Homeಮುಖಪುಟ‘ಗರಂ ಹವಾ’: ಒಂದು ನೆನಪು

‘ಗರಂ ಹವಾ’: ಒಂದು ನೆನಪು

- Advertisement -
- Advertisement -

ಎಂ.ಎಸ್. ಸತ್ಯು ಅವರಿಗೆ ಈಚೆಗೆ 80 ತುಂಬಿತು. ಈ ಹೊತ್ತಲ್ಲಿ ಅವರ ‘ಗರಂ ಹವಾ’ (1974) ನೆನಪಾಗುತ್ತಿದೆ. ನಾನು ನೋಡಿದ ಅತ್ಯಂತ ಶ್ರೇಷ್ಠ ಸಿನಿಮಾಗಳಲ್ಲಿ ಇದೊಂದು. ಇಸ್ಮತ್ ಚುಗ್ತಾಯಿಯವರ ಕಥೆಯನ್ನಾಧರಿಸಿ ರಚನೆಯಾದ ಇದಕ್ಕೆ ಚಿತ್ರಕಥೆ ಬರೆದವರು ಕೈಫಿ ಆಜ್ಮಿ ಮತ್ತು ಸತ್ಯು ಅವರ ಜೀವನಸಂಗಾತಿ ಶಮಾ ಝೈದಿ. ಸಂಗೀತ ಕಲ್ಕತ್ತೆಯ ಉಸ್ತಾದ್ ಬಹಾದೂರಖಾನರದು. ಮುಖ್ಯ ಭೂಮಿಕೆಯಲ್ಲಿ ಬಲರಾಜ್ ಸಹಾನಿಯಿದ್ದಾರೆ. ಕೈಫಿ ಆಜ್ಮಿಯವರ ರಚನೆಗೆ ಪ್ರಸಿದ್ಧ ವಾರಸಿ ಸೋದರರು ಖವಾಲಿ ಹಾಡಿದ್ದಾರೆ. ಹಲವಾರು ದೊಡ್ಡ ಪ್ರತಿಭೆಗಳು ಸೇರಿ ನಿರ್ಮಿಸಿದ ಕಲಾಕೃತಿಯಿದು.

ಸಿನಿಮಾದ ವಸ್ತು, ದೇಶವಿಭಜನೆಯ ಬಳಿಕ, ಉತ್ತರ ಭಾರತದಲ್ಲಿರುವ ಚಪ್ಪಲಿ ತಯಾರಿಕೆ
ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಸ್ಥ ಕುಟುಂಬವೊಂದು ಪಡುವ ಪಾಡಿನ ಕಥೆ. ಮೂರು ತಲೆಮಾರಿಗೆ ಸೇರಿದ, ನಗರದಲ್ಲಿ ಗೌರವದ ಸ್ಥಾನ ಹೊಂದಿದ್ದ ಈ ಕುಟುಂಬದಲ್ಲಿನ ಒಬ್ಬ ವ್ಯಕ್ತಿ, ಮನೆಮಾರಿ ಪಾಕಿಸ್ತಾನಕ್ಕೆ ವಲಸೆ ಹೋಗುತ್ತಾನೆ. ಅಲ್ಲಿಂದ ಕುಟುಂಬದ ಕಷ್ಟಗಳು ಶುರುವಾಗುತ್ತವೆ. ಸಾಲ ಪಡೆದವರೆಲ್ಲ ದೇಶ ಬಿಟ್ಟುಹೋಗಿದ್ದರಿಂದ ಈ ಕುಟುಂಬಕ್ಕೆ ಬ್ಯಾಂಕು ಸಾಲ ಕೊಡುವುದಿಲ್ಲ. ಮನೆ ಹರಾಜಾದ ಬಳಿಕ ಬಾಡಿಗೆಗೆ ಮನೆ ಸಿಗುವುದಿಲ್ಲ. ಕುಟುಂಬದ ಹುಡುಗರಿಗೆ ಯಾರೂ ಉದ್ಯೋಗ ಕೊಡುವುದಿಲ್ಲ. ದೇಶದ ರಹಸ್ಯಗಳನ್ನು ಪಾಕಿಸ್ತಾನಕ್ಕೆ ಕಳಿಸಿದ ಸುಳ್ಳು ಆಪಾದನೆಯನ್ನೂ ಹೊರಬೇಕಾಗುತ್ತದೆ. ದೇಶವಿಭಜನೆಯಂತಹ ರಾಜಕೀಯ ವಿದ್ಯಮಾನವೊಂದು, ಕುಟುಂಬದಲ್ಲಿ ಎಬ್ಬಿಸುವ ಸಂಕಟಗಳನ್ನು ತೆರೆತೆರೆಯಾಗಿ ಚಿತ್ರ ಹಿಡಿಯುತ್ತ ಹೋಗುತ್ತದೆ. ವಿಭಜನೆಯ ಬಳಿಕ ಭಾರತದಲ್ಲೇ ಉಳಿಯಲು ನಿರ್ಧರಿಸಿದ ಮುಸ್ಲಿಮರು, ಹಳೆಯ ಮಾನವ ಸಂಬಂಧಗಳೆಲ್ಲ ಭಗ್ನವಾಗಿ ಹುಟ್ಟಿರುವ ಘೋರವಾದ ಅವಿಶ್ವಾಸದ ವಾತಾವರಣದಲ್ಲಿ ಅನುಭವಿಸಿದ ಕಷ್ಟಗಳನ್ನು ಕಾಣಿಸುತ್ತದೆ. ಈ ಅಪನಂಬಿಕೆಯ ವಾತಾವರಣದಲ್ಲಿ ಬದುಕಲಾಗದೆ ಕುಟುಂಬದ ಒಬ್ಬೊಬ್ಬರೇ ಭಾರತ ಬಿಟ್ಟು ಹೋಗುತ್ತಾರೆ. ಆದರೆ ಕುಟುಂಬದ ಅಜ್ಜಿ, ಅಪ್ಪ ಮತ್ತು ಮಗ ಮಾತ್ರ ಭಾರತದಲ್ಲೇ ಉಳಿಯಲು ಛಲತೊಡುತ್ತಾರೆ.

ಅಪ್ಪ ಮಕ್ಕಳಿಗೆ ಈ ನಿರ್ಧಾರವು ಅವರ ಸಾರ್ವಜನಿಕ ಬದುಕಿನ ಅನುಭವ ಮತ್ತು ರಾಜಕೀಯ ಪ್ರಜ್ಞೆಯ ಫಲ. ಆದರೆ ಈ ಕುಟುಂಬದ ಸದಸ್ಯರಾದ ಒಬ್ಬ ಮುದುಕಿ ಮತ್ತು ತರುಣಿ ಕೂಡ ವಲಸೆಹೋಗಲು ತಮ್ಮದೇ ಕಾರಣಕ್ಕೆ ನಿರಾಕರಿಸುವವರು. ಮುದುಕಿಗೆ ತನ್ನ ದೇಶ ಪರದೇಶ ಎಂದರೇನು ಗೊತ್ತಿಲ್ಲ. ತಾನು ಮದುವೆಯಾಗಿ ಬಂದಾಗ ಮನೆದುಂಬಿಸಿಕೊಂಡ ಮನೆಯನ್ನು ಬಿಟ್ಟು ಅವಳಿಗೆ ಬೇರೆ ದೇಶದ ಕಲ್ಪನೆಯೇ ಗೊತ್ತಿಲ್ಲ. ಖಯಾಮತ್ ದಿನ ತೀರಿಹೋಗಿರುವ ತನ್ನ ಗಂಡ ‘ನಮ್ಮ ಮನೆಯನ್ನು ಬಿಟ್ಟು ಬೇರೆ ಮನೆಯಲ್ಲಿ ಸತ್ತೆಯಾ?’ ಎಂದರೆ ನಾನೇನೆಂದು ಉತ್ತರಿಸಲಿ ಎನ್ನುವುದು ಅವಳ ಪ್ರಶ್ನೆ. ಕಡೆಗೂ ಅವಳು ತಾನು ಲಗ್ನವಾದ ಹವೇಲಿಯಲ್ಲಿಯೇ ಸಂತೋಷದಿಂದ ಸಾಯುತ್ತಾಳೆ. ಇನ್ನು ತರುಣಿ, ತನ್ನನ್ನು ಪ್ರೇಮಿಸಿದ ತರುಣರು ಭಾರತದಲ್ಲಿ ತಮಗೆ ನೌಕರಿ ಸಿಗುತ್ತಿಲ್ಲವೆಂದು ಹೇಳಿ ಪಾಕಿಸ್ತಾನಕ್ಕೆ ವಲಸೆ ಹೋದವರು, ಮರಳಿ ಬರುವುದನ್ನೇ ಕಾಯುತ್ತಾಳೆ. ಆದರೆ ಅವರು ಅಲ್ಲೇ ಮದುವೆಯಾಗಿ ನೆಲೆಸಲು ನಿಶ್ಚಯಿಸಿದ್ದಾರೆಂದು ತಿಳಿದು ಅತ್ಮಹತ್ಯೆ ಮಾಡಿಕೊಳ್ಳುತ್ತಾಳೆ-ತಾಯಿ ತನಗಾಗಿ ಹೆಣೆದ ಮದುಮಗಳ ತಲೆವಸ್ತ್ರವನ್ನು ಧರಿಸಿ ಬ್ಲೇಡಿನಲ್ಲಿ ಕೈಯ ನರವನ್ನು ಕೊಯ್ದುಕೊಂಡು.

ಎಂ.ಎಸ್. ಸತ್ಯು

ದೇಶವಿಭಜನೆ ಮತ್ತು ಹೊಸರಾಷ್ಟ್ರದ ಉದಯದಂತಹ ಬೃಹತ್ ರಾಜಕೀಯ ಘಟನೆಗಳಿಗೆ ಬಹುತೇಕವಾಗಿ ಸಾಮಾನ್ಯ ಜನ ಕಾರಣರಲ್ಲ. ಆದರೆ ಈ ಘಟನೆಗಳ ದುರಂತ ಫಲವನ್ನು ಅವರು ಉಣ್ಣಬೇಕಾಗುತ್ತದೆ. ಈ ಕಷ್ಟಗಳಲ್ಲೂ ಕುಟುಂಬದೊಳಗಿನ ಪ್ರೇಮ ವಾತ್ಸಲ್ಯ ಜಗಳದಂತಹ ಮಾನವ ಸಂಬಂಧದ ಮುಖಗಳನ್ನು ಚಿತ್ರ ಹಿಡಿದುಕೊಡುತ್ತದೆ. ಮುನಿಸಿಕೊಳ್ಳುವ ಅಪ್ಪನಿಗೆ ಮಗಳು ಕದ್ದು ತಂದು ರೊಟ್ಟಿ ತಿನಿಸುವ ದೃಶ್ಯ, ತಾನು ಹುಟ್ಟಿಬೆಳೆದ ಮನೆಯನ್ನು ಬಿಟ್ಟುಬರಲು ನಿರಾಕರಿಸಿ ಸೌದೆಗೂಡಿನಲ್ಲಿ ಅಡಗಿಕೊಳ್ಳುವ ಮುದುಕಿಯನ್ನು ಬಲಾತ್ಕಾರವಾಗಿ ಎತ್ತಿಕೊಂಡು ಹೋಗುವ ದೃಶ್ಯವಾಗಲಿ ಇಂತಹವು. ಇಂತಹುದೇ ಕಷ್ಟ-ಸುಖಗಳನ್ನು ಪಾಕಿಸ್ತಾನದಲ್ಲಿ ತಮ್ಮ ಊರುಮನೆಗಳಲ್ಲೇ ಉಳಿದ ಮುಸ್ಲಿಮೇತರ ಕುಟುಂಬಗಳೂ ಅನುಭವಿಸುತ್ತಿರಬಹುದು ಎಂಬ ಧ್ವನಿಯನ್ನು ಚಿತ್ರ ಚಿಮ್ಮಿಸುತ್ತದೆ. ರಾಜಕೀಯ ಸಂದರ್ಭದ ಒತ್ತಡದಿಂದ ಕೆಲವರು ಎಷ್ಟೇ ಸಮುದಾಯ ಶಂಕೆ, ದ್ವೇಷ ಮಾಡಲಿ, ಜನರ ನೋವಿಗೆ ಧರ್ಮಾತೀತವಾಗಿ ಮಿಡಿವ ಜೀವಗಳು ಅದೇ ಸಮಾಜದಲ್ಲಿ ಇರುತ್ತವೆ ಎಂಬ ಸತ್ಯವನ್ನು ಚಿತ್ರ ಕಾಣಿಸುತ್ತದೆ. ‘ಸಂಬಂಜ ಎಂಬುದು ದೊಡ್ಡದು ಕನಾ’ ಎಂದು ಬಿಂಬಿಸುತ್ತದೆ.

ಅಂತಃಕರಣ ಮಿಡಿವ ಈ ಚಿತ್ರವು ಒಂದು ಶ್ರೇಷ್ಠ ಕಲಾಕೃತಿಯೂ ಆಗಿದೆ. ಇಲ್ಲಿ ಉತ್ತರ ಪ್ರದೇಶದ ಉಚ್ಚವರ್ಗದ ಮುಸ್ಲಿಮರ ಬದುಕಿನ ಊಟ ಉಡುಪು ಭಾಷೆಯನ್ನು ಒಳಗೊಂಡ ರಿವಾಜುಗಳನ್ನು ಸಮರ್ಥವಾಗಿ ಹಿಡಿಯಲಾಗಿದೆ. ಕಥೆ ಜರುಗುವ ಗಲ್ಲಿ ಮತ್ತು ಹವೇಲಿಗಳು, ತನ್ನ ಸ್ಥಳೀಯ ವಾಸ್ತುಶಿಲ್ಪದ ಜತೆಯಲ್ಲಿ ತಾವೂ ಪಾತ್ರಗಳಾಗಿವೆ. ಚಿತ್ರದ ಪ್ರತಿಯೊಂದು ಫ್ರೇಮ್ ಕೂಡ ಅರ್ಥಪೂರ್ಣ ಕಾವ್ಯದ ಒಂದೊಂದು ಸಾಲಿನಂತಿದೆ. ನೆಳಲು ಬೆಳಕಿನ ಸಂಯೋಜನೆಯು ದೇಶವಿಭಜನೆಯ ಒಳಿತುಕೇಡುಗಳ ಸಂಕೇತದಂತೆ ಇಡೀ ಚಿತ್ರದಲ್ಲಿ ಆವರಿಸಿಕೊಂಡಿದೆ. ಧನಿಪೂರ್ಣವೂ ಸಂಕ್ಷಿಪ್ತವೂ ಆದ ಸಂಭಾಷಣೆಯಿರುವ ಚಿತ್ರದಲ್ಲಿ ವಾಚಾಳಿತನವಿಲ್ಲ. ಮುಖಭಾವದಲ್ಲೇ ತಮ್ಮ ಒಳಗನ್ನು ಪ್ರಕಟಿಸುವ ಪ್ರಬುದ್ಧ ನಟನೆಯಿಂದ ಕೂಡಿದೆ. ಬಲರಾಜರ ಅಭಿನಯವಂತೂ ಮನೋಜ್ಞ. ದುರಂತವೆಂದರೆ, ಈ ಚಿತ್ರ ಬಿಡುಗಡೆಯಾಗುವ ಹೊತ್ತಿಗೆ ಬಲರಾಜ್ ತೀರಿಕೊಂಡಿದ್ದರು.

1983ರಲ್ಲಿ ನಾನು ಕನ್ನಡ ಎಂ.ಎ.ಯಲ್ಲಿ ರ್‍ಯಾಂಕ್ ಪಡೆದಾಗ, ಆ ಹುಡುಗನನ್ನು ನೋಡಬೇಕಲ್ಲ ಎಂದು ಆಸೆಪಟ್ಟು ನನ್ನನ್ನು ತಮ್ಮ ಸಹಾಯಕರಾಗಿದ್ದ ಶಿರಾಳಕೊಪ್ಪದ ರಾಮಸ್ವಾಮಿಯವರ ಮೂಲಕ ಕರೆಸಿಕೊಂಡಿದ್ದರು. ಔತಣಕೊಟ್ಟು ಪ್ರೀತಿವಿಶ್ವಾಸ ತೋರಿದ್ದರು. ಕಾಲುಶತಮಾನದ ಬಳಿಕ, ನನ್ನ ‘ಅಮೀರಬಾಯಿ ಕರ್ನಾಟಕಿ’ ಓದಿ, ಬೆಂಗಳೂರಿನಲ್ಲಿ ಒಂದು ಚರ್ಚೆ ಇಟ್ಟುಕೊಂಡಿದ್ದರು. ಅವರೂ ಚಿರಂಜೀವಿಸಿಂಗರೂ ಮಾತಾಡಿದರು. ಮುಂಬೈ ಸಿನಿಮಾ ಜಗತ್ತಿಗೆ ಉತ್ತರ ಕರ್ನಾಟಕದ ಕೊಡುಗೆಯನ್ನು ಬಿಂಬಿಸುವ ಮ್ಯೂಸಿಯಮ್ಮನ್ನು ಬಿಜಾಪುರದ ಅಮೀರಬಾಯಿ ಅವರ ಹಳೆಯ ಮನೆಯಲ್ಲಿ ಮಾಡುವ ಕನಸನ್ನು ಸತ್ಯು ತಮ್ಮ ಪತ್ರದ ಮೂಲಕ ಹಂಚಿಕೊಂಡಿದ್ದರು. ಎಂ.ಎಸ್. ಸತ್ಯು ಹಾಗೂ ರಾಜೀವ ತಾರಾನಾಥ್ ಕರ್ನಾಟಕದಲ್ಲಿ ಹುಟ್ಟಿ ಭಾರತದಲ್ಲಿ ಹರಡಿದ ಪರಂಪರೆಯೊಂದರ ಎರಡು ಕೊಂಡಿಗಳಂತೆ ತೋರುತ್ತಾರೆ.

ಪ್ರೊ. ರಹಮತ್ ತರೀಕೆರೆ

ಪ್ರೊ. ರಹಮತ್ ತರೀಕೆರೆ
ರಹಮತ್ ತರೀಕೆರೆ ಕನ್ನಡನಾಡಿನ ಖ್ಯಾತ ಚಿಂತಕರು. ನಾಥಪಂಥ, ಕರ್ನಾಟಕದ ಸೂಫಿಗಳು, ಗುರುಪಂಥಗಳು ಹೀಗೆ ನಾಡಿನ ಹಲವು ಬಹುತ್ವದ ಪಂಥಗಳು ಮತ್ತು ಸೌಹಾರ್ದ ಬದುಕಿನ ಬಗ್ಗೆ ವಿಶೇಷ ಅಧ್ಯಯನಗಳನ್ನು ಮಾಡಿ ಪುಸ್ತಕ ರಚಿಸಿದ್ದಾರೆ. ಇವರ ವಿಮರ್ಶಾ ಸಂಕಲನ ’ಕತ್ತಿಯಂಚಿನ ದಾರಿ’ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯ ಗೌರವ ಸಂದಿದೆ.


ಇದನ್ನೂ ಓದಿ: ವಿಧಾನ ಪರಿಷತ್ ಖಂಡಿತಾ ಉಳಿಸಿಕೊಳ್ಳಬೇಕಿದೆ; ಉತ್ತಮ ಪ್ರತಿನಿಧಿತ್ವಕ್ಕಾಗಿ ಸುಧಾರಣೆಗಳ ಜೊತೆಗೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....