Homeಮುಖಪುಟಪ್ರೇಮ ಪ್ರಸ್ತಾಪಕ್ಕೆ ತಿರಸ್ಕಾರ: ದಲಿತ ಯುವತಿಯ ಕತ್ತು ಸೀಳಿ ಬರ್ಬರವಾಗಿ ಕೊಂದ ಸವರ್ಣಿಯ ಯುವಕ

ಪ್ರೇಮ ಪ್ರಸ್ತಾಪಕ್ಕೆ ತಿರಸ್ಕಾರ: ದಲಿತ ಯುವತಿಯ ಕತ್ತು ಸೀಳಿ ಬರ್ಬರವಾಗಿ ಕೊಂದ ಸವರ್ಣಿಯ ಯುವಕ

- Advertisement -
- Advertisement -

ಪ್ರೇಮ ಪ್ರಸ್ತಾಪವನ್ನು ಒಪ್ಪದಿದ್ದಕ್ಕೆ ಸವರ್ಣಿಯ ಹಿಂದು ಯುವಕನೋರ್ವ ಪರಿಶಿಷ್ಟ ಜಾತಿಗೆ ಸೇರಿದ ಯುವತಿಯನ್ನು ಕುಡುಗೋಲಿನಿಂದ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಸೋಮವಾರ ತಿರುನೆಲ್ವೆಲಿನ ನೆಲ್ಲೈಯಪ್ಪಾರ್ ದೇವಸ್ಥಾನದ ಬಳಿಯ ಗೋದಾಮೊಂದರಲ್ಲಿ ನಡೆದಿದೆ.

ತಿರುಪ್ಪನಿಕರಿಸಲ್ಕುಲಂ ನಿವಾಸಿ ಸಂಧ್ಯಾ (೧೮) ಕೊಲೆಯಾದ ಯುವತಿ. ಸಂಧ್ಯಾ ಕೆಲಸ ಮಾಡುತ್ತಿದ್ದ ಫ್ಯಾನ್ಸಿ ಸ್ಟೋರ್ ಬಳಿಯ ಗೋಲ್ಡ್ ಕವರಿಂಗ್ ಆಭರಣಗಳ ಅಂಗಡಿಯಲ್ಲಿ ಉದ್ಯೋಗಿಯಾಗಿದ್ದ ರಾಜೇಶ ಕಣ್ಣಾ ಆರು ತಿಂಗಳ ಹಿಂದೆ ಆಕೆಯೊಂದಿಗೆ ಗೆಳೆತನ ಬೆಳೆಸಿದ್ದನು. ಆತ ಪ್ರೇಮ ಪ್ರಸ್ತಾವವನ್ನು ಮುಂದಿರಿಸಿದ್ದಾಗ ಸಂಧ್ಯಾ ಅದನ್ನು ತಿರಸ್ಕರಿಸಿದ್ದಳು. ಆದಾಗ್ಯೂ ಕಣ್ಣಾ ಆಕೆಯ ಬೆನ್ನು ಬಿಟ್ಟಿರಲಿಲ್ಲ ಮತ್ತು ತಾನು ಕೆಲಸವನ್ನು ಬಿಟ್ಟಿದ್ದರೂ ಆಕೆಯನ್ನು ಫೋನ್ ಮೂಲಕ ಸಂಪರ್ಕಿಸಲು ಯತ್ನಿಸುತ್ತಿದ್ದನು.

ಎರಡು ದಿನಗಳ ಹಿಂದೆ ಸಂಧ್ಯಾಳ ಅಕ್ಕನಿಗೆ ಕಣ್ಣಾ ಕರೆ ಮಾಡಿ, ಆಕೆಯ ಬಗ್ಗೆ ದೂರಿದ್ದನು. ಸೋಮವಾರ ಮಧ್ಯಾಹ್ನ ಸಂಧ್ಯಾ ಕೆಲವು ಸಾಮಗ್ರಿಗಳನ್ನು ತರಲು ಫ್ಯಾನ್ಸಿಸ್ಟೋರ್‌ನ ಗೋದಾಮಿಗೆ ತೆರಳಿದ್ದಾಗ ಆಕೆಯನ್ನು ಕಣ್ಣಾ ಹಿಂಬಾಲಿಸಿಕೊಂಡು ಬಂದು ಕತ್ತು ಸೀಳಿ ಪರಾರಿಯಾಗಿದ್ದನು. ಸಂಧ್ಯಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಳು.

ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟವಿ ದೃಶ್ಯಗಳ ನೆರವಿನಿಂದ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.

ಇದನ್ನೂ ಓದಿ: ದಲಿತ ಕುಟುಂಬದ ಮೂವರ ಹತ್ಯೆ ಪ್ರಕರಣ: ಪೊಲೀಸರ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...