Homeಮುಖಪುಟಜಮ್ಮು ಕಾಶ್ಮೀರದ ಹೈಕೋರ್ಟ್ ಬಾರ್ ಅಸೋಸಿಯೇಶನ್ ಅಧ್ಯಕ್ಷರ ಬಿಡುಗಡೆಗೆ ಸುಪ್ರೀಂ ಆದೇಶ

ಜಮ್ಮು ಕಾಶ್ಮೀರದ ಹೈಕೋರ್ಟ್ ಬಾರ್ ಅಸೋಸಿಯೇಶನ್ ಅಧ್ಯಕ್ಷರ ಬಿಡುಗಡೆಗೆ ಸುಪ್ರೀಂ ಆದೇಶ

ಕಯೂಮ್ ಗುರುವಾರ ರಾಷ್ಟ್ರ ರಾಜಧಾನಿಯ ತಿಹಾರ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

- Advertisement -
- Advertisement -

ಜಮ್ಮು ಕಾಶ್ಮೀರ ಹೈಕೋರ್ಟ್ ಬಾರ್ ಅಸೋಸಿಯೇಶನ್ ಅಧ್ಯಕ್ಷ ಮಿಯಾನ್ ಅಬ್ದುಲ್ ಕಯೂಮ್ ಅವರನ್ನು ಬಂಧನದಿಂದ ಬಿಡುಗಡೆ ಮಾಡಲು ಕೇಂದ್ರ ಬುಧವಾರ ಒಪ್ಪಿಕೊಂಡಿದೆ ಎಂದು The Leaflet ವರದಿ ಮಾಡಿದೆ.

ಕಯೂಮ್ ಗುರುವಾರ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಅಜಯ್ ರಾಸ್ತೋಗಿ ಮತ್ತು ಅನಿರುದ್ಧ ಬೋಸ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ನ್ಯಾಯಪೀಠವು, ಜಮ್ಮು ಕಾಶ್ಮೀರ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸಲ್ಲಿಸಿದ್ದ ಮನವಿಗೆ ಅನುಮೋದನೆ ನೀಡಿತು.

ಆತನ ಕುಟುಂಬ ಖಯೂಮ್‌ನನ್ನು ಜೈಲಿನಿಂದ ಪಡೆದುಕೊಳ್ಳಲು ಅನುಮತಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಆಗಸ್ಟ್ 7 ರ ಮೊದಲು ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುವುದನ್ನು ಅಥವಾ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡುವುದನ್ನು ಅವರಿಗೆ ನಿರ್ಬಂಧಿಸಲಾಗಿದೆ.

ಆದೇಶವನ್ನು ಅಂಗೀಕರಿಸುವಾಗ, ಖಯೂಮ್ ಬಂಧನವನ್ನು ಎತ್ತಿಹಿಡಿಯುವ ಜಮ್ಮು ಕಾಶ್ಮೀರ ಹೈಕೋರ್ಟ್ ತೀರ್ಪಿನ ಯೋಗ್ಯತೆಯನ್ನು ವಿಶ್ಲೇಷಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ. ಜಮ್ಮು ಕಾಶ್ಮೀರ ಹೈಕೋರ್ಟ್ ಆದೇಶದ ವಿರುದ್ಧ ಖಯೂಮ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಜಮ್ಮು ಕಾಶ್ಮೀರದಲ್ಲಿ ಪ್ರವಾಸೋದ್ಯಮಕ್ಕೆ ಸಾಕಷ್ಟು ಸಾಮರ್ಥ್ಯವಿದೆ ಎಂದು ನ್ಯಾಯಾಲಯ ಹೇಳಿದ್ದು, ರಾಜ್ಯವು ಶೀಘ್ರದಲ್ಲೇ ಸಹಜ ಸ್ಥಿತಿಗೆ ಮರಳಲಿದೆ ಎಂದು ಆಶಿಸಿದರು.

ಕಳೆದ ವರ್ಷ ಆಗಸ್ಟ್ 5 ರಂದು ಭಾರತ ಸರ್ಕಾರ, ಭಾರತ ಸಂವಿಧಾನದ 370 ನೇ ವಿಧಿ ಅನ್ವಯ ಜಮ್ಮು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತ್ತು. ನಂತರ ಈ ಪ್ರದೇಶವನ್ನು ಜಮ್ಮು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳು ಮತ್ತು ಲಡಾಕ್ ಎಂದು ವಿಭಜಿಸಿತು.

ಅಂದು ರಾಜ್ಯದ ಹಲವಾರು ರಾಜಕೀಯ ಮುಖಂಡರನ್ನು ಬಂಧನದಲ್ಲಿಡಲಾಗಿತ್ತು. ಅವರಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮುಖಂಡರಾದ ಫಾರೂಕ್ ಅಬ್ದುಲ್ಲಾ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಈಗಾಗಲೆ ಬಿಡುಗಡೆ ಮಾಡಲಾಗಿದೆ.


ಇದನ್ನೂ ಓದಿ: ವಿಶೇಷ ಸ್ಥಾನಮಾನ ಕಸಿದ ಬೆನ್ನಿಗೆ, ಜಮ್ಮುಕಾಶ್ಮೀರದ ಜನರ ಸರ್ಕಾರಿ ಹುದ್ದೆಯನ್ನು ಕಸಿದ ಕೇಂದ್ರ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...