Homeದಲಿತ್ ಫೈಲ್ಸ್ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ - ಬೆದರಿಕೆ ಸಂದೇಶ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

- Advertisement -
- Advertisement -

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು ಆರೋಪಿಸಲಾಗಿದೆ. ನಿರಂತರ ಆನ್‌ಲೈನ್ ಕಿರುಕುಳ, ಬೆದರಿಕೆಗಳು ಮತ್ತು ಸಾಮಾಜಿಕ ಒತ್ತಡವನ್ನು ಎದುರಿಸುತ್ತಿರುವುದಾಗಿ ಆಕೆಯ ಕುಟುಂಬ ನೋವು ತೋಡಿಕೊಂಡಿದೆ.

ನಿಶು ಅವರ ತಂದೆ ಸಂಜಯ್ ಕುಮಾರ್ ಅವರು, “ತಮ್ಮ ಕುಟುಂಬದ ಸದಸ್ಯರ ಮೊಬೈಲ್ ಫೋನ್‌ಗಳಿಗೆ ನಿಂದನಾತ್ಮಕ ಸಂದೇಶಗಳು, ಅಸಭ್ಯ ಭಾಷೆ ಮತ್ತು ಬೆದರಿಕೆಗಳು ಬರುತ್ತಿವೆ. ಅಪ್ರಾಪ್ತೆಯಾಗಿರುವ ನಿಶು ಮತ್ತು ಕುಟುಂಬದ ಇತರ ಸದಸ್ಯರನ್ನು ಗುರಿಯಾಗಿಸಲಾಗುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ಈ ಸಮಸ್ಯೆಯು ಕೇವಲ ಸಾಮಾಜಿಕ ಜಾಲತಾಣಗಳ ಟ್ರೋಲಿಂಗ್‌ಗಿಂತ ಆಚೆಗೂ ಸಾಗಿದ್ದು, ಆರ್ಥಿಕ ಒತ್ತಡವನ್ನೂ ಸೃಷ್ಟಿಸಿದೆ ಎಂದು ಕುಟುಂಬ ಹೇಳಿದೆ.

“ನಿಶು ಕುಟುಂಬದ ಹಲವು ನಂಬರ್‌ಗಳಿಗೆ ಬೆದರಿಕೆ ಸಂದೇಶ”

ಬೆದರಿಕೆಗಳಿಗೆ ಸಂಬಂಧಿಸಿದ ಹಲವಾರು ಮೊಬೈಲ್ ಸಂಖ್ಯೆಗಳಿಂದ ಬಂದಿರುವ ಸಂದೇಶಗಳು, ಕಾಲ್ ರೆಕಾರ್ಡ್‌ಗಳು ಮತ್ತು ಸ್ಕ್ರೀನ್‌ಶಾಟ್‌ಗಳೊಂದಿಗೆ ಡಿಜಿಟಲ್ ಸಾಕ್ಷ್ಯವಾಗಿ ಸಂರಕ್ಷಿಸಲಾಗಿದೆ ಎಂದು ಸಂಜಯ್ ಕುಮಾರ್ ತಿಳಿಸಿದ್ದಾರೆ.

ಈ ವಿಷಯವನ್ನು ತಕ್ಷಣವೇ ಗಂಭೀರವಾಗಿ ಪರಿಗಣಿಸುವಂತೆ, ಜವಾಬ್ದಾರರನ್ನು ಗುರುತಿಸಿ ಕಾನೂನಿನನ್ವಯ ಕ್ರಮಕೈಗೊಳ್ಳುವಂತೆ ಅವರು ದೆಹಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ. ಅಲ್ಲದೆ, ತಮ್ಮ ಕುಟುಂಬಕ್ಕೆ ರಕ್ಷಣೆ ನೀಡುವಂತೆಯೂ ಅವರು ಕೋರಿದ್ದಾರೆ.

ಕೆಲವರು ತನ್ನ ಆರೋಪಗಳನ್ನು ಪ್ರಶ್ನಿಸುತ್ತಿದ್ದರೂ, ತನಗೆ ನಿಂದನಾತ್ಮಕ ಸಂದೇಶಗಳು ಮತ್ತು ಬೆದರಿಕೆಗಳು ಬರುವುದು ಮುಂದುವರೆದಿದೆ ಎಂದು ನಿಶು ಹೇಳಿದ್ದಾರೆ.

“ಕೆಲ ವ್ಯಕ್ತಿಗಳು ಫೋನ್ ಕರೆಗಳು ಮತ್ತು ಸಂದೇಶಗಳ ಮೂಲಕ ನನ್ನೊಂದಿಗೆ ಇಂತಹ ನಿಂದನಾತ್ಮಕ ಮತ್ತು ಅಸಭ್ಯ ಭಾಷೆಯನ್ನು ಬಳಸಬಹುದಾದರೆ, ನಾನು ಎಂದಾದರೂ ಅವರೊಂದಿಗೆ ನೇರವಾಗಿ ಮುಖಾಮುಖಿಯಾದರೆ ನನ್ನ ಸುರಕ್ಷತೆಯ ಬಗ್ಗೆ ನನಗೆ ಸ್ವಾಭಾವಿಕವಾಗಿಯೇ ಆತಂಕವಾಗುತ್ತದೆ” ಎಂದು ಅವರು ಹೇಳಿದ್ದಾರೆ ಎಂದು ‘ದಿ ಮೂಕ್ನಾಯಕ್’ ವರದಿ ಮಾಡಿದೆ.

ಬ್ಯಾಂಕ್ ಖಾತೆ ಸ್ಥಗಿತ: ನಿಶು ಆರೋಪ

ತಮ್ಮ ತಂದೆಯ ಬ್ಯಾಂಕ್ ಖಾತೆಯ ತನಿಖೆಗೆ ಕೆಲವರು ಒತ್ತಾಯಿಸಿದ ನಂತರ ತಮ್ಮ ಕುಟುಂಬವು ಆರ್ಥಿಕ ಒತ್ತಡವನ್ನು ಎದುರಿಸಬೇಕಾಯಿತು ಎಂದೂ ನಿಶು ಆರೋಪಿಸಿದ್ದಾರೆ.

ಅವರ ಪ್ರಕಾರ, ಅದೇ ವ್ಯಕ್ತಿಗಳಲ್ಲಿ ಕೆಲವರು ನಂತರ ಸೈಬರ್ ಅಪರಾಧ ದೂರು ದಾಖಲಿಸಿದ್ದಾರೆ, ಇದರ ಪರಿಣಾಮವಾಗಿ ಕುಟುಂಬವು ಬಳಸುತ್ತಿದ್ದ ಎಸ್‌ಬಿಐ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. ಕುಟುಂಬಕ್ಕೆ ಬೆಂಬಲ ನೀಡುವವರಿಂದ ಈ ಖಾತೆಗೆ ಆರ್ಥಿಕ ನೆರವು ಬರುತ್ತಿತ್ತು ಎಂದು ಅವರು ಹೇಳಿದ್ದಾರೆ.

ತಮ್ಮ ಕುಟುಂಬದ ಮೇಲೆ ಮಾನಸಿಕ ಮತ್ತು ಆರ್ಥಿಕ ಒತ್ತಡ ಹೇರುವ ಮತ್ತೊಂದು ಪ್ರಯತ್ನವಾಗಿ ಈ ಕೃತ್ಯ ನಡೆದಿದೆ ಎಂದು ನಿಶು ಬಣ್ಣಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...