Homeಕರ್ನಾಟಕರಮೇಶ್ ಜಾರಕಿಹೋಳಿ ಸಂಪುಟ ಸೇರ್ಪಡೆಗೆ ಬಿಜೆಪಿಯಲ್ಲಿ ತೆರೆಮರೆಯ ಕಸರತ್ತು

ರಮೇಶ್ ಜಾರಕಿಹೋಳಿ ಸಂಪುಟ ಸೇರ್ಪಡೆಗೆ ಬಿಜೆಪಿಯಲ್ಲಿ ತೆರೆಮರೆಯ ಕಸರತ್ತು

- Advertisement -
- Advertisement -

ಸಿಡಿ ಹಗರಣದಲ್ಲಿ ಸಿಲುಕಿ ಸಚಿವ ಸಂಪುಟದಿಂದ ಹೊರಬಿದ್ದಿರುವ ಮಾಜಿ ಜಲಸಂಪನ್ಮೂಲ ಸಚಿವ ಮತ್ತು ರಾಜ್ಯ ಬಿಜೆಪಿಯ ಪ್ರಭಾವಿ ನಾಯಕ ರಮೇಶ್ ಜಾರಕಿಹೋಳಿ ಸಚಿವ ಸಂಪುಟ ಸೇರ್ಪಡೆಗೆ ಸಾಕಷ್ಟು ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ. ಸಿಡಿ ಹಗರಣದಲ್ಲಿ ಅತ್ಯಾಚಾರ ಆರೋಪ ಆ ಸಂಬಂಧ ತನಿಖೆಯನ್ನು ಎದುರಿಸುತ್ತಿರುವ ರಮೇಶ್ ಜಾರಕಿಹೋಳಿಯವರು ತಮ್ಮ ಬೆಂಬಲಿಗರ ಮೂಲಕ ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ ಎಂದು ಬಿಜೆಪಿಯ ಮೂಲಗಳಿಂದ ತಿಳಿದುಬಂದಿದೆ.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಕರ್ನಾಟಕ ಪ್ರವಾಸದ ಸಂದರ್ಭದಲ್ಲಿ ರಮೇಶ್ ಜಾರಕಿಹೋಳಿ ಸಂಪುಟ ಸೇರ್ಪಡೆ ವಿಷಯವನ್ನು ಪ್ರಸ್ತಾಪಿಸಲಿದ್ದೇವೆ ಎಂದು ಬಿಜೆಪಿಯ ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ. ಜೂನ್ 16 ಬುಧವಾರದಂದು 3 ದಿನಗಳ ಕಾಲ ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ರಮೇಶ್ ಜಾರಕಿಹೋಳಿ ವಿಚಾರ, ಮುಖ್ಯಮಂತ್ರಿ ಬದಲಾವಣೆ ಗೊಂದಲ, ಸಚಿವ ಸಂಪುಣ ವಿಸ್ತರಣೆ ಹೀಗೆ ಹಲವು ರಾಜಕೀಯ ವಿಚಾರಗಳು ಚರ್ಚೆಗೆ ಬರುವ ಸಾಧ್ಯತೆ ಇದೆ. ಆದರೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರ ಬೇಡಿಕೆ ಮತ್ತು ದೂರುಗಳಿಗೆ ಹೇಗೆ ಸ್ಪಂದಿಸುತ್ತದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ.

ಬಿಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ರಮೇಶ್ ಜಾರಕಿಹೋಳಿ ಮಹತ್ವದ ಪಾತ್ರವಹಿಸಿದ್ದಾರೆ. ಈಗ ಅವರ ವಿರುದ್ಧ ಕೇಳಿ ಬಂದಿರುವ ಆರೋಪ ರಾಜಕೀಯ ಪ್ರೇರಿತವಾದದ್ದು ಮತ್ತು ಆರೋಪದಲ್ಲಿ ಯಾವುದೇ ಹುರುಳಿಲ್ಲದಿರುವುದು ಮೇಲ್ನೋಟದಲ್ಲಿಯೇ ಕಂಡುಬರುತ್ತದೆ. ಇದನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಮನವರಿಕೆ ಮಾಡಿಕೊಡಲಾಗುವುದು ಎಂದು ಹೆಸರು ಹೇಳಲಿಚ್ಚಿಸದ ಬಿಜೆಪಿ ಪ್ರಭಾವಿ ನಾಯಕರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ : ಮುಂಬೈ : ಪೊಲೀಸ್ ಅಧಿಕಾರಿಯ ಮೇಲೆ ಅತ್ಯಾಚಾರ- ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ  ಜನ ಶಾಸಕರಲ್ಲಿ ರಮೇಶ್ ಜಾರಕಿಹೋಳಿ ಅತ್ಯಂತ ಮುಖ್ಯವಾದ ವ್ಯಕ್ತಿ. ಹಿಂದೆ ಅವರು ಹೆಚ್‌.ಡಿ. ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಕೆಡವಿ ಬಿಜೆಪಿ ಜೊತೆ ಕೈಜೋಡಿಸಿದ್ದರು. ಸಿಡಿ ಹಗರಣದ ನಂತರ ರಮೇಶ್ ಜಾರಕಿಹೋಳಿ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಆದರೆ ತೆರೆ ಮರೆಯಲ್ಲಿ ಮಾತ್ರ ತಮ್ಮ ಪ್ರಯತ್ನವನ್ನು ನಡೆಸುತ್ತಿದ್ದಾರೆ. ಬಿಜೆಪಿಯಲ್ಲಿನ ಒಂದು ವರ್ಗ ಮೊದಲಿನಿಂದಲೂ ರಮೇಶ್ ಜಾರಕಿಹೋಳಿ ಅವರ ಸಂಪುಟ ಸೇರ್ಪಡೆಗೆ ಆಕ್ಷೇಪ ವ್ಯಕ್ತಪಡಿಸುತ್ತಿದೆ ಎನ್ನಲಾಗುತ್ತಿದೆ. ಆದರೆ ಕಾಂಗ್ರೆಸ್‌ನಿಂದ ಬಿಜೆಪಿಗೆ ವಲಸೆ ಬಂದು ಸಚಿವರಾಗಿರುವ ಅನೇಕರು ಇಂದಿಗೂ ರಮೇಶ್ ಜಾರಕಿಹೋಳಿಯವರನ್ನು ತಮ್ಮ ನಾಯಕರೆಂದೇ ತಿಳಿದಿದ್ದಾರೆ. ವಲಸೆ ನಾಯಕರಲ್ಲಿ ಕೆಲವರು ಮುಖ್ಯಮಂತ್ರಿ ಬಿ.ಎಸ್..ಯಡಿಯೂರಪ್ಪನವರಲ್ಲಿ ಜಾರಕಿಹೋಳಿ ಅವರನ್ನು ಸಂಪುಟಕ್ಕೆ ಮರು ಸೇರ್ಪಡೆ ಮಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಈ ಸಂಬಂಧ ಯಾವುದೇ ಭರವಸೆಗಳನ್ನು ನೀಡಿಲ್ಲ ಎಂದು ಹೇಳಲಾಗುತ್ತಿದೆ.

ಸಿಡಿ ಹಗರಣದಿಂದ ಸಾಕಷ್ಟು ಮುಜುಗರವನ್ನು ಅನುಭವಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೋಳಿ ತಮ್ಮ ಸಚಿವ ಸಂಪುಟ ಸೇರ್ಪಡೆಯ ಕುರಿತಾಗಿಯೂ ಪ್ರತಿಕ್ರಿಯಿಸುತ್ತಿಲ್ಲ.  ಯಾವುದೇ ಪತ್ರಿಕಾ ಹೇಳಿಕೆಗಳಿಗೆ ಮತ್ತು ಸಂಪರ್ಕಕ್ಕೆ ಸಿಗುತ್ತಿಲ್ಲ. ಆದರೆ ಬಿಜೆಪಿಯ ಮೂಲಗಳ ಪ್ರಕಾರ ರಮೇಶ್ ಜಾರಕಿಹೋಳಿ ಸಂಪುಟ ಸೇರ್ಪಡೆಗೆ ತೆರೆಮರೆಯ ಕಸರತ್ತು ನಡೆಸುತ್ತಿರುವುದಂತು ನಿಜ. ಮೂಲ ಬಿಜೆಪಿಗರ ಆಕ್ಷೇಪ, ವಲಸೆ ಸಚಿವರ ಒತ್ತಡ ಇದರ ನಡುವೆಯಲ್ಲಿ ಬಿಜೆಪಿ ಹೈಕಮಾಂಡ್ ಯಾರಿಗೆ ಮಣೆಹಾಕುತ್ತದೆ? ಸಚಿವ ಸಂಪುಟ ವಿಸ್ತರಣೆಗೆ ಸದ್ಯದಲ್ಲೇ ದಿನ ನಿಗದಿಯಾಗಲಿದೆಯೇ? ಇದೆಲ್ಲಕ್ಕೂ ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್  ಸಿಂಗ್ ಬೆಂಗಳೂರು ಭೇಟಿಯನಂತರವಷ್ಟೆ ಉತ್ತರ ಸಿಗಲಿದೆ.


ಇದನ್ನೂ ಓದಿ: ಜಗತ್ತಿಗೆ ಬೋಧಿಸುವುದನ್ನು ಭಾರತದಲ್ಲಿ ಪಾಲಿಸಿ: ಮೋದಿಗೆ ಪಿ. ಚಿದಂಬರಂ ತಿರುಗೇಟು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...