Homeಮುಖಪುಟಆಡಳಿತದಲ್ಲಿ ಧರ್ಮ ಬೆರೆಸುವ ಯಾರೊಂದಿಗೂ ನನಗೆ ಸಂಬಂಧವಿರುವುದಿಲ್ಲ: ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿ

ಆಡಳಿತದಲ್ಲಿ ಧರ್ಮ ಬೆರೆಸುವ ಯಾರೊಂದಿಗೂ ನನಗೆ ಸಂಬಂಧವಿರುವುದಿಲ್ಲ: ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿ

ಕರ್ನಾಟಕದಲ್ಲಿ ಈಗಾಗಲೇ ಹಲವಾರು ಬ್ರಾಹ್ಮಣ್ಯದ ಪಕ್ಷಗಳಿವೆ, ಆಪ್ ರೀತಿಯ ಇನ್ನೊಂದರ ಅಗತ್ಯವಿಲ್ಲ - ನಟ ಚೇತನ್ ಅಭಿಮತ

- Advertisement -
- Advertisement -

ಆಡಳಿತದಲ್ಲಿ ಧರ್ಮ ಬೆರೆಸುವ ಯಾರೊಂದಿಗೂ ನನಗೆ ಯಾವುದೇ ರೀತಿಯ ಸಂಬಂಧವಿರುವುದಿಲ್ಲ ಎಂದು ಖ್ಯಾತ ಸಂಗೀತ ನಿರ್ದೇಶಕ ವಿಶಾಲ್ ದದ್ಲಾನಿ ಸ್ಪಷ್ಟಪಡಿಸಿದ್ದಾರೆ.

ನೋಟುಗಳಲ್ಲಿ ಗಣೇಶ ಮತ್ತು ಲಕ್ಷ್ಮಿ ದೇವಿಯ ಫೋಟೋಗಳನ್ನು ಮುದ್ರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಈ ಹಿಂದೆ ಆಮ್ ಆದ್ಮಿ ಪಕ್ಷದ ಬೆಂಬಲಿಗರಾಗಿದ್ದ ವಿಶಾಲ್ ದದ್ಲಾನಿಯವರ ಹೇಳಿಕೆಗಳು ಬಂದಿದೆ.

ತಮ್ಮ ಟ್ವೀಟ್‌ನಲ್ಲಿ ಅರವಿಂದ್ ಕೇಜ್ರಿವಾಲ್ ಅಥವಾ ನೋಟಿನ ವಿಷಯವನ್ನು ಪ್ರಸ್ತಾಪಿಸದ ವಿಶಾಲ್ ದದ್ಲಾನಿಯವರು ಬಹಳ ಸ್ಪಷ್ಟವಾಗಿ ಇನ್ನು ಮುಂದೆ ಆಪ್‌ ಪಕ್ಷದೊಂದಿಗೆ ಯಾವುದೇ ಸಂಬಂಧ ಹೊಂದುವುದಿಲ್ಲ ಎಂದು ತಿಳಿಸಿದ್ದಾರೆ.

“ನಾವು ಜಾತ್ಯಾತೀತ, ಸಮಾಜವಾದಿ ಗಣರಾಜ್ಯ ಎಂದು ನಮ್ಮ ಭಾರತದ ಸಂವಿಧಾನ ಹೇಳುತ್ತದೆ. ಆದ್ದರಿಂದ, ಆಡಳಿತದಲ್ಲಿ ಧರ್ಮಕ್ಕೆ ಯಾವುದೇ ಸ್ಥಾನವಿರುವಂತಿಲ್ಲ. ಇನ್ನೂ ಸ್ಪಷ್ಟವಾಗಿ ಹೇಳಬೇಕೆಂದರೆ, ಸರ್ಕಾರದ ಆಡಳಿತದಲ್ಲಿ ಯಾವುದೇ ಧರ್ಮದ ಯಾವುದೇ ಭಾಗವನ್ನು ತರುವ ಯಾರೊಂದಿಗೂ ನನಗೆ ಯಾವುದೇ ಸಂಬಂಧವಿರುವುದಿಲ್ಲ” ಎಂದು ದದ್ಲಾನಿ ಟ್ವೀಟ್ ಮಾಡಿದ್ದಾರೆ.

ಕನ್ನಡ ಚಿತ್ರನಟ ಚೇತನ್ ಕೂಡ ಕೇಜ್ರಿವಾಲ್ ಮನವಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. “ಎಎಪಿ ಪಕ್ಷದ ಮುಖ್ಯಸ್ಥರಾದ ಅರವಿಂದ್ ಕೇಜ್ರಿವಾಲ್ ಅವರು ಬ್ಯಾಂಕ್ ನೋಟುಗಳ ಮೇಲೆ ಗಣೇಶ ಮತ್ತು ಲಕ್ಷ್ಮಿ ಫೋಟೋಗಳನ್ನು ಮುದ್ರಿಸಿ ಎಂದು ಆಗ್ರಹ ನೀಡಿದ್ದಾರೆ, ಇದರಿಂದ ದೇಶದ ಆರ್ಥಿಕತೆ ಸುಧಾರಿಸುತ್ತದೆ ಎಂದು ಕೂಡ ವಾದಿಸಿದ್ದಾರೆ. ಎಷ್ಟು ಅಸಂಬದ್ಧವಾದ ಹೇಳಿಕೆ! ಇಂತಹ ಅಸಾಂವಿಧಾನಿಕ ಮೂಢನಂಬಿಕೆಯ ಮೌಢ್ಯಗಳ ಹೇರಿಕೆಯನ್ನು ಕೇಜ್ರಿವಾಲ್ ಅವರು ನಿಲ್ಲಿಸಬೇಕು. ಕರ್ನಾಟಕದಲ್ಲಿ ಈಗಾಗಲೇ ಹಲವಾರು ಬ್ರಾಹ್ಮಣ್ಯದ ಪಕ್ಷಗಳಿವೆ, ಆಪ್ ರೀತಿಯ ಇನ್ನೊಂದರ ಅಗತ್ಯವಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್‌ರವರು ನೋಟುಗಳಲ್ಲಿ ದೇವರ ಚಿತ್ರವಿರಬೇಕೆಂದು ಬುಧವಾರ ಪ್ರತಿಪಾದಿಸಿದ್ದರು. “ಲಕ್ಷ್ಮಿ ಸಮೃದ್ಧಿಯ ದೇವತೆ ಮತ್ತು ಗಣೇಶನು ತೊಂದರೆಗಳನ್ನು ದೂರವಿಡುವ ದೇವರಾಗಿದ್ದು, ಈ ದೇವರುಗಳ ಚಿತ್ರ ನೋಟುಗಳ ಮೇಲೆ ಇದ್ದರೆ, ಇಡೀ ದೇಶವು ಅವರ ಆಶೀರ್ವಾದವನ್ನು ಪಡೆಯುತ್ತದೆ” ಎಂದು ಅವರು ಹೇಳಿದರು.

ರೂಪಾಯಿ ಮೌಲ್ಯ ನಿರಂತರವಾಗಿ ಕುಸಿಯುತ್ತಿರುವುದರಿಂದ ಭಾರತದ ಆರ್ಥಿಕತೆಯು ಬಿಕ್ಕಟ್ಟಿನಲ್ಲಿದೆ ಎಂದು ತಮ್ಮ ಭಾಷಣವನ್ನು ಪ್ರಾರಂಭಿಸಿದ ಅವರು, “ಆರ್ಥಿಕತೆ ಸುಧಾರಿಸುವುದನ್ನು ಖಚಿತಪಡಿಸಿಕೊಳ್ಳಲು ಹಲವಾರು ಹಂತಗಳಿವೆ. ಇದರಲ್ಲಿ ಹೆಚ್ಚಿನ ಶಾಲೆಗಳು ಮತ್ತು ಆಸ್ಪತ್ರೆಗಳನ್ನು ನಿರ್ಮಿಸುವುದು ಮತ್ತು ದೇಶದಲ್ಲಿ ಮೂಲಸೌಕರ್ಯವನ್ನು ಸುಧಾರಿಸುವುದು ಸೇರಿವೆ” ಎಂದು ಅವರು ಹೇಳಿದರು.

ಆದರೆ, ನಾವು ಎಷ್ಟೇ ಪ್ರಯತ್ನ ಪಟ್ಟರೂ ಕೆಲವೊಮ್ಮೆ ಉತ್ತಮ ಫಲಿತಾಂಶ ದೊರೆಯುವುದಿಲ್ಲ, ಅದಕ್ಕಾಗಿ ನಮಗೆ ದೇವರ ಆಶೀರ್ವಾದ ಬೇಕು. ಉದ್ಯಮಿಗಳು ತಮ್ಮ ಕೆಲಸದ ಸ್ಥಳದಲ್ಲಿ ಗಣೇಶ ಮತ್ತು ಲಕ್ಷ್ಮಿ ವಿಗ್ರಹಗಳನ್ನು ಇಟ್ಟುಕೊಂಡು, ದಿನದ ಕೆಲಸವನ್ನು ಪ್ರಾರಂಭಿಸುವ ಮೊದಲು ಪ್ರತಿದಿನ ಪೂಜೆ ಮಾಡುತ್ತಾರೆ. ಅದೇ ರೀತಿ ಕರೆನ್ಸಿ ನೋಟುಗಳಲ್ಲಿ ದೇವರ ಫೋಟೋ ಹಾಕಿದರೆ ದೇಶದ ಆರ್ಥಿಕತೆ ಸುಧಾರಣೆಗೆ ಕೈಗೊಂಡಿರುವ ಪ್ರಯತ್ನ ಫಲ ನೀಡುವುದು ಖಚಿತ ಎಂದು ಮುಖ್ಯಮಂತ್ರಿ ಹೇಳಿದರು.

ಅರವಿಂದ್ ಕೇಜ್ರಿವಾಲ್‌ರವರ ಹೇಳಿಕೆಗೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ: ನೋಟಿನ ಮೇಲೆ ಲಕ್ಷ್ಮಿ-ಗಣೇಶನ ಚಿತ್ರ ಮುದ್ರಿಸಿದರೆ ರೂಪಾಯಿ ಕುಸಿತ ಸುಧಾರಿಸುತ್ತದೆ: ಅರವಿಂದ್ ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಅರವಿಂದ ಕೇಜ್ರಿವಾಲ್ ಈ ಹಿಂದೆ ಸರ್ಕಾರದ ಉನ್ನತ ಮಟ್ಟದ ಅಧಿಕಾರಿ ಆಗಿದ್ದವರು ಮತ್ತು, ಈಗ ಒಂದು ಸರ್ಕಾರದ ಮುಖ್ಯಸ್ಥ. ಅವರಿದ್ದ ಮತ್ತು ಈಗಿರುವ ಸ್ಥಾನ, ಧರ್ಮ ನಿರಪೇಕ್ಷ ಮನಸ್ಥಿತಿಯನ್ನು ಅನಿವಾರ್ಯವಾಗಿ ಬಯಸುವತ್ತದೆ. ನೋಟಿನ ಮೇಲೆ ಗಣೇಶ ಮತ್ತು ಲಕ್ಷ್ಮಿ ಚಿತ್ರ ಹಾಕಿದರೆ, ಇಂದಿನ ಭಾರತದ ಸಮಸ್ಯೆಗಳಿಗೆ ಪರಿಹಾರ ಸಿಕ್ಕುತ್ತದೆ ಎಂದು ಹೇಳುವ ಇವರು, ತಮ್ಮ ಹಿಂದಿನ ಮತ್ತು ಈಗಿನ ಕೆಲಸಗಳನ್ನು ತರ್ಕಬದ್ಧವಾಗಿ ಮಾಡಿರುವ ಬಗ್ಗೆ ಹಾಗೂ, ಮುಂದೆ ಮಾಡುವ ಬಗ್ಗೆ ಕೂಡಾ ಗಂಭೀರ ಅನುಮಾನಕ್ಕೆ ಎಡೆ ಮಾಡಿಕೊಡುತ್ತದೆ. ಇದು ಖೇದಕರ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...