Homeಮುಖಪುಟಮೋದಿ ಪದವಿ ವಿವಾದ: ಕೇಜ್ರಿವಾಲ್, ಸಂಜಯ್ ಸಿಂಗ್‌ಗೆ ರಿಲೀಫ್‌ ನೀಡಿದ ಸುಪ್ರೀಂಕೋರ್ಟ್‌

ಮೋದಿ ಪದವಿ ವಿವಾದ: ಕೇಜ್ರಿವಾಲ್, ಸಂಜಯ್ ಸಿಂಗ್‌ಗೆ ರಿಲೀಫ್‌ ನೀಡಿದ ಸುಪ್ರೀಂಕೋರ್ಟ್‌

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಕುರಿತ ಹೇಳಿಕೆಗೆ ಸಂಬಂಧಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಎಎಪಿ ಸಂಸದ ಸಂಜಯ್ ಸಿಂಗ್ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.

ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು, ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ಸಮನ್ಸ್ ರದ್ದುಗೊಳಿಸುವಂತೆ ಎಎಪಿ ನಾಯಕರು ಸಲ್ಲಿಸಿರುವ ಅರ್ಜಿಯನ್ನು ನಾಲ್ಕು ವಾರಗಳೊಳಗಡೆ ವಿಲೇವಾರಿ ನಡೆಸುವಂತೆ ಗುಜರಾತ್ ಹೈಕೋರ್ಟ್‌ಗೆ ಸೂಚಿಸಿದೆ. ಗುಜರಾತ್ ಹೈಕೋರ್ಟ್ ತೀರ್ಪಿನವರೆಗೂ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಸಂಜಯ್ ಸಿಂಗ್ ಪರವಾಗಿ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಗುಜರಾತ್ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಕೋರಿ ಸಲ್ಲಿಸಿದ ಮೇಲ್ಮನವಿಯು ಬಾಕಿ ಇರುವಾಗಲೂ ತನ್ನ ಕಕ್ಷಿದಾರನನ್ನು ಅಪರಾಧಿ ಎಂದು ಪರಿಗಣಿಸಿ ಅನರ್ಹಗೊಳಿಸುವ ಉದ್ದೇಶವಿದೆ ಎಂದು ಪೀಠಕ್ಕೆ ತಿಳಿಸಿದರು. ಹೈಕೋರ್ಟ್‌ನಲ್ಲಿ ವಿಷಯ ಬಾಕಿ ಇರುವಾಗಲೂ ವಿಚಾರಣಾ ನ್ಯಾಯಾಲಯವು ಪ್ರಕರಣವನ್ನು ಮುಂದುವರಿಸುತ್ತಿದೆ ಎಂದು ಸಿಂಘ್ವಿ ಪೀಠಕ್ಕೆ ತಿಳಿಸಿದ್ದಾರೆ.

ಪ್ರಕರಣದಲ್ಲಿ ದೂರುದಾರರಾಗಿರುವ ಗುಜರಾತ್ ವಿಶ್ವವಿದ್ಯಾಲಯದ ವಿರುದ್ಧ ನನ್ನ ಕಕ್ಷಿದಾರರು ಒಂದು ಮಾತನ್ನೂ ಆಡಿಲ್ಲ. ಅಲ್ಲದೆ ವಿಶ್ವವಿದ್ಯಾನಿಲಯವು ರಾಜ್ಯ ಸರ್ಕಾರದ ಅನುದಾನಿತ ಮತ್ತು ಒಟ್ಟಾರೆಯಾಗಿ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವುದರಿಂದ ವಿಚಾರಣೆಯನ್ನು ಗುಜರಾತ್‌ನಿಂದ ಹೊರಗೆ ವರ್ಗಾಯಿಸಬಹುದೇ ಎಂದು ನಾನು ಕೇಳುತ್ತಿದ್ದೇನೆ. ನನ್ನ ಅರ್ಜಿಯಲ್ಲಿ ನಾನು ಕೋಲ್ಕತ್ತಾಗೆ ವರ್ಗಾಯಿಸುವಂತೆ ಕೇಳಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಮೋದಿ ಅವರ ಪದವಿಗಳ ಕುರಿತು ಎಎಪಿ ನಾಯಕರು ಪತ್ರಿಕಾಗೋಷ್ಠಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಮಾನಹಾನಿಕರ ಮತ್ತು ವ್ಯಂಗ್ಯ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಕೇಜ್ರಿವಾಲ್ ಮತ್ತು ಸಂಜಯ್‌ ಸಿಂಗ್ ವಿರುದ್ಧ ಗುಜರಾತ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪಿಯೂಷ್ ಪಟೇಲ್ ಅವರು ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು.

ಮೋದಿ ಅವರಿಗೆ 1978ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಕಲಾ ಪದವಿ ಮತ್ತು 1983ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯದಿಂದ ಮಾಸ್ಟರ್ ಆಫ್ ಆರ್ಟ್ಸ್ ಪದವಿಯನ್ನು ನೀಡಲಾಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಆದರೆ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು ಈ ಪದವಿಗಳನ್ನು ಕಪೋಲಕಲ್ಪಿತವಾಗಿದೆ ಎಂದು ಆರೋಪಿಸಿತ್ತು. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು, ಪ್ರಧಾನಿ ಮೋದಿ ಅವರ ಪದವಿ ಪ್ರಮಾಣಪತ್ರದ ಮಾಹಿತಿ ಕೋರಿ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು.

ಕೇಜ್ರಿವಾಲ್‌ಗೆ ಮೋದಿಯ ಶೈಕ್ಷಣಿಕ ಪದವಿಗಳ ಮಾಹಿತಿಯನ್ನು ನೀಡುವಂತೆ ಗುಜರಾತ್ ವಿಶ್ವವಿದ್ಯಾಲಯಕ್ಕೆ  ಕೇಂದ್ರ ಮಾಹಿತಿ ಆಯೋಗ ಸೂಚಿಸಿತ್ತು.  ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಮೋದಿ ಅವರ ಶೈಕ್ಷಣಿಕ ಪದವಿಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ ಮುಖ್ಯ ಮಾಹಿತಿ ಆಯುಕ್ತರ (ಸಿಐಸಿ) ಆದೇಶವನ್ನು  ಗುಜರಾತ್ ಹೈಕೋರ್ಟ್ ರದ್ದುಗೊಳಿಸಿತ್ತು.

ಕೇಜ್ರಿವಾಲ್ ಅವರು ನೀಡಿದ ಒಂದು ಹೇಳಿಕೆಯನ್ನು ಪಟೇಲ್ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪ್ರಧಾನಿ ದೆಹಲಿ ವಿಶ್ವವಿದ್ಯಾಲಯ ಮತ್ತು ಗುಜರಾತ್ ವಿಶ್ವವಿದ್ಯಾಲಯದಲ್ಲಿ ಓದಿದ್ದರೆ, ಗುಜರಾತ್ ವಿಶ್ವವಿದ್ಯಾಲಯವು ತಮ್ಮ ಹಳೆಯ ವಿದ್ಯಾರ್ಥಿ ಪ್ರಧಾನಿಯಾಗಿದ್ದಾನೆ ಎಂದು ಸಂಭ್ರಮಿಸಬೇಕು ಮತ್ತು ಅವರು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ ಮತ್ತು ಪದವಿಯನ್ನು ಬಹಿರಂಗಪಡಿಸುತ್ತಿಲ್ಲ ಎಂದು ಹೇಳಿದ್ದರು. ಗುಜರಾತ್ ವಿಶ್ವವಿದ್ಯಾನಿಲಯದ ಪ್ರತಿಷ್ಠೆಗೆ ಧಕ್ಕೆ ತರುವ ಉದ್ದೇಶದಿಂದ ಈ ಕೇಜ್ರಿವಾಲ್ ಹಾಗೂ ಸಂಜಯ್ ಸಿಂಗ್ ಅವರು ಈ ಪೋಸ್ಟ್‌ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಇದನ್ನು ಓದಿ: ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಜಾಮೀನಿನ ಮೇಲಿರುವ ಆರೋಪಿಗೆ ನೊಟೀಸ್‌ ನೀಡಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...