HomeUncategorizedಜನಪರ ಹೋರಾಟಗಾರ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆಗೆ ಆಗ್ರಹಿಸಿ ರಾಯಚೂರು, ನಂಜನಗೂಡಿನಲ್ಲಿ ಪ್ರತಿಭಟನೆ

ಜನಪರ ಹೋರಾಟಗಾರ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆಗೆ ಆಗ್ರಹಿಸಿ ರಾಯಚೂರು, ನಂಜನಗೂಡಿನಲ್ಲಿ ಪ್ರತಿಭಟನೆ

- Advertisement -
- Advertisement -

ಪತ್ರಕರ್ತ, ಸ್ವರಾಜ್‌ ಇಂಡಿಯಾ ರಾಜ್ಯ ಕಾರ್ಯದರ್ಶಿ, ಜನಪರ ಹೋರಾಟಗಾರ ದೊಡ್ಡಿಪಾಳ್ಯ ನರಸಿಂಹಮೂರ್ತಿ ಬಿಡುಗಡೆಗೆ ಆಗ್ರಹಿಸಿ ಇಂದು ರಾಯಚೂರು, ನಂಜನಗೂಡಿನಲ್ಲಿ ಪ್ರತಿಭಟನೆಗಳು ಜರುಗಿವೆ.

ಜನಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ರಾಯಚೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ 200ಕ್ಕೂ ಅಧಿಕ ಪ್ರಜ್ಞಾವಂತರು ಭಾಗವಹಿಸಿ ಸರ್ಕಾರದ ಫ್ಯಾಸಿಸ್ಟ್‌ ಧೋರಣೆಯನ್ನು ಖಂಡಿಸಿದರು.

ಸಿಪಿಐ-ಎಂಎಲ್‌ ಪಕ್ಷದ ಮುಖಂಡರಾದ ಆರ್‌ ಮಾನಸಯ್ಯನವರು ಮಾತನಾಡಿ “ಸರ್ಕಾರ ಕಾನೂನು, ಪ್ರಜಾತಂತ್ರ, ಸಂವಿಧಾನವನ್ನು ಬಿಟ್ಟು ಹೊರಟಿದೆ. ಬಿಜೆಪಿ ಕೈಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿರುವುದರಿಂದ ಸರ್ವಾಧಿಕಾರವನ್ನು ಹೇರುತ್ತಿದೆ. ಇದನ್ನು ನಾವು ಖಂಡತುಂಡವಾಗಿ ವಿರೋಧಿಸುತ್ತೇವೆ. ಜನಪರ ಹೋರಾಟಗಾರ, ಪತ್ರಕರ್ತ ದೊಡ್ಡಿಪಾಳ್ಯ ನರಸಿಂಹಮೂರ್ತಿಯವರನ್ನು ಏಕೆ ಬಂಧಿಸಿದ್ದೀರಿ ಎಂದು ಪ್ರಭುತ್ವವನ್ನು ಪ್ರಶ್ನಿಸಲು ನಾವಿಲ್ಲಿ ಸೇರಿದ್ದೇವೆ. ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಫ್ಯಾಸಿಸ್ಟರು ಮತ್ತು ಪ್ರಜಾತಂತ್ರವಾದಿಗಳ ನಡುವಿನ ಹೋರಾಟ ಇದಾಗಿದೆ. ರೈತರು, ಕಾರ್ಮಿಕರು ತಲ್ಲಣಿಸುತ್ತಿದ್ದಾರೆ. ದಲಿತರ ಮೀಸಲಾತಿ ಅಪಾಯದಲ್ಲಿದೆ. ಇದೇ ರೀತಿಯ ದಮನ ಮುಂದುವರೆದರೆ ಪ್ರಭುತ್ವದ ವಿರುದ್ಧ ಒಂದಾಗಿ ಹೋರಾಡುತ್ತೇವೆ ಎಂದರು.

ಇದು ಕೇವಲ ನರಸಿಂಹಮೂರ್ತಿ ಒಬ್ಬರ ಬಂಧನವಲ್ಲ. ಇಡೀ ಸ್ವತಂತ್ರ ಮಾಧ್ಯಮ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಂಧನವಾಗಿದೆ. ಹಾಗಾಗಿಯೇ ರಾಜ್ಯದ ಪ್ರಜಾತಂತ್ರವಾದಿಗಳೆಲ್ಲಾ ಹೋರಾಟಕ್ಕೆ ಧುಮುಕಬೇಕೆಂದು ಕರೆ ನೀಡಿದರು.

ಸ್ವರಾಜ್‌ ಇಂಡಿಯಾ ಪಕ್ಷದ ರಾಜ್ಯಧ್ಯಕ್ಷ ಚಾಮರಸ ಮಾಲೀಪಾಟಿಲ್, ಕರ್ನಾಟಕ ಜನಶಕ್ತಿ ಕುಮಾರ್‌ ಸಮತಳ ಸೇರಿದಂತೆ ಹಲವು ಗಣ್ಯರು ಉಪಸ್ಥಿತರು.

ಇನ್ನು ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ಜನಸಂಗ್ರಾಮ ಪರಿಷತ್‌ ವತಿಯಿಂದ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು.

ಹೋರಾಟಗಾರ ನಗಲೇ ವಿಜಯ್‌ ಕುಮಾರ್‌ ಮಾತನಾಡಿ 2-3 ದಶಕದಿಂದ ನಾಡಿ ಎಲ್ಲಾ ಜನಪರ ಚಳವಳಿಗಳಲ್ಲಿ ಸಕ್ರಿಯವಾಗಿದ್ದ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯವರನ್ನು ತಲೆಮರೆಸಿಕೊಂಡಿದ್ದರು ಎನ್ನುವುದು ಸರ್ಕಾರಕ್ಕೆ ನಾಚಿಕೆಗೇಡಿನ ವಿಚಾರ. ಅವರು ಗೌರಿ ಲಂಕೇಶ್ ಪತ್ರಿಕೆಯಲ್ಲಿ ತೊಡಗಿಸಿಕೊಂಡು ಗೌರಿಯವರು ಆಶಯವನ್ನು ಮುಂದುವರೆಸುತ್ತಿದ್ದರು. ಹಾಗಾಗಿ ಅವರ ಬಂಧನವಾಗಿದೆ. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

ನಂಜನಗೂಡು ತಹಶೀಲ್ದಾರ್‌ರವರ ಮೂಲಕ ರಾಜ್ಯಪಾಲರಿಗೆ ಹಕ್ಕೊತ್ತಾಯಪತ್ರವನ್ನು ಕಳಿಸಿಕೊಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...