Homeಮುಖಪುಟಗೌರಿ ಲಂಕೇಶ್ ನೆನಪಿದೆಯಾ? ಎಂದು ಪತ್ರಕರ್ತೆ ರಾಣಾ ಅಯೂಬ್ ಗೆ ಜೀವ ಬೆದರಿಕೆ

ಗೌರಿ ಲಂಕೇಶ್ ನೆನಪಿದೆಯಾ? ಎಂದು ಪತ್ರಕರ್ತೆ ರಾಣಾ ಅಯೂಬ್ ಗೆ ಜೀವ ಬೆದರಿಕೆ

ಈ ಬಗ್ಗೆ ತನಗೆ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಬಂದಿರುವ ಹಲವಾರು ಅತ್ಯಾಚಾರ ಮತ್ತು ಸಾವಿನ ಬೆದರಿಕೆಗಳ ಸ್ಕ್ರೀನ್‌ಶಾಟ್‌ಗಳನ್ನು ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

- Advertisement -
- Advertisement -

ಪತ್ರಕರ್ತೆ ರಾಣಾ ಅಯೂಬ್ ಅವರು ಕಾಶ್ಮೀರದ ಬಗ್ಗೆ ಧ್ವನಿ ಎತ್ತಿದ್ದಕ್ಕೆ ‘ಹಿಂದೂ ರಾಷ್ಟ್ರ’ ಎಂಬ ಸಾಮಾಜಿಕ ಜಾಲತಾಣದ ಖಾತೆಯೊಂದು ‘ಗೌರಿ ಲಂಕೇಶ್’ ಅವರನ್ನು ನೆನಪಿಸಿಕೊಳ್ಳುವಂತೆ ಹೇಳಿ ಜೀವ ಬೆದರಿಕೆನ್ನು ಹಾಕಿದೆ.

ಈ ಬಗ್ಗೆ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಬಂದಿರುವ ಹಲವಾರು ಅತ್ಯಾಚಾರ ಮತ್ತು ಸಾವಿನ ಬೆದರಿಕೆಗಳ ಸ್ಕ್ರೀನ್‌ಶಾಟ್‌ಗಳನ್ನು ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಶ್ಮೀರದ ಸೊಪೋರ್ ಪ್ರದೇಶದಲ್ಲಿ ಬುಧವಾರ ನಡೆದ ಗುಂಡಿನ ಚಕಮಕಿಯ ನಡುವೆ ಸಿಕ್ಕಿಬಿದ್ದ 65 ವರ್ಷದ ಶ್ರೀನಗರ ನಿವಾಸಿ ಬಶೀರ್ ಅಹ್ಮದ್ ಖಾನ್ ಅವರ ಹತ್ಯೆಯ ವಿರುದ್ಧ ಮಾತನಾಡಿದ ನಂತರ ಈ ಬೆದರಿಕೆಗಳು ಪ್ರಾರಂಭವಾದವು ಎಂದು ಅವರು ಹೇಳಿದ್ದಾರೆ.

ಖಾನ್ ಅವರ ಮೂರು ವರ್ಷದ ಮೊಮ್ಮಗ ಅವರ ಶವದ ಮೇಲೆ ಕುಳಿತಿರುವ ಛಾಯಾಚಿತ್ರ ವೈರಲ್ ಆಗಿದ್ದು, ಈ ಹತ್ಯೆಯು ದೇಶದಾದ್ಯಂತ ಭಾರಿ ವಿವಾದಕ್ಕೆ ಕಾರಣವಾಯಿತು.

“ಕಾಶ್ಮೀರದ ಬಗ್ಗೆ ನಾನು ಮಾತನಾಡಿದಾಗೆಲ್ಲ ವಿವರಿಸಲಾಗದ ದ್ವೇಷ ಕಾರುತ್ತಾರೆ. ಈ ಸಮಯದಲ್ಲಿ ಅವರು ಅದನ್ನು ನಿರ್ದಯವಾಗಿ ಮಾಡುತ್ತಿದ್ದಾರೆಂದು ನಾನು ಭಾವಿಸುತ್ತೇನೆ. ಮುಂಚೆ ಅವರು ತಮ್ಮ ಮಾತುಗಳನ್ನು ಹಿಡಿತದಲ್ಲಿಟ್ಟಿದ್ದರು, ನಿರ್ದಿಷ್ಟವಲ್ಲದ ಭಾಷೆಯನ್ನು ಬಳಸುತ್ತಿದ್ದರು, ಆದರೆ ಈಗ ಅವು ನಿರ್ದಿಷ್ಟವಾಗಿರುತ್ತವೆ ಮತ್ತು ಯಾವುದಕ್ಕೂ ಹೆದರುತ್ತಿಲ್ಲ” ಎಂದು ರಾಣಾ ಅಯೂಬ್ ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ, “ನನ್ನ ಟೈಮ್‌ಲೈನ್ ಹಾಗೂ ಇನ್‌ಬಾಕ್ಸ್ ಕಾಶ್ಮೀರದ ಬಗ್ಗೆ ಮಾತನಾಡಿದ್ದಕ್ಕಾಗಿ ಕಳೆದ ಎರಡು ದಿನಗಳಿಂದ ಸಾವು ಮತ್ತು ಅತ್ಯಾಚಾರ ಬೆದರಿಕೆಗಳಿಂದ ಮುಳುಗಿದೆ” ಎಂದು ಪ್ರಣಯ್ ಭೌಮಿಕ್ ಎಂಬವರ ಬೆದರಿಕೆಗಳ ಸ್ಕ್ರೀನ್‌ಶಾಟ್‌ಗಳೊಂದಿಗೆ ಟ್ವೀಟ್ ಮಾಡಿದ್ದರು.

ಭೌಮಿಕ್ ಅತ್ಯಂತ ಕೆಟ್ಟ ಭಾಷೆಯನ್ನು ಬಳಸಿದ್ದಲ್ಲದೆ, ‘ಅತ್ಯಾಚಾರ ಬೆದರಿಕೆ’ ಕೂಡ ಹಾಕಿದ್ದಾರೆ ಎಂದು ಆ ಸಂದೇಶಗಳಲ್ಲಿ ಗಮನಿಸಬಹುದು. ಜೊತಗೆ ಕಾಶ್ಮೀರಿ ಮತ್ತು ಮುಸ್ಲಿಮರ ಮೇಲೆ ನಿಂದನೆಗಳನ್ನು ಕೂಡಾ ಮಾಡಿದ್ದಾರೆ.

ಮತ್ತೊಂದು ಸ್ಕ್ರೀನ್‌ಶಾಟ್‌ನಲ್ಲಿ, ‘ಗೌರಿ ಲಂಕೇಶ್’ ಅವರನ್ನು ನೆನಪಿಸಿಕೊಳ್ಳುವಂತೆ ‘ಹಿಂದೂ ರಾಷ್ಟ್ರ’ ಎಂಬ ಖಾತೆಯು ಅಯೂಬ್‌ಗೆ ಎಚ್ಚರಿಕೆ ನೀಡಿದೆ.

ಗೌರಿ ಲಂಕೇಶ್ ನೆನಪಿದೆಯಾ? ಎಂದು ಪತ್ರಕರ್ತೆ ರಾಣಾ ಅಯೂಬ್ ಗೆ ಜೀವ ಬೆದರಿಕೆ

“ನನ್ನ ಫೇಸ್‌ಬುಕ್, ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್ ಸಂಪೂರ್ಣವಾಗಿ ದ್ವೇಷ ಮತ್ತು ಬೆದರಿಕೆಗಳಿಂದ ತುಂಬಿದೆ. ಅವರು ನನಗೆ ಗೌರಿ ಲಂಕೇಶ್ ಅವರನ್ನು ನೆನಪಿಸುತ್ತಿದ್ದಾರೆ. ನಾನು ಪ್ರತಿ ಭಾರಿ ಹೇಳಿಕೆ ನೀಡಿದಾಗಲೆಲ್ಲಾ ಹೀಗೆ ಆಗುತ್ತದೆ” ರಾಣಾಅಯೂಬ್ ಹೇಳಿದ್ದಾರೆ.

“ನನಗೆ ನೆನಪಿದೆ ಗೌರಿ ಸಾಯುವ ಮೂರು ದಿನಗಳ ಮೊದಲು, ನನ್ನ ಬಗ್ಗೆ ಸಾಕಷ್ಟು ದ್ವೇಷ ಕಾರುತ್ತಿರುವಾಗ ಗೌರಿ ನನ್ನ ಫೇಸ್‌ಬುಕ್ ಗೋಡೆಯ ಮೇಲೆ, ಏನೂ ಚಿಂತಿಸಬಾರದು ಮತ್ತು ಈ ಜನರು ಏನನ್ನೂ ಮಾಡುವುದಿಲ್ಲ ಎಂದು ಹೇಳಿ ಪೋಸ್ಟ್ ಮಾಡಿದ್ದರು. ಮೂರು ದಿನಗಳ ನಂತರ ಅವರು ಕೊಲ್ಲಲ್ಪಟ್ಟರು, ಆದ್ದರಿಂದ ಆನ್‌ಲೈನ್ ದ್ವೇಷವು ಆಫ್‌ಲೈನ್‌ನಲ್ಲಿ ಹೋಗುತ್ತದೆಯೇ ಎಂಬ ಭಯ ಯಾವಾಗಲೂ ಇರುತ್ತದೆ” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ರಾಣಾ ಅಯ್ಯೂಬ್ ಟ್ವೀಟ್ ಮಾಡಿದ ಎರಡು ಗಂಟೆಯೊಳಗೆ ಮುಂಬೈ ಪೊಲೀಸರು ಅವರ ನಿವಾಸಕ್ಕೆ ಭೇಟಿ ನೀಡಿ ಅವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆಂದು ಹೇಳಿದ್ದಾರೆ.


ಓದಿ: ಕಾಶ್ಮೀರದ ಈ ಮಗು CRPF ಸೈನಿಕರ ಮೇಲೆ ಕಲ್ಲೆಸೆಯಲು ಪ್ರಯತ್ನಿಸಿತೆ?: ಫ್ಯಾಕ್ ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...