Homeಕರ್ನಾಟಕಹಿಂದುಳಿದ ಮುಸ್ಲಿಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಪುನಃ ಸ್ಥಾಪಿಸಿ: ವಿದ್ಯಾರ್ಥಿ ಸಂಘಟನೆಗಳ ಆಗ್ರಹ

ಹಿಂದುಳಿದ ಮುಸ್ಲಿಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಪುನಃ ಸ್ಥಾಪಿಸಿ: ವಿದ್ಯಾರ್ಥಿ ಸಂಘಟನೆಗಳ ಆಗ್ರಹ

- Advertisement -
- Advertisement -

ಹಿಂದುಳಿದ ಮುಸ್ಲಿಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಕಿತ್ತು EWS ಕೋಟಾಗೆ ಸೇರಿಸುವ ಮೂಲಕ ಕರ್ನಾಟಕದ ಸಾಮಾಜಿಕ ನ್ಯಾಯದ ಪರಂಪರೆಯ ಮೇಲಿನ ಬಿಜೆಪಿ ದಾಳಿಯನ್ನು ಖಂಡಿಸುತ್ತೇವೆ ಎಂದು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ ಹೇಳಿದೆ.

ಈ ಕೂಡಲೇ ಹಿಂದುಳಿದ ಮುಸ್ಲಿಂಮರಿಗೆ ನೀಡಲಾಗುತ್ತಿದ್ದ 2B ಮೀಸಲಾತಿಯನ್ನು ಪುನಃ ಸ್ಥಾಪಿಸಸಬೇಕು. ಇಲ್ಲದಿದ್ದಲ್ಲಿ ಬಿಜೆಪಿಯ ಅವನತಿ ಖಚಿತ ಎಂದು AISA, ASA, ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಒಕ್ಕೂಟ, Collective, DVP, GIO, KVS, SIO ಮತ್ತು ಪರಿವರ್ತನ ವಿದ್ಯಾರ್ಥಿ ಸಂಘಟನೆಗಳು ಜಂಟಿ ಹೇಳಿಕೆ ಬಿಡುಗಡೆ ಮಾಡಿವೆ.

ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ SIO ರಾಜ್ಯ ಮುಖಂಡ ಝೀಶಾನ್ ಸಿದ್ದಿಕಿ, “ಕೇಂದ್ರ ಗೃಹ ಮಂತ್ರಿಗಳಾದ ಅಮಿತ್‌ ಶಾ ಮತ್ತು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ಮುಸ್ಲಿಂಮರಿಗೆ ಧರ್ಮಾಧಾರಿತ ಮೀಸಲಾತಿ ನೀಡಲಾಗುತ್ತಿದೆ, ಆಂಧ್ರ ಸರ್ಕಾರ ಸಹ ರದ್ದು ಮಾಡಿದೆ ಎಂಬ ಸುಳ್ಳು ಮಾಹಿತಿಯನ್ನು ನೀಡುತ್ತಿದ್ದಾರೆ. ಆದರೆ, ಆಂಧ್ರ ಪ್ರದೇಶದಲ್ಲಿ ಮುಸ್ಲಿಂಮರಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ನ್ಯಾಯಾಲಯಗಳು ರದ್ದುಗೊಳಿಸಿದಕ್ಕೆ ಕಾರಣ ಮೀಸಲಾತಿಯನ್ನು ನೀಡಲು ಪಾಲಿಸಬೇಕಿದ್ದ ಪ್ರಕ್ರಿಯೆಯನ್ನು ಪಾಲಿಸಲಾಗಿಲ್ಲ ಎಂಬ ಕಾರಣಗಳಿಗೆ. ಆದರೆ, ಕರ್ನಾಟಕದಲ್ಲಿ ಇದಕ್ಕೆ ಬೇರೆಯದೇ ಹಿನ್ನಲೆಯಿದೆ. ಕರ್ನಾಟಕದಲ್ಲಿ ಮುಸ್ಲಿಂಮರಿಗೆ ಅವರು ಸಾಮಾಜಿಕವಾಗಿ-ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂಬ ಕಾರಣಕ್ಕೆ ಮೀಸಲಾತಿ ನೀಡಲಾಗುತ್ತಿದೆ” ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಮುಸ್ಲಿಂ ಸಮುದಾಯವು ಸಾಮಾಜಿಕ-ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆಯೇ ಎಂಬ ಯಾವುದೇ ಆಧ್ಯಯನವನ್ನು ಕೈಗೊಳ್ಳದೆ ಮತ್ತು ಯಾವ ಸಮಿತಿಯ ಶಿಫಾರಸ್ಸಿಲ್ಲದೆ ಅವರಿಗೆ ಮೀಸಲಾತಿಯನ್ನು ಒದಗಿಸಲಾಗಿದೆ ಎಂದು ಹೇಳುತ್ತಿರುವುದು ಸುಳ್ಳು. ಮುಸ್ಲಿಂಮರಿಗೆ ಮೀಸಲಾತಿಯನ್ನು ನೀಡಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಶಿಫಾರಸ್ಸು ಮಾಡಿತ್ತು. ಆದರೆ ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುಳ್ಳು ನುಡಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  ಎಂಬುದನ್ನು ಸ್ಪಷ್ಟವಾಗಿ ಜನರ ಮುಂದಿರಿಸಿದೆ.

ಸ್ವಾತಂತ್ರೋತ್ತರದಲ್ಲಿ ಕರ್ನಾಟಕವು ರಚಿಸಿದ ಎಲ್‌ ಜಿ ಹಾವನೂರು ಆಯೋಗವೊಂದನ್ನು ಹೊರತುಪಡಿಸಿ ಉಳಿದೆಲ್ಲಾ ಹಿಂದುಳಿದ ವರ್ಗಗಳ ಆಯೋಗಗಳು ಕೂಡ ವಿವಿಧ ಆಯಾಮಗಳನ್ನು ಆಧರಿಸಿ, ಅಧ್ಯಯನ ನಡೆಸಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿಯನ್ನು ನೀಡಬೇಕೆಂದು ಶಿಫಾರಸ್ಸು ಮಾಡಿದೆ. ಇದನ್ನೇ ನಂತರ ಸಾಚಾರ್‌ ಸಮಿತಿ ವರದಿ ಕೂಡ ಎತ್ತಿಹಿಡಿದಿದೆ ಎಂದರು ಅವರು ತಿಳಿಸಿದರು.

ಬಿಜೆಪಿ ಸರ್ಕಾರವು ಒಳಮೀಸಲಾತಿಯ ಅನುಷ್ಟಾನ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಹೊಸ ಮೀಸಲಾತಿ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯ ಪ್ರವರ್ಗವನ್ನು ಬದಲಿಸುವ ವಿಚಾರ, ಹೀಗೆ ಎಲ್ಲಾ ವಿಚಾರಗಳಲ್ಲಿಯೂ ಮೂರು ವರ್ಷಕ್ಕೂ ಹೆಚ್ಚು ಕಾಲ ಕಣ್ಣು ಮುಚ್ಚಿ ಕುಳಿತು ಈಗ ಚುನಾವಣೆಗೆ ಇನ್ನೇನು ಮೂರು ತಿಂಗಳು ಬಾಕಿ ಉಳಿದಿರುವಾಗ ಮೀಸಲಾತಿ ನೀತಿಯನ್ನು ಬದಲಾಯಿಸಿದೆ ಎಂಬುದನ್ನು ಗಮನಿಸಿದರೆ ತಾನು ನೆಲೆಗೊಂಡಿರುವ ಏಕೈಕ ದಕ್ಷಿಣ ರಾಜ್ಯದಲ್ಲಿಯೂ ಅಧಿಕಾರ ಕಳೆದುಕೊಳ್ಳಲಿದೆ ಎಂದು ಹೆದರಿ ಬಿಜೆಪಿ ಹೀಗೆ ಮಾಡಿದೆ ಎಂಬುದು ಸ್ಪಷ್ಟ. ಅಂದರೆ ಮೀಸಲಾತಿ ನೀತಿಯ ಹೆಸರಿನಲ್ಲಿ ಚುನಾವಣೆಯಲ್ಲಿ ವೋಟು ಪಡೆಯಲ್ಲಿಕ್ಕೆ ನಡೆಸುತ್ತಿರುವ ಪ್ರಹಸನವಿದು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದು ಬಿಜೆಪಿ ಸರ್ಕಾರವು ಅಲ್ಪಸಂಖ್ಯಾತರ ಮೇಲೆ ನಡೆಸುತ್ತಿರುವ ಮತ್ತೊಂದು ದಾಳಿ ಎಂಬುದನ್ನು ಅದರಲ್ಲೂ ಮುಖ್ಯವಾಗಿ ಮುಸ್ಲಿಮರ ಶಿಕ್ಷಣದ ಹಕ್ಕಿನ ಮೇಲಿನ ದಾಳಿ ಎಂದು ನಾವು ಅರಿತಿದ್ದೇವೆ. ಹಿಜಾಬ್‌ ಹೆಸರನಲ್ಲಿ ಗಲಭೆಯೆಬ್ಬಿಸಿ ಮುಸ್ಲಿಂ ಹೆಣ್ಣು ಮಕ್ಕಳನ್ನು ಹಾಗೂ ಮೌಲಾನಾ ಆಜಾದ್‌ ನ್ಯಾಷನಲ್‌ ಫೆಲೋಷಿಪ್‌ ಮತ್ತು ಪಿ.ಹೆಚ್.ಡಿ ಸಂಶೋಧನಾರ್ಥಿಗಳಿಗೆ ನೀಡಲಾಗುತ್ತಿದ್ದ ವಿದ್ಯಾರ್ಥಿವೇತನವನ್ನು ರದ್ದುಗೊಳಿಸಿದ್ದರ ಮುಂದುವರಿಕೆಯ ಭಾಗವೇ ಇದಾಗಿದೆ ಎಂದರು.

ಸಂವಿಧಾನದ ಮೂಲ ತತ್ವವಾದ ಸಾಮಜಿಕ-ಆರ್ಥಿಕ ಹಾಗೂ ರಾಜಕೀಯ ನ್ಯಾಯ ಹಾಗೂ ಸಂವಿಧಾನಿಕ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ್ಯ ಹಾಗೂ ಭ್ರಾತೃತ್ವ ವನ್ನು ಗೌರವಿಸುವ ವಿದ್ಯಾರ್ಥಿ ಸಂಘಟನೆಗಳು ಚುನಾವಣೆ ಸನ್ನಿಹಿತವಾಗುತ್ತಿರುವ ಸಂದರ್ಭದಲ್ಲಿ ಒಂದು ಸಮುದಾಯವನ್ನು ಮತ್ತೊಂದರ ವಿರುದ್ಧ ಎತ್ತಿಕಟ್ಟಲು ಬಿಜೆಪಿಯು ನಡೆಸಿರುವ ಹುನ್ನಾರವನ್ನು ಅರಿತಿದ್ದೇವೆ ಹಾಗೂ ಕರ್ನಾಟಕದ ಜನತೆ, ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳು ಈ ಕೋಮು ಸಂಚನ್ನು ಮೀರಿ ಕುವೆಂಪು ಅವರು ಸಾರಿದ ವಿಶ್ವಮಾನವತೆಯನ್ನು ಎತ್ತಿಹಿಡಯಲಿದ್ದಾರೆ ಎಂದು ಕೆವಿಎಸ್ ಸಂಚಾಲಕ ಸರೋವರ್ ಬೆಂಕಿಕೆರೆ ತಿಳಿಸಿದರು.

ನಮ್ಮೆಲ್ಲಾ ವಿದ್ಯಾರ್ಥಿ ಸಂಘಟನೆಗಳು, ಎಲ್ಲಾ ಸಮುದಾಯಗಳ ಜೊತೆಗೆ ಹೆಜ್ಜೆಯನ್ನಿರಿಸುತ್ತಲೇ, ಮೀಸಲಾತಿಯನ್ನೂ ಹಾಗೂ ಆ ಮೂಲಕ ಸಾಮಾಜಿಕ ನ್ಯಾಯವನ್ನೂ ಮುಸ್ಲಿಂಮರಿಗೆ ಮಾತ್ರವಲ್ಲದೇ ಕರ್ನಾಟಕದ ಪ್ರತಿಯೊಬ್ಬರ ಕೈಗೆಟಕುವಂತೆ ಮಾಡಲು ಪಣತೊಡುತ್ತೇವೆ ಎಂದು ಈ ಮೂಲಕ ಸ್ಪಷ್ಟಪಡಿಸುತ್ತೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ AIFRTEಯ ಶಂಶಾಂಕ್ ಎಸ್.ಆರ್, AISAದ ಆರತ್ರಿಕ, GIOನ ಮುಬ್ಬಾರ, ಬೆಂಗಳೂರು ವಿಶ್ವಾವಿದ್ಯಾಲಯ ವಿದ್ಯಾರ್ಥಿ ಸಂಘದ ಲೋಕೇಶ್ ರಾಮ್ ಮತ್ತು ಚಂದ್ರು ಪೆರಿಯಾರ್ ಭಾಗವಹಿಸಿದ್ದರು.

ಇದನ್ನೂ ಓದಿ: ಆಂಧ್ರದಲ್ಲಿಯೂ ಮುಸ್ಲಿಂ ಮೀಸಲಾತಿ ರದ್ದು ಮಾಡಲಾಗಿದೆ: ಸುಳ್ಳು ಹೇಳಿದ ಬೊಮ್ಮಾಯಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...