Homeಮುಖಪುಟಪ್ರತಿ ಹಂತದ ಮತದಾನದ ನಂತರ ಪತ್ರಿಕಾಗೋಷ್ಠಿ ನಡೆಸಿ: ಚುನಾವಣಾ ಆಯೋಗಕ್ಕೆ ಪತ್ರ ಬರೆದ ಪತ್ರಿಕಾ ಸಂಸ್ಥೆಗಳು

ಪ್ರತಿ ಹಂತದ ಮತದಾನದ ನಂತರ ಪತ್ರಿಕಾಗೋಷ್ಠಿ ನಡೆಸಿ: ಚುನಾವಣಾ ಆಯೋಗಕ್ಕೆ ಪತ್ರ ಬರೆದ ಪತ್ರಿಕಾ ಸಂಸ್ಥೆಗಳು

- Advertisement -
- Advertisement -

ಮೂರನೇ ಹಂತದ ಮತದಾನದ ನಂತರವೂ ಒಂದೇ ಒಂದು ಪತ್ರಿಕಾಗೋಷ್ಠಿಯನ್ನು ನಡೆಸದ ಚುನಾವಣಾ ಆಯೋಗದ ಕ್ರಮವನ್ನು ಖಂಡಿಸಿ ಭಾರತದ ಐದು ಪತ್ರಿಕಾ ಸಂಸ್ಥೆಗಳು ಇಂದು ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರವನ್ನು ಬರೆದಿವೆ.

ಪ್ರೆಸ್ ಕ್ಲಬ್ ಆಫ್ ಇಂಡಿಯಾ, ಇಂಡಿಯನ್ ವುಮೆನ್ ಪ್ರೆಸ್ ಕಾರ್ಪೊರೇಷನ್, ಪ್ರೆಸ್ ಅಸೋಸಿಯೇಷನ್, ವಿದೇಶಿ ವರದಿಗಾರರ ಕ್ಲಬ್ ಮತ್ತು ದೆಹಲಿ ಯೂನಿಯನ್ ಆಫ್ ಜರ್ನಲಿಸ್ಟ್‌ ಸಂಸ್ಥೆಗಳ ಅಧ್ಯಕ್ಷರು ಸಹಿ ಹಾಕಿರುವ ಪತ್ರದಲ್ಲಿ ಚುನಾವಣಾ ಆಯೋಗವು ಮೂರು ಹಂತಗಳ ಮತಗಳ ಸಂಪೂರ್ಣಅಂಕಿ-ಅಂಶಗಳನ್ನು ಬಿಡುಗಡೆ ಮಾಡಿಲ್ಲ ಎಂದು ಹೇಳಿ ಆಘಾತ ಮತ್ತು ಆಶ್ಚರ್ಯವನ್ನು ವ್ಯಕ್ತಪಡಿಸಿದೆ.

ಈ ಬೆಳವಣಿಗೆಗಳು ಚುನಾವಣೆಯ ನ್ಯಾಯಸಮ್ಮತತೆಯ ಬಗ್ಗೆ ಜನರ ಮನಸ್ಸಿನಲ್ಲಿ ಆತಂಕಕ್ಕೆ ಕಾರಣವಾಗಿವೆ ಎಂದು ಪತ್ರದಲ್ಲಿ ಹೇಳಲಾಗಿದೆ. 2019ರವರೆಗೆ ಅಂದರೆ ಕಳೆದ ಸಾರ್ವತ್ರಿಕ ಚುನಾವಣೆಯವರೆಗೆ, ಪ್ರತಿ ಹಂತದಲ್ಲಿ ಮತದಾನದ ನಂತರ ಪತ್ರಿಕಾಗೋಷ್ಠಿ ನಡೆಸುವುದು ಸಾಮಾನ್ಯವಾಗಿತ್ತು. ಮತದಾನದ ದಿನದಂದು ಏನಾಯಿತು ಎಂಬುದನ್ನು ಚುನಾವಣಾ ಆಯೋಗದಿಂದ ತಿಳಿದುಕೊಳ್ಳಲು ನಾಗರಿಕರಿಗೆ ಎಲ್ಲಾ ರೀತಿಯ ಹಕ್ಕಿದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ಮೂಲಕ ಮಾಹಿತಿ ನೀಡಿದರೆ, ಪತ್ರಕರ್ತರ ಅನುಮಾನಗಳು ಮತ್ತು ಗೊಂದಲಗಳು ನಿವಾರಣೆಯಾಗುತ್ತದೆ. ಚುನಾವಣಾ ಆಯೋಗವು ಪ್ರತಿ ಹಂತದ ಮತದಾನದ ನಂತರ ಪತ್ರಿಕಾಗೋಷ್ಠಿಯನ್ನು ನಡೆಸಬೇಕು ಮತ್ತು ಮುಂದಿನ ಮತದಾನದ ದಿನಾಂಕದೊಳಗೆ ಸಂಪೂರ್ಣ ಮತಗಳ ಸಂಖ್ಯೆ ಮತ್ತು ಮತದಾನದ ಅಂತಿಮ ಶೇಕಡಾವಾರು ಸೇರಿದಂತೆ ಸಂಪೂರ್ಣ ಸಮೀಕ್ಷೆಯ ಮಾಹಿತಿಯನ್ನು ಬಿಡುಗಡೆ ಮಾಡಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.

ಚುನಾವಣಾ ವ್ಯವಸ್ಥೆಯಲ್ಲಿ ಮತದಾರರ ವಿಶ್ವಾಸವನ್ನು ಎತ್ತಿಹಿಡಿಯಲು ಇಂತಹ ಪಾರದರ್ಶಕತೆ ಅಗತ್ಯ. ಮತದಾರರ ದತ್ತಾಂಶವನ್ನು ಬಿಡುಗಡೆ ಮಾಡದಿರುವುದು ವಿವಾದಕ್ಕೆ ಕಾರಣವಾಗುವುದರ ಜೊತೆಗೆ ಚುನಾವಣಾ ಆಯೋಗ ಇತ್ತೀಚೆಗೆ ಟೀಕೆಗೆ ಒಳಗಾಗಿದೆ. ದತ್ತಾಂಶ ಬಿಡುಗಡೆ ವಿಳಂಬದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಇಂಡಿಯಾ ಮೈತ್ರಿಕೂಟದ ಸದಸ್ಯರಿಗೆ ಪತ್ರ ಬರೆದು ಧ್ವನಿ ಎತ್ತುವಂತೆ ಆಗ್ರಹಿಸಿದ್ದರು. ಚುನಾವಣಾ ಪ್ರಕ್ರಿಯೆಯ ಪಾವಿತ್ರತೆ ಮತ್ತು ಪಾರದರ್ಶಕತೆಯನ್ನು ಖಾತ್ರಿಪಡಿಸಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಮಾದರಿ ನೀತಿ ಸಂಹಿತೆಯ ಪುನರಾವರ್ತಿತ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟವು ಚುನಾವಣಾ ಆಯೋಗಕ್ಕೆ ಆಗ್ರಹಿಸಿತ್ತು.

ಇದನ್ನು ಓದಿ: ಬಿಜೆಪಿ ಮತ್ತೆ ಗೆದ್ದರೆ, ಮೋದಿ 2 ತಿಂಗಳಲ್ಲಿ ಯೋಗಿ ಆದಿತ್ಯನಾಥ್‌ನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಕೇಜ್ರಿವಾಲ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...