ನಾನು ಎಲ್ಲಾ ವಿದ್ಯಾರ್ಥಿಗಳನ್ನು ಕೇಳಿಕೊಳ್ಳುತ್ತಿದ್ದೇನೆ, ಯಾವುದೇ ಪರಿಸ್ಥಿತಿಯಲ್ಲಿ ಯಾರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳಬಾರದು. ನಿಮ್ಮ ಗುರಿಗಳಿಗೆ ಅಡ್ಡಿಯಾಗಿರುವ NEET ಅನ್ನು ನಾವು ಖಂಡಿತವಾಗಿಯೂ ತೆಗೆದುಹಾಕುತ್ತೇವೆ ಎಂದು ವಿದ್ಯಾರ್ಥಿಗಳಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಅಭಯ ನೀಡಿದ್ದಾರೆ.
ರಾಜ್ಯದ ಕ್ರೋಮ್‌ಪೇಟ್‌ನಲ್ಲಿ ನೀಟ್ ಅಭ್ಯರ್ಥಿ ಜಗದೀಶ್ವರನ್, ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಉಲ್ಲೇಖಿಸಿ ಸ್ಟಾಲಿನ್ ಮಾತನಾಡಿದ್ದು, ”ಯಾರೂ ಕೂಡ ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ನಾನು ವಿದ್ಯಾರ್ಥಿಗಳೊಂದಿಗೆ ಮನವಿ ಮಾಡುತ್ತೇನೆ. ನಿಮ್ಮ ಗುರಿಗೆ ತೊಡಕಾಗಿರುವ ನೀಟ್ ಪರೀಕ್ಷೆಯನ್ನು ನಾವು ಖಂಡಿತವಾಗಿಯೂ ತೆಗೆದುಹಾಕುತ್ತೇವೆ. ತಮಿಳುನಾಡು ಸರ್ಕಾರ ಈ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತವಾಗಿದೆ” ಎಂದು ಹೇ ಹೇಳಿರುವುದಾಗಿ ‘ಎಎನ್‌ಐ’ ಸುದ್ದಿ ಸಂಸ್ಥೆ ‘ಎಕ್ಸ್’ನಲ್ಲಿ ಹಂಚಿಕೊಂಡಿದೆ.
Tamil Nadu CM MK Stalin writes, "…I was shocked to know that Jegadeeswaran from Chromepet, who was a NEET aspirant, committed suicide. When I was thinking of how to console his parents, the next day his father Selvasekar also died by suicide. I don't know how to console… pic.twitter.com/0jZseTEdOL
— ANI (@ANI) August 14, 2023
”ನೀಟ್ ಅಭ್ಯರ್ಥಿ ಜಗದೀಶ್ವರನ್, ಆತ್ಮಹತ್ಯೆ ಮಾಡಿಕೊಂಡಿದ್ದು ಕೇಳಿ ನನಗೆ ಆಶ್ಚರ್ಯವಾಯಿತು. ಅವರ ಪೋಷಕರನ್ನು ಸಮಾಧಾನ ಮಾಡುವುದು ಹೇಗೆ ಎಂದು ಯೋಚಿಸುತ್ತಿರುವಾಗಲೇ, ಅವರ ತಂದೆ ಸೆಲ್ವಶೇಖರ್ ಕೂಡ ಆತ್ಮಹತ್ಯೆ ಮಾಡಿಕೊಂಡರು. ಜಗದೀಶ್ವರನ್ ಅವರ ಕುಟುಂಬ, ಸ್ನೇಹಿತ ವರ್ಗ ಹಾಗೂ ಬಂಧು ಬಳಗಕ್ಕೆ ಹೇಗೆ ಸಾಂತ್ವನ ಹೇಳುವುದು ಎಂದು ನನಗೆ ತಿಳಿಯುತ್ತಿಲ್ಲ. ವೈದ್ಯನಾಗುವ ಆಸೆ ಕಂಡಿದ್ದ ಬುದ್ದಿವಂತ ವಿದ್ಯಾರ್ಥಿಯೊಬ್ಬ ನೀಟ್‌ನಿಂದ ಆತ್ಮಹತ್ಯೆ ಮಾಡಿಕೊಂಡವರ ಸಾಲಿಗೆ ಸೇರಿದ್ದು ದುರಂತ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ನಮ್ಮನ್ನು ಹಿಂದಿಯ ಗುಲಾಮರಾಗಿಸಲು ಸಾಧ್ಯವಿಲ್ಲ: ಶಾ ಹೇಳಿಕೆಗೆ ಸ್ಟಾಲಿನ್ ತಿರುಗೇಟು


