Homeಕರೋನಾ ತಲ್ಲಣರೆಮ್‌ಡೆಸಿವಿರ್‌ ಕಾಳ ದಂಧೆ - 6 ಜನರು ಕೋಲಾರ ಪೊಲೀಸರ ಬಲೆಗೆ

ರೆಮ್‌ಡೆಸಿವಿರ್‌ ಕಾಳ ದಂಧೆ – 6 ಜನರು ಕೋಲಾರ ಪೊಲೀಸರ ಬಲೆಗೆ

- Advertisement -
- Advertisement -

ಆಂಟಿ-ವೈರಲ್ ರೆಮ್‌ಡೆಸಿವಿರ್‌ ಇಂಜೆಕ್ಷನ್ ಅನ್ನು ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ ಆರು ಜನರನ್ನು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ ಎಂದು ಕೋಲಾರ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಮಂಗಳವಾರ ತಿಳಿಸಿದ್ದಾರೆ.

ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡವು ನೇರ ಮೇಲ್ವಿಚಾರಣೆಯಲ್ಲಿ ಆರು ಜನರನ್ನು ಬಂಧಿಸಿದೆ ಮತ್ತು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ರೆಮ್‌ಡೆಸಿವಿರ್‌ ಇಂಜೆಕ್ಷನ್‌ನ ಆರು ಬಾಟಲುಗಳನ್ನು ವಶಪಡಿಸಿಕೊಂಡಿದೆ ಎಂದು ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.

ಬಂಧನಕ್ಕೊಳಗಾದವರಲ್ಲಿ ಲ್ಯಾಬ್ ತಂತ್ರಜ್ಞ, ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ನರ್ಸಿಂಗ್ ಅಧೀಕ್ಷಕ ಮತ್ತು ಔಷಧಿಕಾರರು ಸೇರಿದ್ದಾರೆ. ರೆಮ್‌ಡೆಸಿವಿರ್‌ ಚುಚ್ಚುಮದ್ದನ್ನು ಪ್ರಿಸ್ಕ್ರಿಪ್ಷನ್ ಇಲ್ಲದೆ ನಗರದಲ್ಲಿ ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ದೊರೆತ ಹಿನ್ನಲೆಯಲ್ಲಿ ತಂಡವನ್ನು ರಚಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಸ್ರೇಲ್: ಫಿರಂಗಿಗಳು ಘರ್ಜಿಸುತ್ತಿರುವಾಗಲೂ ನಡೆಯುತ್ತಿವೆ ಮುಸ್ಲೀಮರು ಮತ್ತು ಯಹೂದಿಗಳ ಸೌಹಾರ್ದ ಕಾರ್ಯಕ್ರಮಗಳು!

ಹೆಚ್ಚುವರಿ ಎಸ್‌ಪಿ ನಾರಾಯಣಸ್ವಾಮಿ, ಸಹಾಯಕ ಎಸ್‌ಪಿ ಸಾಹಿಲ್ ಬಾಗ್ಲಾ, ಡಿವೈಎಸ್‌ಪಿ ಕೆ.ಸಿ.ಗಿರಿ, ಇನ್ಸ್‌ಪೆಕ್ಟರ್ ರಂಗಸಾಮಯ್ಯ ಅವರನ್ನು ಒಳಗೊಂಡ ಸೈಬರ್ ಅಪರಾಧ ಪೊಲೀಸರು ವಿವಿಧ ಕೋನಗಳಲ್ಲಿ ತನಿಖೆ ನಡೆಸಿದ್ದರು. ಅವರು ಆರೋಪಿಗಳ ಮೊಬೈಲ್ ಸಂಖ್ಯೆ, ಇತರ ಚಲನವಲನಗಳನ್ನು ಮತ್ತು ಸಂಪರ್ಕಗಳನ್ನು ಟ್ರ್ಯಾಕ್ ಮಾಡಿದ್ದರು.

ಆರೋಪಿಗಳನ್ನು ಲ್ಯಾಬ್ ತಂತ್ರಜ್ಞ ಶಿವ ಕುಮಾರ್, ನರ್ಸಿಂಗ್ ಮೇಲ್ವಿಚಾರಕ ನಾಗರಾಜ್ ಮತ್ತು ಮಹೇಶ್ ಎಂದು ಗುರುತಿಸಲಾಗಿದೆ. ಅವರಿಂದ ರೆಮ್‌ಡೆಸಿವಿರ್‌ನ ನಾಲ್ಕು ಬಾಟಲುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಅದೇ ತಂಡವು ಮತ್ತೊಂದು ಪ್ರಕರಣದಲ್ಲಿ, ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಫಾರ್ಮಸಿ ಅಸಿಸ್ಟೆಂಟ್ ಆಗಿರುವ ನಾಗೇಶ್ ಮತ್ತು ನವೀನ್, ಸಂದೀಪ್ ಮತ್ತು ದರ್ಶನ್ ಅವರನ್ನು ಬಂಧಿಸಿ ರೆಮ್‌ಡೆಸಿವಿರ್‌ನ ಎರಡು ಬಾಟಲುಗಳನ್ನು ವಶಪಡಿಸಿಕೊಂಡಿದೆ.

ಆರೋಪಿಗಳು ರೆಮ್‌ಡೆಸಿವಿರ್‌ನ ಒಂದು ಬಾಟಲಿಗೆ 40 ಸಾವಿರ ರೂಗಳಷ್ಟು ದರವನ್ನು ವಿಧಿಸಿದ್ದರು ಎಂದು ಪೊಲೀಸರು ಕಂಡುಹಿಡಿದಿದ್ದಾರೆ.

ಅಕ್ರಮ ಮಾರಾಟವನ್ನು ಭೇದಿಸಿ ಆರೋಪಿಗಳನ್ನು ಬಂಧಿಸಿದ ತಂಡವನ್ನು ಸೆಂಟ್ರಲ್‌ ರೇಂಜ್‌ ಇನ್ಸ್‌ಪೆಕ್ಟರ್ ಜನರಲ್ ಎಂ. ಚಂದ್ರಶೇಖರ್ ಶ್ಲಾಘಿಸಿದ್ದಾರೆ. ಅಕ್ರಮ ಮಾರಾಟದ ಹಿಂದಿನ ಸೂತ್ರಧಾರಿಗಳನ್ನು ಪತ್ತೆಗಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ಈ ಊರಿನಲ್ಲಿ ಮರವೇ ಕೊರೊನಾ ಕೇಂದ್ರ, ಕೊಂಬೆಗಳಲ್ಲಿ ನೇತಾಡುತ್ತವೆ ಗ್ಲೂಕೋಸ್ ಬಾಟಲ್‌ಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...