ್ದು, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಮತ್ತು ಕಂಪನಿಗಳ ಮಾಲಿಕರು ಮಾಡಿದ ಎಡವಟ್ಟಿನಿಂದ ಕಾರ್ಮಿಕರು ನೋವು ಅನುಭವಿಸಬೇಕಾಗಿ ಬಂದಿದೆ.


ಇದನ್ನೂ ಓದಿ:  ದೇಶದಾದ್ಯಂತ ಕಾರ್ಮಿಕರ ರೈಲು ಪ್ರಯಾಣದರವನ್ನು ಕಾಂಗ್ರೆಸ್‌ ಭರಿಸಲಿದೆ: ಸೋನಿಯಾ ಗಾಂಧಿ


ವಿಡಿಯೊ ನೋಡಿ: ಲಾಕ್‌ಡೌನ್‌ ಸಾಕು, ಮುಂದಿನ ದಿನಗಳಿಗೆ ಸಿದ್ಧರಾಗೋಣʼ ಎಂದು ತಜ್ಞರು ಹೇಳುತ್ತಿದ್ದಾರೆ. ನಾವು ಸಿದ್ಧರಿದ್ದೇವೆಯೇ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...