ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಅನುದಾನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ನಾಳೆ ಸಂಜೆ 5 ಗಂಟೆಗೆ ಟ್ವಿಟರ್ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕನ್ನಡ ವಿವಿಯನ್ನು ಉಳಿಸುವ ಸಲುವಾಗಿ #ಕನ್ನಡವಿವಿಉಳಿಸಿ ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡುವಂತೆ ಮನವಿ ಮಾಡಿದೆ.
“ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಒದಗಿಸದೆ ರಾಜ್ಯ ಸರ್ಕಾರ ನಿಧಾನ ವಿಷವುಣಿಸಿ ಕೊಲ್ಲುತ್ತಿದೆ. ನಾವು ಒಟ್ಟಾಗಿ ನಿಂತು ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಬೇಕಿದೆ. ಹಾಗಾಗಿಯೇ ಈ ಟ್ವಿಟರ್ ಆಂದೋಲನವನ್ನು ಹಮ್ಮಿಕೊಂಡಿದ್ದೇವೆ” ಎಂದು ಸಂಘಟನೆಯ ಅಧ್ಯಕ್ಷರಾದ ನಾರಾಯಣ ಗೌಡ ಹೇಳಿದ್ದಾರೆ.
ಇದನ್ನೂ ಓದಿ: ಕನ್ನಡದಲ್ಲಿ ಕಲಿಸಿದ ಶಿಕ್ಷಕ ರಂಜಿತ್‌ಸಿಂಹ ದಿಸಾಳೆಗೆ ‘ಗ್ಲೋಬಲ್ ಟೀಚರ್ ಪ್ರೈಜ್- 2020’
ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಒದಗಿಸದೆ ರಾಜ್ಯ ಸರ್ಕಾರ ನಿಧಾನ ವಿಷವುಣಿಸಿ ಕೊಲ್ಲುತ್ತಿದೆ. ನಾವು ಒಟ್ಟಾಗಿ ನಿಂತು ವಿಶ್ವವಿದ್ಯಾಲಯವನ್ನು ಉಳಿಸಿಕೊಳ್ಳಬೇಕಿದೆ. ನಾಳೆ ಸಂಜೆ 5 ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಯೋಜಿಸಿರುವ ಟ್ವಿಟರ್ ಅಭಿಯಾನದಲ್ಲಿ ಈ ಕುರಿತು ಮಾತನಾಡೋಣ. ಸರ್ಕಾರವನ್ನು ಎಚ್ಚರಿಸೋಣ.#ಕನ್ನಡವಿವಿಉಳಿಸಿ pic.twitter.com/IJtuPKxQSS
— ನಾರಾಯಣಗೌಡ್ರು.ಟಿ.ಎ | Narayanagowdru T.A. (@narayanagowdru) December 17, 2020
#ಕನ್ನಡವಿವಿಉಳಿಸಿ ಎಂಬ ಹ್ಯಾಶ್ ಟ್ಯಾಗ್ ನೊಂದಿಗೆ ರಾಜ್ಯ ಸರ್ಕಾರದ ತಾತ್ಸಾರ ಧೋರಣೆಯನ್ನು ಖಂಡಿಸಿ ಎಲ್ಲ ಕನ್ನಡ ಮನಸುಗಳು ಸಂಜೆ 5 ಗಂಟೆಯಿಂದ ಟ್ವೀಟ್ ಮಾಡಬೇಕೆಂದು ಕರವೇ ಕೇಳಿಕೊಂಡಿದೆ.
ಇದನ್ನೂ ಓದಿ: ಸಿಬಿಸಿಎಸ್ ಪದ್ಧತಿ : ಉನ್ನತ ಶಿಕ್ಷಣದಲ್ಲಿ ಕನ್ನಡಕ್ಕೆ ಕುತ್ತು
“ಕನ್ನಡ ನುಡಿ, ಸಾಹಿತ್ಯ, ಪರಂಪರೆಗಾಗಿ ಮೀಸಲಾದ ಏಕೈಕ ವಿಶ್ವವಿದ್ಯಾಲಯ ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿರುವ ಹಂಪಿ ವಿಶ್ವವಿದ್ಯಾಲಯ. ವರ್ಷಕ್ಕೆ ಆರು ಕೋಟಿ ಅನುದಾನ ಬೇಡುವ ವಿಶ್ವವಿದ್ಯಾಲಯಕ್ಕೆ ರಾಜ್ಯ ಸರ್ಕಾರ ಈ ವರ್ಷ ನೀಡಿರುವ ಅನುದಾನ ಕೇವಲ 50 ಲಕ್ಷ ರುಪಾಯಿಗಳು. ಸಂಸ್ಥೆಯ ಗುತ್ತಿಗೆ ನೌಕರರಿಗೆ ಸಂಬಳ ಕೊಡಲು ಹಣವಿಲ್ಲದಷ್ಟು ವಿವಿ ಬಡವಾಗಿದೆ. ಹೀಗಿರುವಾಗ ಸಂಶೋಧನೆಯಂಥ ಕೆಲಸಗಳಿಗೆ ಹಣವೆಲ್ಲಿರಲು ಸಾಧ್ಯ?” ಎಂದು ಕರವೇ ಪ್ರಶ್ನಿಸಿದೆ.
“ವೋಟ್ ಬ್ಯಾಂಕ್ ರಾಜಕಾರಣ ನಡೆಸುವ ಉದ್ದೇಶದಿಂದ ಹೊಸ ಹೊಸ ಪ್ರಾಧಿಕಾರ ಸ್ಥಾಪಿಸಲು ರಾಜ್ಯ ಸರ್ಕಾರದ ಬಳಿ ಹಣವಿದೆ. ಆದರೆ ಏಕೈಕ ಕನ್ನಡ ವಿವಿಗೆ ಕೊಡಲು ಹಣವಿಲ್ಲವೆಂದರೆ ಹೇಗೆ? ಇದನ್ನು ನಾವು ಒಕ್ಕೊರಲಿನಿಂದ ಖಂಡಿಸಬೇಕಿದೆ. ನಾಳೆ (18-12-2020) ರಂದು ಸಂಜೆ ಕರ್ನಾಟಕ ರಕ್ಷಣಾ ವೇದಿಕೆ ಟ್ವಿಟರ್ ಆಂದೋಲನ ನಡೆಸುವುದರ ಜತೆಗೆ ವಿಶ್ವವಿದ್ಯಾಲಯ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟದ ರೂಪುರೇಷೆಗಳನ್ನು ನಿರ್ಧರಿಸಲಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ಹಿಂದುತ್ವದ ಬೀಜಗಳನ್ನು ತೊರೆದು ಬಹುತ್ವದ ಕನ್ನಡ ರಾಷ್ಟ್ರೀಯತೆ ಕಟ್ಟುವ ಸವಾಲುಗಳು


