Homeಚಳವಳಿಗಣಿ ಕಾರ್ಮಿಕರ ಪುನರ್ವಸತಿಗಾಗಿ ಪಾದಯಾತ್ರೆ ಆರಂಭ: ಮೇಧಾ ಪಾಟ್ಕರ್ ಭಾಗಿ

ಗಣಿ ಕಾರ್ಮಿಕರ ಪುನರ್ವಸತಿಗಾಗಿ ಪಾದಯಾತ್ರೆ ಆರಂಭ: ಮೇಧಾ ಪಾಟ್ಕರ್ ಭಾಗಿ

- Advertisement -
- Advertisement -

ಸ್ವಾತಂತ್ರ್ಯಕ್ಕೂ ಮುಂಚೆ ನಾವು ಈಸ್ಟ್ ಇಂಡಿಯಾ ಕಂಪನಿಯ ಗುಲಾಮರಾಗಿದ್ದೆವು, ಆದರೆ ಸ್ವಾತಂತ್ರ್ಯ ನಂತರವೂ ಸಹ ಅಂಬಾನಿ ಅದಾನಿಯಂತಹ ಬಂಡವಾಳಶಾಹಿಗಳ ಗುಲಾಮರಾಗಿರಬೇಕೆಂದು ಸರ್ಕಾರ ಬಯಸುತ್ತಿದೆ. ಅದನ್ನು ತಪ್ಪಿಸುವುದಕ್ಕಾಗಿ ಹೋರಾಡುತ್ತಿರುವ ಗಣಿ ಕಾರ್ಮಿಕರಿಗೆ ಸಂಪೂರ್ಣ ಬೆಂಬಲ ನೀಡುತ್ತೇನೆ ಎಂದು ಹೋರಾಟಗಾರ್ತಿ ಮೇಧಾ ಪಾಟ್ಕರ್ ಹೇಳಿದರು.

ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕು. ಭೂರಹಿತ ಸಂತ್ರಸ್ತ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಎಕರೆ ಭೂಮಿ ನೀಡಬೇಕು ಎಂಬುದು ಸೇರಿದಂತೆ ಹಲವು ಹಕ್ಕೊತ್ತಾಯಗಳ ಈಡೇರಿಕೆಗಾಗಿ ಬಳ್ಳಾರಿ ಜಿಲ್ಲಾ ಗಣಿ ಕಾರ್ಮಿಕರ ಸಂಘವು ಸಂಡೂರಿನಿಂದ ಬಳ್ಳಾರಿವರೆಗೆ ನಡೆಸುತ್ತಿರುವ 70 ಕಿ.ಮೀಗಳ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು.

ನಿಮ್ಮ ಹೋರಾಟವು ನರ್ಮದಾ ಉಳಿಸಿ ಹೋರಾಟದಂತೆಯೆ ಬಹಳ ಕಷ್ಟದಿಂದ ಕೂಡಿದೆ. ಆದರೆ ಅಷ್ಟೇ ಪ್ರಮುಖವಾದ ಹೋರಾಟವಾಗಿದೆ. ಇದು ನಮ್ಮ ದುಡಿಮೆಯ ಪಾಲನ್ನು ಕೇಳುವ ಹೋರಾಟವಾಗಿದೆ. ಇಡೀ ದೇಶದಲ್ಲಿ ನೀರು, ಕಾಡು, ಜಮೀನನ್ನು ಖಾಸಗೀಕರಣ ಮಾಡಲಾಗುತ್ತಿದೆ. ಇದಕ್ಕೆ ಗಣಿ ಮಾಫಿಯಾದ ಅನ್ಯಾಯವೂ ಕೂಡ ಕಾರಣವಾಗಿದೆ. ಸಂತೋಷ್ ಹೆಗ್ಡೆಯಂತಹ ನ್ಯಾಯಮೂರ್ತಿಗಳು ಈ ಕುರಿತು ವಿಸ್ತೃತ ವರದಿ ಮಾಡಿದ್ದರೆ. ಹಾಗಾಗಿ ಬಳ್ಳಾರಿಯಂತಹ ಜಿಲ್ಲೆಯಲ್ಲಿ ಇಂತಹ ಹೋರಾಟಗಳ ಅಗತ್ಯವಿದೆ ಎಂದು ಮೇಧಾ ಪಾಟ್ಕರ್ ಹೇಳಿದರು.

ಎಐಸಿಸಿಟಿಯು ರಾಜ್ಯಾಧ್ಯಕ್ಷರಾದ ಕ್ಲಿಫ್ಟನ್ ರೊಜಾರಿಯೋರವರು ಮಾತನಾಡಿ, “ಪ್ರಾಣವನ್ನೇ ಒತ್ತೆಯಿಟ್ಟು, ರಕ್ತಸುರಿಸಿ ದುಡಿಯುತ್ತಿರುವ ಬಳ್ಳಾರಿ ಗಣಿ ಕಾರ್ಮಿಕರ ಸ್ಥಿತಿ ಪ್ರಾರಂಭದ ದಿನಗಳಿಂದಲೂ ಶೋಚನೀಯವಾಗಿದೆ. ಈ ಕಾರ್ಮಿಕರು ಅತ್ಯಂತ ದುರ್ಬಲ ಮತ್ತು ತಳ ಸಮುದಾಯಗಳಿಂದ ಬಂದಿದ್ದು, ಇವರಿಗೆ ಕನಿಷ್ಠ ವೇತನವೂ ದೊರೆಯುತ್ತಿಲ್ಲ. ಅಲ್ಲದೇ, ಯಾವುದೇ ಮೂಲ ಸೌಕರ್ಯಗಳನ್ನು ಒದಗಿಸದೇ ಮತ್ತು ಸರಿಯಾದ ಸುರಕ್ಷತಾ ಸಾಧನಗಳನ್ನು ನೀಡದೇ ಜೀವಕ್ಕೆ ಅಪಾಯವಿರುವಂತಹ ಕೆಲಸವನ್ನು ಮಾಡಿಸಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.

2011 ರ ಜುಲೈನಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್‌ನ ಆದೇಶದೊಂದಿಗೆ, ಬಳ್ಳಾರಿ ಜಿಲ್ಲೆಯ ಹಲವಾರು ಗಣಿಗಳಲ್ಲಿ ಕಾರ್ಮಿಕರ ರಿಟ್ರೇಂಚ್‌ಮೆಂಟ್‌ಗೆ ಸಂಬಂಧಿಸಿದ ಕಾರ್ಮಿಕ ಕಾನೂನಿನ ನಿಯಮಗಳನ್ನು ಪಾಲಿಸದೇ ಎಲ್ಲ ಗಣಿಗಾರಿಕೆ ಚಟುವಟಿಕೆಗಳನ್ನು ನಿಲ್ಲಿಸಲಾಯಿತು. ಇದರಿಂದಾಗಿ 25,000ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಕಳೆದುಕೊಂಡರು ಮತ್ತು ಇವರಿಗೆ ಯಾವುದೇ ಪರಿಹಾರ ಅಥವಾ ಪುನರ್ವಸತಿಯನ್ನು ನೀಡದೇ ಬೀದಿಪಾಲು ಮಾಡಲಾಯಿತು. ಗಣಿ ಮಾಲೀಕರು ಸುಪ್ರೀಂ ಕೋರ್ಟ್ ಆದೇಶವನ್ನೇ ನೆಪವನ್ನಾಗಿ ಮಾಡಿಕೊಂಡು ಕಾರ್ಮಿಕರಿಗೆ ನೀಡಬೇಕಾಗಿದ್ದ ರೀಟ್ರೆಂಚ್‌ಮೆಂಟ್ ಪರಿಹಾರ ಸೇರಿದಂತೆ ಇತರೆ ಶಾಸನಬದ್ಧ ಹಕ್ಕುಗಳನ್ನು ನಿರಾಕರಿಸಿದ್ದಾರೆ ಎಂದು ಅವರು ಆರೋಪಿಸಿದರು.

ಎಲ್ಲ ಗಣಿ ಕಾರ್ಮಿಕರಿಗೆ ಆರ್ ಆ್ಯಂಡ್ ಆರ್‌ನಲ್ಲಿ ಸಮಗ್ರ ಪುನರ್ವಸತಿ, ಉದ್ಯೋಗ ಕಲ್ಪಿಸಬೇಕು. ಎಲ್ಲಾ ಗಣಿ ಕಾರ್ಮಿಕರಿಗೆ ನಿವೇಶನ ಮಂಜೂರು ಮಾಡಿ ಮನೆ ನಿರ್ಮಿಸಿ ಕೊಡಬೇಕು. ನಿವೃತ್ತಿ ವಯಸ್ಸು ತಲುಪಿದ ಗಣಿ ಕಾರ್ಮಿಕರಿಗೆ ಮಾಸಿಕ 5000 ರೂ ಪಿಂಚಣಿ ನೀಡಬೇಕು. ಗಣಿ ಕಾರ್ಮಿಕರು ವಾಸಿಸುವ ಪ್ರದೇಶ ವ್ಯಾಪ್ತಿಯಲ್ಲಿ ಅಂಗನವಾಡಿ, ಸಮುದಾಯ ಭವನ, ಗ್ರಂಥಾಲಯ, ಕಾರ್ಮಿಕರ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಿತರೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಗಣಿ ಕಾರ್ಮಿಕರಿಗೆ ಆಸ್ಪತ್ರೆ ನಿರ್ಮಿಸಿ, ಗಣಿ ಕಾರ್ಮಿಕರು ಹಾಗೂ ಅವರ ಕುಟುಂಬಕ್ಕೆ ಉಚಿತ ವೈದ್ಯಕೀಯ ಸೇವೆ ಒದಗಿಸಬೇಕು. ಗಣಿ ಕಾರ್ಮಿಕ ಮಕ್ಕಳಿಗೆ ಉಚಿತ ಶಿಕ್ಷಣ, ಉನ್ನತ ಶಿಕ್ಷಣಕ್ಕೆ ಸಹಾಯಧನ ಹಾಗೂ ಮದುವೆಗೆ ಹಣಕಾಸಿನ ನೆರವು ಒದಗಿಸಬೇಕು ಎಂಬ ಹಕ್ಕೊತ್ತಾಯಗಳನ್ನಿಟ್ಟುಕೊಂಡು ಪಾದಯಾತ್ರೆ ನಡೆಯುತ್ತಿದೆ.

ವಕೀಲರಾದ ಮೈತ್ರೇಯಿ ಕೃಷ್ಣನ್, ಐಟಿಐ ಕಾರ್ಮಿಕರ ಒಕ್ಕೂಟದ ಹೇಮಂತ್, ಆದಿವಾಸಿ ಸಂಘರ್ಷ ಮೋರ್ಚಾದ ಮೋಹನ್ ಸೇರಿದಂತೆ ಹೋರಾಟಕ್ಕೆ ನಟ ಚೇತನ್ ಕೂಡ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದ್ದಾರೆ.

ಎಐಸಿಸಿಟಿಯು ಸಂಘಟನೆಯ ಬೆಂಬಲದೊಂದಿಗೆ ಸಂಡೂರಿನ ಎಪಿಎಂಸಿ ಮಾರುಕಟ್ಟೆಯಿಂದ ಆರಂಭವಾದ ಪಾದಯಾತ್ರೆಯು ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ವಡ್ಡುವಿನಿಂದ ಇಂದು ಕಾರ್ಮಿಕರು ಹೆಜ್ಜೆ ಹಾಕಲಿದ್ದು ನಾಳೆ ಅಕ್ಟೋಬರ್ 13ರಂದು ಬಳ್ಳಾರಿ ಜಿಲ್ಲಾಡಳಿತದ ಕಚೇರಿಗೆ ಮುತ್ತಿಗೆ ಹಾಕುವ ಹೋರಾಟ ಹಮ್ಮಿಕೊಳ್ಳಲಾಗಿದೆ.

ಇದನ್ನೂ ಓದಿ: ಉದ್ಯೋಗ ಕಳೆದುಕೊಂಡ ಗಣಿ ಕಾರ್ಮಿಕರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಕ್ಕೆ ಒತ್ತಾಯಿಸಿ ಪಾದಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...