Homeಕರ್ನಾಟಕಧಾರ್ಮಿಕ ಮತಾಂತರದ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು - ಗೃಹ ಸಚಿವ ಜಿ. ಪರಮೇಶ್ವರ್

ಧಾರ್ಮಿಕ ಮತಾಂತರದ ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು – ಗೃಹ ಸಚಿವ ಜಿ. ಪರಮೇಶ್ವರ್

- Advertisement -
- Advertisement -

ಬೆಂಗಳೂರಿನಲ್ಲಿ ಡಿಜಿಟಲ್ ಧಾರ್ಮಿಕ ಮತಾಂತರ ಪ್ರಯತ್ನಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ, ಮಂಗಳವಾರ ಕರ್ನಾಟಕ ಗೃಹ ಸಚಿವ ಜಿ. ಪರಮೇಶ್ವರ್ ಎಚ್ಚರಿಕೆ ನೀಡಿದ್ದು, ಬಲವಂತದ ಧಾರ್ಮಿಕ ಮತಾಂತರದ ಬಗ್ಗೆ ಯಾವುದೇ ದೂರು ಬಂದರೆ ಪೊಲೀಸರು ಕಾನೂನು ಚೌಕಟ್ಟಿನೊಳಗೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

QR ಕೋಡ್ ಬಳಸಿ ಧಾರ್ಮಿಕ ಮತಾಂತರ ಮಾಡುವ ಹೊಸ ವಿಧಾನದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್ ಅವರು,”ಈ ಪ್ರಕರಣದ ಬಗ್ಗೆ ನನಗೆ ತಿಳಿದಿಲ್ಲ. ಈ ಬೆಳವಣಿಗೆಯ ಬಗ್ಗೆ ನಮಗೆ ತಿಳಿದಿಲ್ಲ. 2020-21 ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಧಾರ್ಮಿಕ ಮತಾಂತರ ವಿರೋಧಿ ಕಾಯ್ದೆಯನ್ನು ತರಲಾಯಿತು. ಇದನ್ನು ನಾವು ಹಿಂಪಡೆಯಲು ಕ್ರಮ ಕೈಗೊಂಡಿದ್ದೇವೆ. ಇದು ಕಾನೂನು ಇಲಾಖೆಯಲ್ಲಿ ಯಾವ ಹಂತದಲ್ಲಿದೆ ಎಂದು ನಾವು ನೋಡಬೇಕು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬೈಬಲ್ ಬೋಧನೆಗಳನ್ನು ಹೇಳುವ QR ಕೋಡ್ ಹೊಂದಿರುವ ಕಾರ್ಡ್‌ಗಳನ್ನು ಸೋಮವಾರ ಬೆಂಗಳೂರಿನಲ್ಲಿ ವಿತರಣೆ ಮಾಡಲಾಗಿತ್ತು. ಈ ಹಿನ್ನಲೆ ಬಲಪಂಥೀಯ ಬೆಂಬಲಿರುವ ಆಕ್ಷೇಪ ವ್ಯಕ್ತಪಡಿಸಿದ್ದರು. ಬಿಜೆಪಿ ಬೆಂಬಲಿಗರು ಡಿಜಿಟಲ್ ವಿಧಾನಗಳ ಮೂಲಕ ಧಾರ್ಮಿಕ ‘ಮತಾಂತರ’ಕ್ಕೆ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದರು.

ಬೆಂಗಳೂರಿನ ಬೇಗೂರು ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದ್ದು, ಬೇಗೂರು ಮುಖ್ಯ ರಸ್ತೆಯಲ್ಲಿ ಮಹಿಳೆಯರ ಗುಂಪೊಂದು QR ಕೋಡ್ ಹೊಂದಿರುವ ವೈಯಕ್ತಿಕ ವಿಸಿಟಿಂಗ್ ಕಾರ್ಡ್‌ಗಳನ್ನು ಹೋಲುವ ಕಾರ್ಡ್‌ಗಳನ್ನು ವಿತರಿಸುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಜೀವನದಲ್ಲಿ ಸಮಸ್ಯೆಗಳು, ನಿರುದ್ಯೋಗ ಅಥವಾ ಮದುವೆಯಲ್ಲಿ ತೊಂದರೆಗಳಂತಹ ಸಮಸ್ಯೆಗಳನ್ನು ಜನರು ಎದುರಿಸುತ್ತಿದ್ದರೆ, QR ಕೋಡ್ ಅನ್ನು ಸ್ಕ್ಯಾನ್ ಮಾಡುವುದರಿಂದ ಅವರಿಗೆ ಪರಿಹಾರಗಳು ಸಿಗುತ್ತವೆ ಎಂದು ಮಹಿಳೆಯರು ಹೇಳಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಯಾವುದೇ ಔಪಚಾರಿಕ ದೂರು ದಾಖಲಾಗಿದ್ದರೆ ಸತ್ಯಗಳನ್ನು ಪರಿಶೀಲಿಸುವುದಾಗಿ ಪೊಲೀಸರು ಹೇಳಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ವಿವರಗಳು ಇನ್ನೂ ಹೊರಬರಬೇಕಾಗಿದೆ.

ಇದೇ ರೀತಿಯ ಬೆಳವಣಿಗೆಯಲ್ಲಿ, ಬಳ್ಳಾರಿ ಜಿಲ್ಲೆಯಲ್ಲಿ ಹಿಂದೂ ಯಾತ್ರಿಕರನ್ನು ಗುರಿಯಾಗಿಸಿಕೊಂಡು ನಡೆದ ಧಾರ್ಮಿಕ ಮತಾಂತರ ಪ್ರಯತ್ನಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು ಜುಲೈ 22, 2024 ರಂದು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದರು. ಆರೋಪಿಯು ಮಂತ್ರಾಲಯದಲ್ಲಿರುವ ಹಿಂದೂ ಯಾತ್ರಾ ಕೇಂದ್ರಕ್ಕೆ ನಡೆದುಕೊಂಡು ಹೋಗುತ್ತಿದ್ದ ಭಕ್ತರನ್ನು ಗುರಿಯಾಗಿಸಿಕೊಂಡಿದ್ದ ಎಂದು ವರದಿಯಾಗಿದೆ.

ನವೆಂಬರ್ 2022 ರಲ್ಲಿ, ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ಬುಡಕಟ್ಟು ಜನರನ್ನು ಬೇರೆ ಧರ್ಮಕ್ಕೆ ಮತಾಂತರಿಸಲು ಯತ್ನಿಸಿದ್ದಕ್ಕಾಗಿ ಕನಿಷ್ಠ 12 ವ್ಯಕ್ತಿಗಳನ್ನು ಬಂಧಿಸಲಾಗಿತ್ತು. ಇತ್ತೀಚೆಗೆ, ಸೆಪ್ಟೆಂಬರ್ 3, 2024 ರಂದು, ಪೊಲೀಸರು ಉಡುಪಿ ಜಿಲ್ಲೆಯಲ್ಲಿ 27 ವರ್ಷದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿ ಮೊಹಮ್ಮದ್ ಡ್ಯಾನಿಶ್ ಖಾನ್ ಅವರನ್ನು ತನ್ನ ಸಹಪಾಠಿಯನ್ನು ಬೇರೆ ಧರ್ಮಕ್ಕೆ ಬಲವಂತವಾಗಿ ಮತಾಂತರಿಸಲು ಯತ್ನಿಸಿದ ಆರೋಪದ ಮೇಲೆ ಬಂಧಿಸಲಾಗಿತ್ತು.

ಇದನ್ನೂಓದಿ:  ಬಡತನ, ನಿರುದ್ಯೋಗದಿಂದಾಗಿ ಜನರು ಮಹಾನಗರಗಳಿಗೆ ವಲಸೆ ಹೋಗುತ್ತಿದ್ದಾರೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

ಬಡತನ, ನಿರುದ್ಯೋಗದಿಂದಾಗಿ ಜನರು ಮಹಾನಗರಗಳಿಗೆ ವಲಸೆ ಹೋಗುತ್ತಿದ್ದಾರೆ : ಕೇಂದ್ರ ಸಚಿವ ನಿತಿನ್ ಗಡ್ಕರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...