Homeಮುಖಪುಟಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಕೋಮುವಾದದ ಕುರಿತು: ರಾಜ್ಯದ ಮುಖ್ಯಮಂತ್ರಿಗಳಿಗೆ ನೆಹರೂ ಪತ್ರಗಳು

ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ ಎಂದು ನೆಹರು ಮನಗಂಡಿದ್ದರು..

- Advertisement -
- Advertisement -

| ಸಂಗ್ರಹ ಮತ್ತು ಅನುವಾದ: ಬಿ.ಶ್ರೀಪಾದ್ ಭಟ್ |

2014 ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕ್ಷಣದಿಂದ ಇಂಡಿಯಾ ದೇಶ ಹಿಂದುತ್ವ ಮೂಲಭೂತವಾದಿಗಳ ದೌರ್ಜನ್ಯದಿಂದ ನಲಗುತ್ತಿದೆ. ಹಿಂದೂ ಧರ್ಮದಲ್ಲಿ ಜಾತೀಯತೆಯ ಕ್ರೌರ್ಯದಿಂದ ಉಸಿರುಗಟ್ಟುತ್ತಿದ್ದರೂ ಅಲ್ಲೇ ಸಾಯಬೇಕೇ ಹೊರತು ಯಾವುದೇ ಮತಕ್ಕೆ ಹೋಗುವಂತಿಲ್ಲ, ಬೇರೆ ಧರ್ಮದವರು ಸಾರ್ವಜನಿಕವಾಗಿ ಬದುಕುವಂತಿಲ್ಲ, ದನ ತಿನ್ನುವಂತಿಲ್ಲ, ಮಹಿಳೆ ಮಂಗಳಸೂತ್ರ, ಕಾಲುಂಗರ ಧರಿಸಲೇಬೇಕು.

ಹೀಗೆ ಸಂಘ ಪರಿವಾರದ ಎಣೆಯಿಲ್ಲದಷ್ಟು ಹಿಂದೂಯಿಸಂನ ಮತೀಯ ಮೂಲಭೂತವಾದ ಇಂದು ಪ್ರಜ್ಞಾವಂತರನ್ನು ಉಸಿರುಗಟ್ಟಿಸುತ್ತಿದೆ. ಸಂಘ ಪರಿವಾರದ ಈ ಪ್ರಜಾಪ್ರಭುತ್ವ ವಿರೋಧಿ ಫೆನಟಿಸಂ ಅನ್ನು ಆಗಿನ ಪ್ರಧಾನಿ ನೆಹರೂ ಅವರು ನಲವತ್ತರ ದಶಕದಲ್ಲೇ ಮನಗಂಡಿದ್ದರು. ಆರೆಸ್ಸೆಸ್ ಅನ್ನು ಒಂದು ಅಪಾಯಕಾರಿ ಸೀಕ್ರೆಟ್ ಸೊಸೈಟಿ ಎಂದು ಎಚ್ಚರಿಸಿದ್ದರು. ಈ ಕೋಮುವಾದಿ ದುಷ್ಟ ಶಕ್ತಿಗಳು ದೇಶಕ್ಕೆ ಸದಾ ಕಂಟಕಪ್ರಾಯರಾಗಿರುತ್ತಾರೆ ಎಂದು ನಿರ್ದಾಕ್ಷಿಣ್ಯವಾಗಿ ಬರೆದಿದ್ದರು. ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲಾ ಮುಖ್ಯಮಂತ್ರಿಗಳಿಗೆ ಪ್ರತಿ ಹದಿನೈದು ದಿನಕ್ಕೊಮ್ಮೆ ತಪ್ಪದೆ ನಿಯಮಿತವಾಗಿ ಪತ್ರ ಬರೆಯುತ್ತಿದ್ದರು. ಅವುಗಳಲ್ಲಿ ಆಯ್ದ ಕೋಮುವಾದಕ್ಕೆ ಸಂಬಂಧಿಸಿದ ಕೆಲವು ಪತ್ರಗಳನ್ನು ಇಲ್ಲಿ ಅನುವಾದಿಸಲಾಗಿದೆ.

ಪತ್ರ 1

ಕೇಂದ್ರ ಅಥವಾ ಪ್ರಾದೇಶಿಕ ಯಾವುದೇ ಸರ್ಕಾರವಾಗಿರಲಿ ಒಂದು ಸರ್ಕಾರವಾಗಿ ನಾವು ಯಾವುದೇ ಗುಂಪು ಅಥವ ಪಕ್ಷದ ಪರವಾಗಿ ಪಕ್ಷಪಾತಿಯಾಗಿ ವರ್ತಿಸಬಾರದು. ಒಂದು ಸರ್ಕಾರವಾಗಿ ನಾವು ಕೇವಲ ಕೆಲವೇ ಜನರ ಗುಂಪು ಮಾತ್ರ ಎಂದು ಪರಿಗಣಿಸಬಾರದು ಏಕೆಂದರೆ ನಮಗೆ ಆದರ್ಶಗಳಿವೆ, ಸಿದ್ಧಾಂತಗಳಿವೆ. ಯಾವುದೇ ವ್ಯಕ್ತಿ ಅಥವಾ ಗುಂಪು ಆ ಅದರ್ಶಗಳನ್ನು,
ಸಿದ್ಧಾಂತಗಳನ್ನು ವಿರೋಧಿಸಿದರೆ ನಮ್ಮ ಸಂಪೂರ್ಣ ಸಾಮಥ್ರ್ಯ ಬಲದಿಂದ ನಾವು ಆ ಸವಾಲನ್ನು ಸ್ವೀಕರಿಸಬೇಕು ಮತ್ತು ಅದನ್ನು ಸ್ವೀಕರಿಸಲು ಪ್ರಸ್ತಾವಿಸುತ್ತೇವೆ.

ಕಳೆದ ಕೆಲವು ವರ್ಷಗಳಿಂದ ಮುಸ್ಲಿಂ ಲೀಗ್ ಮತ್ತು ಪಾಕಿಸ್ತಾನ ದೇಶವು ಪ್ರಾರಂಭಿಸಿದ ಕೆಲವು ದುಷ್ಟ ನೀತಿಗಳಿಂದಾಗಿ ಉಂಟಾದ ಘೋರವಾದ ಪರಿಣಾಮಗಳ ಕುರಿತಾಗಿ ನಾನು ನಿಮಗೆಲ್ಲ ಬರೆಯುವ ಅವಶ್ಯಕತೆ ಇಲ್ಲವೆಂದೇ ಭಾವಿಸುತ್ತೇನೆ. ಇದರ ಕುರಿತಾಗಿ ನಮಗೆಲ್ಲ ಮಾಹಿತಿ ಇದೆ ಮತ್ತು ಅದರಿಂದುಂಟಾದ ಪರಿಣಾಮಗಳು ನಮಗೆಲ್ಲ ಗೊತ್ತಿದೆ. ಈ ದುಷ್ಟ ನೀತಿಗಳಿಂದ ಉಂಟಾದ
ಪರಿಣಾಮಗಳು ಸಂಪೂರ್ಣವಾಗಿ ಕೊನೆಯಾಗದೆ ಇನ್ನೂ ಸಶಕ್ತವಾಗಿವೆ ಮತ್ತು ಈ ಕಾರಣಕ್ಕಾಗಿ ನಾವೆಲ್ಲ ಇನ್ನು ಮುಂದೆಯೂ ಜಾಗರೂಕರಾಗಿ ಇರಬೇಕಾಗುತ್ತದೆ. ಈಗ ಇಲ್ಲಿ ಒಂದು ಬಗೆಯ ಅಪಾಯ ಮತ್ತು ಆತಂಕದ ವಾತಾವರಣವಿದೆ ಮತ್ತು ನಾವು ವಿಶ್ರಮಿಸಿಕೊಳ್ಳಲು ಸಾಧ್ಯವಿಲ್ಲ.

ಕೆಲ ಜನರು ಯುದ್ಧದ ಕುರಿತಾಗಿ ಪ್ರಾಥಮಿಕ ತಿಳುವಳಿಕೆ ಸಹ ಗೊತ್ತಿಲ್ಲದೆ ಅದರ ಕುರಿತಾಗಿ ಮೂರ್ಖತನದಿಂದ ಮಾತನಾಡುತ್ತಿದ್ದಾರೆ. ಇಂತಹ ಮಾತುಕತೆಗಳನ್ನು ನಾವು ಪುರಸ್ಕರಿಸಬಾರದು. ಆದರೆ ಅಪಾಯಕಾರಿಯಾದ ಸಾಧ್ಯತೆಗಳನ್ನು ಒಳಗೊಂಡಿರುವ ಪ್ರಸ್ತುತ ಸಂದರ್ಭದಲ್ಲಿ ನಾವು ಆಕಸ್ಮಿಕ ಘಟನೆಗಳಿಗೆ ತಯಾರಾಗಿರಬೇಕಾಗಿದೆ ಮತ್ತು ಪೂರ್ವಭಾವಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕಾಗಿದೆ.

ಇಲ್ಲಿ ನಮಗೆ ಒಳಗಿನಿಂದಾಗಲಿ ಅಥವ ಹೊರಗಿನಿಂದ ಉಂಟಾಗುವ ಅಪಾಯಗಳ ಸಾಧ್ಯತೆ ಕಡಿಮೆ ಮಟ್ಟದಲ್ಲಿದೆ. ಆದರೆ ನಮ್ಮೊಳಗಿನ ಕೋಮುವಾದಿ ಸಂಘಟನೆಗಳು ಮತ್ತು ಪ್ರತಿಗಾಮಿ ಶಕ್ತಿಗಳು ಸ್ವತಂತ್ರ ಇಂಡಿಯಾದ ಭಾವೈಕ್ಯತೆಯನ್ನು ಒಡೆಯಲು ಪ್ರಯತ್ನಿಸುತ್ತಿವೆ. ಆದರೆ ಈ ನಾಶವೇನಾದರು ಸಂಭವಿಸಿದರೆ ಅದರಿಂದುಂಟಾಗುವ ಕ್ರಿಯೆ ಪ್ರತಿಕ್ರಿಯೆಗಳಲ್ಲಿ ನಾವೆಲ್ಲರೂ ಕೊಚ್ಚಿಹೋಗುತ್ತೇವೆಂದು ಈ ಕೋಮುವಾದಿ ಸಂಘಟನೆಗಳಿಗೆ ಅರಿವಿಲ್ಲ. ಆದರೂ ಈ ನಾಶವು ಸಂಭವಿಸುವುದಿಲ್ಲ ಮತ್ತು ನಾವು ಸಧೃಡವಾಗಿ ಮತ್ತು ಪರಿಪೂರ್ಣವಾಗಿ ಈ ಪ್ರತಿಗಾಮಿ ಶಕ್ತಿಗಳೊಂದಿಗೆ ಮುಖಾಮುಖಿಯಾಗಬೇಕಾಗಿದೆ.
– 22, ನವೆಂಬರ್, 1947


ಇದನ್ನೂ ಓದಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...