Homeಮುಖಪುಟ'ಸಂವಿಧಾನದ ಮೇಲೆ ಧಾರ್ಮಿಕ ಅಂಧತ್ವದ ಸವಾರಿ': ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿರುವುದಕ್ಕೆ ತೀವ್ರ ಖಂಡನೆ

‘ಸಂವಿಧಾನದ ಮೇಲೆ ಧಾರ್ಮಿಕ ಅಂಧತ್ವದ ಸವಾರಿ’: ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿರುವುದಕ್ಕೆ ತೀವ್ರ ಖಂಡನೆ

- Advertisement -
- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಸುಪ್ರೀಂ ಕೋರ್ಟ್‌ನಲ್ಲೇ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿರುವುದನ್ನು ಹಲವು ಕ್ಷೇತ್ರಗಳ ಪ್ರಮುಖರು ತೀವ್ರವಾಗಿ ಖಂಡಿಸಿದ್ದಾರೆ.

“ಸನಾತನ ಧರ್ಮದ ಹೆಸರಲ್ಲಿ ಸಂವಿಧಾನಾತ್ಮಕವಾಗಿ ಉನ್ನತ ಹುದ್ದೆಯಲ್ಲಿರುವ ಮುಖ್ಯ ನ್ಯಾಯಾಧೀಶರಾದ ಶ್ರೀ ಬಿ ಆರ್ ಗವಾಯಿ ಅವರ ಮೇಲೆ ವಕೀಲರೊಬ್ಬರು ಶೂ ಎಸೆಯಲು ಯತ್ನಿಸಿರುವುದು ಖಂಡನೀಯ ಬೆಳವಣಿಗೆ” ಎಂದು ಸಚಿವ ಎಚ್‌.ಸಿ ಮಹದೇವಪ್ಪ ಹೇಳಿದ್ದಾರೆ.

“ಸಂವಿಧಾನದ ಮೇಲೆ ಮಾಡಲು ಹೊರಟಿರುವ ಈ ಧಾರ್ಮಿಕ ಅಂಧತ್ವದ ಸವಾರಿಯನ್ನು ಜವಾಬ್ದಾರಿಯುತವಾದ ಪ್ರಜೆಗಳಾದ ಎಲ್ಲರೂ ಖಂಡಿಸಬೇಕು” ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಇಂದು ಸುಪ್ರೀಂ ಕೋರ್ಟ್‌ನಲ್ಲಿ ಭಾರತದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿರುವುದು ನಾಚಿಕೆಗೇಡು ಮತ್ತು ಅಸಹ್ಯಕರವಾಗಿದೆ. ಇದು ನಮ್ಮ ನ್ಯಾಯಾಂಗದ ಘನತೆ ಮತ್ತು ಕಾನೂನಿನ ಆಡಳಿತದ ಮೇಲಿನ ದಾಳಿಯಾಗಿದೆ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಂಡಿಸಿದ್ದಾರೆ.

“ಅರ್ಹತೆ, ಸಮಗ್ರತೆ ಮತ್ತು ಪರಿಶ್ರಮದ ಮೂಲಕ ದೇಶದ ಅತ್ಯುನ್ನತ ನ್ಯಾಯಾಂಗ ಹುದ್ದೆಗೆ ಏರಿದ ಹಾಲಿ ಮುಖ್ಯ ನ್ಯಾಯಮೂರ್ತಿಯೊಬ್ಬರನ್ನು ಈ ರೀತಿ ಗುರಿಯಾಗಿಸಿಕೊಂಡಾಗ, ಅದು ತೀವ್ರ ಆತಂಕಕಾರಿ ಸಂದೇಶವನ್ನು ರವಾನಿಸುತ್ತದೆ. ಸಂವಿಧಾನವನ್ನು ಎತ್ತಿಹಿಡಿಯಲು ಸಾಮಾಜಿಕ ಅಡೆತಡೆಗಳನ್ನು ಮುರಿದ ವ್ಯಕ್ತಿಯನ್ನು ಬೆದರಿಸುವ ಮತ್ತು ಅವಮಾನಿಸುವ ಪ್ರಯತ್ನವನ್ನು ಇದು ಪ್ರತಿಬಿಂಬಿಸುತ್ತದೆ” ಎಂದಿದ್ದಾರೆ.

“ಇಂತಹ ಬುದ್ದಿಹೀನ ಕೃತ್ಯವು ಕಳೆದ ದಶಕದಲ್ಲಿ ನಮ್ಮ ಸಮಾಜವನ್ನು ದ್ವೇಷ, ಮತಾಂಧತೆ ಮತ್ತು ಧರ್ಮಾಂಧತೆ ಹೇಗೆ ಆವರಿಸಿದೆ ಎಂಬುದನ್ನು ತೋರಿಸುತ್ತದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪರವಾಗಿ, ನಾನು ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ನಮ್ಮ ನ್ಯಾಯಾಂಗದ ಸುರಕ್ಷತೆ ಮತ್ತು ಭದ್ರತೆ ಅತ್ಯಂತ ಮುಖ್ಯ. ಬೆದರಿಕೆಯಲ್ಲ, ನ್ಯಾಯ ಮತ್ತು ತರ್ಕ ಮೇಲುಗೈ ಸಾಧಿಸಲಿ” ಎಂದು ಖರ್ಗೆ ಹೇಳಿದ್ದಾರೆ.

“ಇದು ಸಿಜೆಐ ಅವರನ್ನು ಬೆದರಿಸಲು ಬ್ರಾಹ್ಮಣ ಮನಸ್ಥಿತಿಯ ವಕೀಲರೊಬ್ಬರು ಮಾಡಿರುವ ಹೇಯ ಪ್ರಯತ್ನ. ಇದು ಕ್ರಿಮಿನಲ್ ನ್ಯಾಯಾಂಗ ನಿಂದನೆಯಾಗಿದೆ. ವಕೀಲರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು” ಎಂದು ಹಿರಿಯ ವಕೀಲ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ.

“ಸನಾತನ ವಿರೋಧಿ’ ಹೇಳಿಕೆಗಳನ್ನು ಸಹಿಸುವುದಿಲ್ಲ ಎಂದು ವಕೀಲರೊಬ್ಬರು ನ್ಯಾಯಾಲಯದಲ್ಲಿ ಸಿಜೆಐ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ಘಟನೆ ಯಾವುದೇ ಕಾರಣಕ್ಕೂ ಒಪ್ಪುವಂತದ್ದಲ್ಲ. ಸಿಜೆಐ ವಿಚಾರಣೆ ವೇಳೆ ವಿಷ್ಣುವಿನ ವಿಗ್ರಹದ ಬಗ್ಗೆ ಮಾಡಿದ ಟೀಕೆಗಳು ಈ ರೀತಿಯ ಹಿಂಸಾತ್ಮಕ ಕೃತ್ಯಕ್ಕೆ ಕಾರಣವಾಗುತ್ತಿದ್ದರೆ, ಇದು ಅತ್ಯಂತ ಆತಂಕದ ವಿಷಯವಾಗಿದೆ” ಎಂದು ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಹೇಳಿದ್ದಾರೆ.

“ದುರದೃಷ್ಟವಶಾತ್, ಜಾತಿ ದ್ವೇಷ ಮತ್ತು ಧಾರ್ಮಿಕ ಅಸಹಿಷ್ಣುತೆಯ ಸಂಸ್ಕೃತಿಯು ‘ಸಾಮಾನ್ಯವಾಗುತ್ತಿದೆ. ಸಾಮಾಜಿಕ ಮಾಧ್ಯಮದ ಗುಂಪುಗಳು ಹಾಗೂ ವಿಷಮಯ ಟಿವಿ ‘ವಾದ-ವಿವಾದ’ಗಳಿಂದ ಇಂತಹ ಹಿಂಸೆಯನ್ನು ಉತ್ತೇಜಿಸಲಾಗುತ್ತಿದೆ” ಎಂದಿದ್ದಾರೆ.

‘ಈ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ’: ವಕೀಲ ಶೂ ಎಸೆಯಲು ಯತ್ನಿಸಿದ ಬಗ್ಗೆ ಸಿಜೆಐ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...