Homeಅಂತರಾಷ್ಟ್ರೀಯಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

- Advertisement -
- Advertisement -

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

‘ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ’ಯು ಟೆಕ್ಸಾಸ್‌ನ ಬ್ರೌನ್ಸ್‌ವಿಲ್ಲೆಯಲ್ಲಿ ಕಳೆದ 50 ವರ್ಷಗಳಲ್ಲೇ ಅಮೆರಿಕದ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ತೆರೆಯುತ್ತಿದೆ ಎಂದು ಘೋಷಿಸಲು ನಾನು ಹೆಮ್ಮೆಪಡುತ್ತೇನೆ” ಎಂದು ಟ್ರಂಪ್ ಮಂಗಳವಾರ (ಮಾ.10) ತಮ್ಮ ಟ್ರೂತ್ ಸೋಶಿಯಲ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇರಾನ್ ಜೊತೆಗಿನ ಯುದ್ಧದ ಕಾರಣದಿಂದಾಗಿ ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ಆತಂಕಗಳನ್ನು ಶಮನಗೊಳಿಸಲು ಶ್ವೇತಭವನವು ಪ್ರಯತ್ನಿಸುತ್ತಿರುವ ಬೆನ್ನಲ್ಲೇ ಈ ಘೋಷಣೆ ಹೊರಬಿದ್ದಿದೆ. ತೈಲ ಮತ್ತು ಗ್ಯಾಸೋಲಿನ್ ಬೆಲೆಗಳನ್ನು ಕಡಿಮೆ ಮಾಡಲು ಟ್ರಂಪ್ ಅವರು ತುರ್ತು ಮೀಸಲು ದಾಸ್ತಾನುಗಳಿಂದ ತೈಲವನ್ನು ಬಿಡುಗಡೆ ಮಾಡುವುದು ಹಾಗೂ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ತೈಲ ಟ್ಯಾಂಕರ್‌ಗಳಿಗೆ ಮಿಲಿಟರಿ ರಕ್ಷಣೆ ನೀಡುವುದು ಸೇರಿದಂತೆ ಹಲವಾರು ಆಯ್ಕೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಟೆಕ್ಸಾಸ್‌ನ ಹೊಸ ತೈಲ ಸಂಸ್ಕರಣಾಗಾರವು ಈ ಹಿಂದೆ ‘ಎಲಿಮೆಂಟ್ ಫ್ಯುಯೆಲ್ಸ್’ ಅಭಿವೃದ್ಧಿಪಡಿಸುತ್ತಿದ್ದ ಅದೇ ಯೋಜನೆಯಾಗಿದೆ. ಜೂನ್ 2024 ರಲ್ಲಿ ಎಲಿಮೆಂಟ್ ಫ್ಯುಯೆಲ್ಸ್ ಸಂಸ್ಥೆಯು ತನ್ನ ಸೈಟ್ ಸಿದ್ಧತೆಯನ್ನು ಪೂರ್ಣಗೊಳಿಸಿರುವುದಾಗಿ ಮತ್ತು ದಿನಕ್ಕೆ ಸುಮಾರು 1,60,000 ಬ್ಯಾರೆಲ್ ತೈಲವನ್ನು ಸಂಸ್ಕರಿಸುವ ಸಾಮರ್ಥ್ಯದ ಘಟಕವನ್ನು ನಿರ್ಮಿಸಲು ಅಗತ್ಯವಾದ ಪರವಾನಗಿಗಳನ್ನು ಪಡೆದಿರುವುದಾಗಿ ಘೋಷಿಸಿತ್ತು.

ಈಗ ಎಲಿಮೆಂಟ್ ಫ್ಯುಯೆಲ್ಸ್‌ನ ವೆಬ್ ವಿಳಾಸವು ‘ಅಮೆರಿಕ ಫಸ್ಟ್ ರಿಫೈನಿಂಗ್’ ವೆಬ್‌ಸೈಟ್‌ಗೆ ಮರುನಿರ್ದೇಶಿಸಲ್ಪಡುತ್ತಿದೆ; ಟ್ರಂಪ್ ಹೇಳಿದಂತೆ ಈ ಹೊಸ ಸಂಸ್ಕರಣಾಗಾರವನ್ನು ಇದೇ ಕಂಪನಿಯು ಪ್ರಾರಂಭಿಸಲಿದೆ.

ಅಮೆರಿಕ ಫಸ್ಟ್ ರಿಫೈನಿಂಗ್ ಮಂಗಳವಾರ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಕಂಪನಿಯು ಈ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಹೊಸ ತೈಲ ಸಂಸ್ಕರಣಾಗಾರದ ಕಾಮಗಾರಿ ಆರಂಭ ಮಾಡಲು ಯೋಜಿಸಿದೆ. ಅಲ್ಲದೆ, ತಾನು ಉತ್ಪಾದಿಸುವ ಇಂಧನಗಳನ್ನು ಮಾರಾಟ ಮಾಡಲು ಈಗಾಗಲೇ 20 ವರ್ಷಗಳ ಅವಧಿಯ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಮಾರಾಟದ ಒಪ್ಪಂದವನ್ನು ರಿಲಯನ್ಸ್ ಸಂಸ್ಥೆಯೊಂದಿಗೆ ಮಾಡಿಕೊಳ್ಳಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಲು ರಿಲಯನ್ಸ್ ಸಂಸ್ಥೆಯ ಪ್ರತಿನಿಧಿಗಳು ತಕ್ಷಣಕ್ಕೆ ಲಭ್ಯವಾಗಿಲ್ಲ. ಇಂಧನ ಇಲಾಖೆಯು ಈ ಕುರಿತಾದ ಪ್ರಶ್ನೆಗಳನ್ನು ಶ್ವೇತಭವನಕ್ಕೆ ವರ್ಗಾಯಿಸಿದ್ದು, ಶ್ವೇತಭವನವು ಹೆಚ್ಚಿನ ಮಾಹಿತಿಗಾಗಿ ಕೋರಿದ ಮನವಿಗೆ ತಕ್ಷಣವೇ ಸ್ಪಂದಿಸಿಲ್ಲ ಎಂದು theprint.in ವರದಿ ಹೇಳಿದೆ.

ಟ್ರಂಪ್ ಆಡಳಿತವು ಅಮೆರಿಕದ ಇಂಧನ ಪ್ರಾಬಲ್ಯದ ನೀತಿಯನ್ನು ಅನುಸರಿಸುತ್ತಿದೆ. ಇದು ತೈಲ, ನೈಸರ್ಗಿಕ ಅನಿಲ ಮತ್ತು ಕಲ್ಲಿದ್ದಲು ಉತ್ಪಾದನೆಯನ್ನು ಹೆಚ್ಚಿಸಲು ಉತ್ತೇಜನ ನೀಡುತ್ತದೆ. ಕಳೆದ ಒಂದೂವರೆ ದಶಕದಲ್ಲಿ ‘ಶೆಲ್ ಕ್ರಾಂತಿ’ಯಿಂದಾಗಿ ಅಮೆರಿಕದ ತೈಲ ಉತ್ಪಾದನೆಯು ಗಣನೀಯವಾಗಿ ಏರಿಕೆಯಾಗಿದ್ದರೂ ಸಹ, ದೇಶವು ಹಳೆಯದಾಗುತ್ತಿರುವ ಸಂಸ್ಕರಣಾಗಾರಗಳ ಮೇಲೆ ಅವಲಂಬಿತವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಹಲವಾರು ಸಂಸ್ಕರಣಾ ಘಟಕಗಳು ಮುಚ್ಚಲ್ಪಟ್ಟಿರುವುದು ತೈಲ ಸಂಸ್ಕರಣಾ ಸಾಮರ್ಥ್ಯದ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡಿದೆ ಎಂದು ವರದಿ ತಿಳಿಸಿದೆ.

ಬ್ರೌನ್ಸ್‌ವಿಲ್ಲೆ ಸಂಸ್ಕರಣಾಗಾರವನ್ನು ಸಂಪೂರ್ಣವಾಗಿ ಅಮೆರಿಕದ ಶೇಲ್ ತೈಲದ ಮೂಲಕ ಕಾರ್ಯನಿರ್ವಹಿಸುವಂತೆ ವಿನ್ಯಾಸಗೊಳಿಸಲಾಗುವುದು ಎಂದು ಅಮೆರಿಕ ಫಸ್ಟ್ ಮಂಗಳವಾರ ತಿಳಿಸಿದೆ.

ಅಮೆರಿಕದಲ್ಲಿ ಹೊಸ ತೈಲ ಸಂಸ್ಕರಣಾಗಾರಗಳನ್ನು ನಿರ್ಮಿಸುವ ಹಿಂದಿನ ಪ್ರಯತ್ನಗಳು ಭಾರೀ ವೆಚ್ಚಗಳು, ಸಂಕೀರ್ಣವಾದ ಫೆಡರಲ್ ಮತ್ತು ರಾಜ್ಯ ಪರವಾನಗಿ ನಿಯಮಗಳು ಹಾಗೂ ಪರಿಸರವಾದಿಗಳ ವಿರೋಧದಿಂದಾಗಿ ವಿಫಲಗೊಂಡಿವೆ. 2000ರ ದಶಕದ ಮಧ್ಯಭಾಗದಲ್ಲಿ, ಫೀನಿಕ್ಸ್‌ನ ದಕ್ಷಿಣ ಭಾಗದಲ್ಲಿ ಮೆಕ್ಸಿಕನ್ ಅಥವಾ ಕೆನಡಿಯನ್ ಕಚ್ಚಾ ತೈಲವನ್ನು ಸಂಸ್ಕರಿಸುವ ‘ಅರಿಜೋನಾ ಕ್ಲೀನ್ ಫ್ಯುಯೆಲ್ಸ್ ಯೂಮಾ’ದ 2.5 ಬಿಲಿಯನ್ ಡಾಲರ್ ಮೊತ್ತದ ಯೋಜನೆಯು, ಹೂಡಿಕೆದಾರರಿಂದ ಸಾಕಷ್ಟು ಆರ್ಥಿಕ ಬೆಂಬಲ ಸಿಗದ ಕಾರಣ ಸ್ಥಗಿತಗೊಂಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುಣಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...