Homeಮುಖಪುಟಅಪೂರ್ಣ ಅಂಕಿಅಂಶ ಬಿಡುಗಡೆ : ವಲಸೆ ಕಾರ್ಮಿಕರ ವಿಚಾರದಲ್ಲಿ ಸುಳ್ಳು ಹೇಳಿತೆ ಕೇಂದ್ರ ಸರ್ಕಾರ?

ಅಪೂರ್ಣ ಅಂಕಿಅಂಶ ಬಿಡುಗಡೆ : ವಲಸೆ ಕಾರ್ಮಿಕರ ವಿಚಾರದಲ್ಲಿ ಸುಳ್ಳು ಹೇಳಿತೆ ಕೇಂದ್ರ ಸರ್ಕಾರ?

ಅಂದರೆ 8 ಕೋಟಿ ವಲಸೆ ಕಾರ್ಮಿಕರಲ್ಲಿ ಸುಮಾರು ಒಂದು ಕೋಟಿ ಜನರನ್ನು ಕೇಂದ್ರ ಸರ್ಕಾರ ಸಾಗಿಸಿರುವುದಾಗಿ ತಿಳಿಸಿದೆ. 26 ಲಕ್ಷ ಕಾರ್ಮಿಕರು ಉಳಿದುಕೊಂಡಿದ್ದಾರೆ ಎಂದು ಹೇಳಿದೆ. ಹಾಗಾದರೆ ಉಳಿದ 6.74 ಕೋಟಿ ಕಾರ್ಮಿಕರು ಎಲ್ಲಿ ಹೋದರು?

- Advertisement -
- Advertisement -

ಲಾಕ್‌ಡೌನ್‌ ಸಂದರ್ಭದಲ್ಲಿ ಸಿಕ್ಕಿಹಾಖಿಕೊಂಡಿರುವ ವಲಸೆ ಕಾರ್ಮಿಕರ ವಿಚಾರದಲ್ಲಿ ನಿನ್ನೆ ಕಾರ್ಮಿಕ ಆಯುಕ್ತರ ಕಚೇರಿ ಬಿಡುಗಡೆ ಮಾಡಿರುವ ಅಂಕಿ ಅಂಶಗಳು ಅಪೂರ್ಣ ವಾಗಿದ್ದು ಸಾಕಷ್ಟು ಅನುಮಾನಗಳಿಗೆ ಆಸ್ಪದ ನಿಡಿದ್ದು, ಈ ಕುರಿತು ದೂರು ನೀಡಿಲು ಸಾಮಾಜಿಕ ಕಾರ್ಯಕರ್ತರೊಬ್ಬರು ಮುಂದಾಗಿರುವ ಘಟನೆ ನಡೆದಿದೆ.

ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಕೇವಲ 26 ಲಕ್ಷ ವಲಸೆ ಕಾರ್ಮಿಕರು ಮಾತ್ರ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಹೇಳಿ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ. ಈ ಕಾರಣ ದೂರು ನೀಡಲು ಮುಂದಾಗಿರುವ ವೆಂಕಟೇಶ್ ನಾಯಕ್ ಎಂಬುವವರನ್ನು ಹಫ್‌ಪೋಸ್ಟ್‌ ಮಾತನಾಡಿಸಿ ಸಂಪೂರ್ಣ ವರದಿ ನೀಡಿದೆ. ಅದರ ಸಾರಂಶ ಕೆಳಗಿನಂತಿದೆ.

ಭಾರತದಾದ್ಯಂತ ಸಿಕ್ಕಿಕೊಂಡಿರುವ ವಲಸೆ ಕಾರ್ಮಿಕರೆಷ್ಟು ಎಂಬ ಪ್ರಶ್ನೆಯಡಿ ಹಲವರು ಕಾರ್ಮಿಕ ಇಲಾಖೆಗೆ ಆರ್‌ಟಿಐ ಅರ್ಜಿ ದಾಖಲಿಸಿದ್ದಾರೆ. ಈ ಕುರಿತು ಇಲಾಕೆಯು ಜೂನ್ 2 ರಂದು ಹಲವು ದತ್ತಾಂಶಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ದತ್ತಾಂಶವನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ಮೇಲ್ನೋಟಕ್ಕೆ ಅಲ್ಲಿರುವ ಸಂಖ್ಯೆಗಳನ್ನು ಕೆಳ ಅಂದಾಜು ಮಾಡಲಾಗಿದೆ, ಅಪೂರ್ಣ ವಾಗಿದೆ ಮತ್ತು ಸೂಕ್ತ ಸ್ವರೂಪದಲ್ಲಿ ಒದಗಿಸಲಾಗಿಲ್ಲ ಮತ್ತು ಆ ಮೂಲಕ ವಿವರಗಳನ್ನು ಮರೆಮಾಡುತ್ತದೆ ಎಂದು ಆರ್‌ಟಿಐ ಕಾರ್ಯಕರ್ತರು ಆರೋಪಿಸಿದ್ದಾರೆ.

ಆರ್‌ಟಿಐ ನಲ್ಲಿ ಬಂದ ಉತ್ತರಗಳಿಗೂ, ವೆಬ್‌ಸೈಟ್‌ನಲ್ಲಿರುವ ಅಂಕಿ ಅಂಶಗಳಿಗೂ ಯಾವುದೇ ಸಂಬಂಧವಿಲ್ಲ. ಹಾಗಾಗಿ ಇದರ ವಿರುದ್ಧ ದೂರು ನೀಡುತ್ತೇನೆ. ತಳಮಟ್ಟದಲ್ಲಿ ಪಡೆದ ಪಡೆದ ಮಾಹಿತಿಯ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಲು ನಾನು ಕೇಳಲು ಯೋಜಿಸುತ್ತಿದ್ದೇನೆ. ಏಕೆಂದರೆ ಈಗಿರುವ ಈ ಡೇಟಾವು ವಲಸೆ ಕಾರ್ಮಿಕರಿಗೆ ನಾಗರಿಕ ಸಮಾಜದ ಆಸಕ್ತ ಸದಸ್ಯರಿಂದ ಯಾವುದೇ ಸಹಾಯ ಮಾಡುವುದಿಲ್ಲ ಎಂದು ವೆಂಕಟೇಶ್‌ ನಾಯಕ್‌ ಅಭಿಪ್ರಾಯಪಟ್ಟಿದ್ದಾರೆ.

ಮೇ ಮಧ್ಯಭಾಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಭಾರತದಾದ್ಯಂತ ಸಿಕ್ಕಿಬಿದ್ದ ವಲಸೆ ಕಾರ್ಮಿಕರ ಸಂಖ್ಯೆ 8 ಕೋಟಿ ಎಂದು ಹೇಳಿದ್ದರು. ನಂತರ ಮೇ 1 ಮತ್ತು 27 ರ ನಡುವೆ ಕೇಂದ್ರ ಸರ್ಕಾರವು 97 ಲಕ್ಷ ವಲಸೆ ಕಾರ್ಮಿಕರನ್ನು ಮನೆಗೆ ಕಳುಹಿಸಿದೆ ಎಂದು ಮೋದಿ ಸರ್ಕಾರದ ವಕೀಲರು ಮೇ ಕೊನೆಯ ವಾರದಲ್ಲಿ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದರು. 50 ಲಕ್ಷ ವಲಸೆ ಕಾರ್ಮಿಕರನ್ನು ಶ್ರಮಿಕ್ ವಿಶೇಷ ರೈಲುಗಳ ಮೂಲಕ ಮನೆಗೆ ಕಳುಹಿಸಲಾಗಿದ್ದರೆ, ಉಳಿದ 41 ಲಕ್ಷ ಕಾರ್ಮಿಕರನ್ನು ರಸ್ತೆ ಸಾರಿಗೆಯ ಮೂಲಕ ಕಳುಹಿಸಲಾಗಿದೆ ಎಂದು ತಿಳಿಸಿದ್ದರು.

ಅಂದರೆ 8 ಕೋಟಿ ವಲಸೆ ಕಾರ್ಮಿಕರಲ್ಲಿ ಸುಮಾರು ಒಂದು ಕೋಟಿ ಜನರನ್ನು ಕೇಂದ್ರ ಸರ್ಕಾರ ಸಾಗಿಸಿರುವುದಾಗಿ ತಿಳಿಸಿದೆ. 26 ಲಕ್ಷ ಕಾರ್ಮಿಕರು ಉಳಿದುಕೊಂಡಿದ್ದಾರೆ ಎಂದು ಹೇಳಿದೆ. ಹಾಗಾದರೆ ಉಳಿದ 6.74 ಕೋಟಿ ಕಾರ್ಮಿಕರು ಎಲ್ಲಿ ಹೋದರು? ಅವರೆಲ್ಲರೂ ತಮ್ಮ ರಾಜ್ಯಗಳಿಗೆ ನಡೆದುಕೊಂಡೇ ಹೋಗಿದ್ದಾರೆ ಎಂದು ನಾವು ಭಾವಿಸಬೇಕೆ?

ನಾಯಕ್, ತಮ್ಮ ಆರ್‌ಟಿಐ ಅರ್ಜಿಯಲ್ಲಿ, ಲಿಂಗ, ಉದ್ಯೋಗ ಮತ್ತು ಕ್ಷೇತ್ರಗಳ ಬಗ್ಗೆ ಹೆಚ್ಚಿನ ವಿವರಗಳನ್ನು ಕೋರಿದ್ದಾರೆ. ಈ ಎಲ್ಲ ಅವಶ್ಯಕತೆಗಳನ್ನು ನಿರ್ಲಕ್ಷಿಸಿ, ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಕೇವಲ ವಲಸೆ ಕಾರ್ಮಿಕರ ಸಂಖ್ಯೆಯನ್ನು ಮತ್ತು ಅವರು ಸಿಕ್ಕಿಹಾಕಿಕೊಂಡಿರುವ ರಾಜ್ಯಗಳನ್ನು ಸರಳವಾಗಿ ಹಂಚಿಕೊಂಡಿದೆ. ಆದರೆ ಈ ಡೇಟಾವನ್ನು ಯಾವಾಗ ಸಂಗ್ರಹಿಸಲಾಗಿದೆ? ಮತ್ತು ಅದು ಸಮಂಜಸವಾಗಿ ಪೂರ್ಣಗೊಂಡಿದೆಯೆ ಎಂಬ ಬಗ್ಗೆ ಯಾವುದೇ ಸೂಚನೆ ನೀಡಿಲ್ಲ.

ಅಪೂರ್ಣ ಅಂಕಿ ಅಂಶಗಳು

ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಬಹಿರಂಗಪಡಿಸಿದ ದತ್ತಾಂಶ ಮತ್ತು ಸಾರ್ವಜನಿಕವಾಗಿ ಲಭ್ಯವಿರುವ ದತ್ತಾಂಶಗಳಲ್ಲಿ ಸಾಕಷ್ಟು ವ್ಯತ್ಯಾಸಗಳಿವೆ. ಉದಾಹರಣೆಗೆ, ಕರ್ನಾಟಕದಲ್ಲಿ ಸಿಕ್ಕಿಕೊಂಡ 88,852 ವಲಸೆ ಕಾರ್ಮಿಕರಿದ್ದಾರೆ ಎಂದು ಕಾರ್ಮಿಕ ಕಚೇರಿ ಹೇಳಿಕೊಂಡಿದೆ. ಆದಾಗ್ಯೂ, ರಾಜ್ಯ ಸರ್ಕಾರದೊಂದಿಗೆ ಲಭ್ಯವಿರುವ ಅಧಿಕೃತ ಮಾಹಿತಿಯು ಕರ್ನಾಟಕ ಹೈಕೋರ್ಟ್‌ಗೆ ಬಹಿರಂಗಪಡಿಸಿದ್ದು, ರಾಜ್ಯದಲ್ಲಿ ಸಿಕ್ಕಿಬಿದ್ದ 11.6 ಲಕ್ಷ ಜನರಲ್ಲಿ 9.1 ಲಕ್ಷ ಜನರು ವಲಸೆ ಕಾರ್ಮಿಕರಾಗಿದ್ದಾರೆ ಎಂದು ತೋರಿಸುತ್ತದೆ. ಇವೆರಡರಲ್ಲಿ ನಾವು ಯಾವುದನ್ನು ನಂಬಬೇಕು ಎಂದು ವೆಂಕಟೇಶ್‌ ನಾಯಕ್ ಪ್ರಶ್ನಿಸುತ್ತಾರೆ.

ಮುಖ್ಯ ಕಾರ್ಮಿಕ ಆಯುಕ್ತರ ಕಚೇರಿ ಬಹಿರಂಗಪಡಿಸಿದ ಮಾಹಿತಿಯ ಪ್ರಕಾರ, ಅತಿ ಹೆಚ್ಚು ವಲಸೆ ಕಾರ್ಮಿಕರು ಸಿಕ್ಕಿಹಾಕಿಕೊಂಡಿರುವ ಮೊದಲ ಮೂರು ರಾಜ್ಯಗಳು ಚತ್ತೀಸ್‌ಗಡ (10,85,828), ಕೇರಳ (2,86,846) ಮತ್ತು ತೆಲಂಗಾಣ (1,84,006) ಆಗಿದೆ. ಸಿಕ್ಕಿಕೊಂಡ ವಲಸೆ ಕಾರ್ಮಿಕರ ಒಟ್ಟು ಸಂಖ್ಯೆ 26,17,218 ಮತ್ತು ಅವರಲ್ಲಿ ಹೆಚ್ಚಿನವರು (46%) ಅವರು ಸಾಮಾನ್ಯವಾಗಿ ತಾವು ವಾಸಿಸುವ ಸ್ಥಳಗಳಲ್ಲಿದ್ದಾರೆ. 43% ಜನರು ತಮ್ಮ ಕೆಲಸದ ಸ್ಥಳಗಳಲ್ಲಿ ಸಿಲುಕಿಕೊಂಡಿದ್ದಾರೆ ಮತ್ತು ಕೇವಲ 10% ರಷ್ಟು ಕಡಿಮೆ ಜನರು ನಿಜವಾದ ಪರಿಹಾರ ಶಿಬಿರಗಳಲ್ಲಿ ಅಥವಾ ಆಶ್ರಯ ಮನೆಗಳಲ್ಲಿ ವಾಸಿಸುತ್ತಿದ್ದಾರೆ.

ಈ ಮಾಹಿತಿಯು ಪ್ರಸ್ತುತ ಸಿಕ್ಕಿಹಾಕಿಕೊಂಡಿರುವ ವಲಸೆ ಕಾರ್ಮಿಕರ ಸಂಖ್ಯೆಯೋ ಅಥವಾ ಏಪ್ರಿಲ್‌ನಲ್ಲಿ ಸಿಕ್ಕಿಕೊಂಡಿದ್ದವರ ಬಗ್ಗೆ ಸಂಬಂಧಪಟ್ಟಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಮುಖ್ಯ ಮಾಹಿತಿ ಆಯುಕ್ತರ ವೆಬ್‌ಸೈಟ್‌ನಲ್ಲಿ ನಿಯತಕಾಲಿಕವಾಗಿ ಇತ್ತೀಚಿನ ಅಪೂರ್ಣ ವಾಗಿರುವ ಡೇಟಾವನ್ನು ಪೂರ್ಣ ಅಪ್‌ಲೋಡ್ ಮಾಡಲು ಮತ್ತು ನವೀಕರಿಸಲು ಕೇಂದ್ರ ಮಾಹಿತಿ ಆಯೋಗ ಕೇಳಿದೆ.

ಒಟ್ಟಾರೆಯಾಗಿ ವಲಸೆ ಕಾರ್ಮಿಕರ ವಿಚಾರದಲ್ಲಿ ಕೇಂದ್ರ ಸರ್ಕಾರ ಪಾರದರ್ಶಕವಾಗಿ ನಡೆದುಕೊಳ್ಳುತ್ತಿಲ್ಲ. ಸಂಪೂರ್ಣ ಮಾಹಿತಿಯನ್ನು ಬಿಚ್ಚಿಟ್ಟರೆ ಮಾತ್ರ ವಾಸ್ತವ ಸನ್ನಿವೇಶ ಅರಿತುಕೊಳ್ಳಲು ಸಾಧ್ಯವಾಗುತ್ತದೆ.


ಇದನ್ನೂ ಓದಿ: ಎಲ್ಲಾ ವಲಸೆ ಕಾರ್ಮಿಕರು ತಮ್ಮೂರು ತಲುಪಿದ್ದಾರೆಯೇ? ಎಷ್ಟು ಜನ ಉಳಿದುಕೊಂಡಿದ್ದಾರೆ? ಇಲ್ಲಿದೆ ಮಾಹಿತಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...