Homeಮುಖಪುಟಮಾದರಿ ನೀತಿ ಸಂಹಿತೆಯನ್ನು ಮೋದಿ ನೀತಿ ಸಂಹಿತೆ ಎಂದು ಬದಲಿಸಿ- ಮಮತಾ ಬ್ಯಾನರ್ಜಿ

ಮಾದರಿ ನೀತಿ ಸಂಹಿತೆಯನ್ನು ಮೋದಿ ನೀತಿ ಸಂಹಿತೆ ಎಂದು ಬದಲಿಸಿ- ಮಮತಾ ಬ್ಯಾನರ್ಜಿ

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಶನಿವಾರ ನಾಲ್ಕನೇ ಹಂತದ ಮತದಾನದಲ್ಲಿ ನಡೆದ ಹಿಂಸಾಚಾರದ ಬಳಿಕ ಕೂಚ್ ಬೆಹಾರ್‌ಗೆ ರಾಜಕೀಯ ಮುಖಂಡರ ಭೇಟಿಯನ್ನು ಚುನಾವಣಾ ಆಯೋಗ ನಿರ್ಬಂಧಿಸಿದೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗ ಮಾದಿರಿ ನೀತಿ ಸಂಹಿತೆಯನ್ನು ಮೋದಿ ನೀತಿ ಸಂಹಿತೆ ಎಂದು ಬದಲಾಯಿಸಬೇಕು ಎಂದು ಕಿಡಿಕಾರಿದ್ದಾರೆ.

ನಾಲ್ಕನೇ ಹಂತದ ಮತದಾನದ ವೇಳೆ ಕೂಚ್ ಬೆಹಾರ್‌ನ ಸಿತಾಲ್ಕುಚಿ ಕ್ಷೇತ್ರದ ಮತಗಟ್ಟೆ ಬಳಿ ನಡೆದ ಗಲಭೆಯಲ್ಲಿ ನಾಲ್ವರು ಮೃತಪಟ್ಟಿದ್ದರು. ನಾಲ್ವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಟಿಎಂಸಿ ಆರೋಪಿಸಿತ್ತು.

“ಚುನಾವಣಾ ಆಯೋಗ ಮಾದರಿ ನೀತಿ ಸಂಹಿತೆ (ಎಂಸಿಸಿ)ಯನ್ನು ಮೋದಿ ನೀತಿ ಸಂಹಿತೆ ಎಂದು ಮರುನಾಮಕರಣ ಮಾಡಬೇಕು” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಲಾಕ್‌ಡೌ‌ನ್‌ನಲ್ಲಿ ಹೆಚ್ಚಾದ ಬಾಲ್ಯವಿವಾಹ: ವರದಿ ಮುಚ್ಚಿಡಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರ

ಮುಂದುವರಿದು, “ಬಿಜೆಪಿ ತನ್ನ ಎಲ್ಲ ಶಕ್ತಿಯನ್ನು ಬಳಸಿಕೊಳ್ಳಬಹುದು. ಆದರೆ ಈ ಜಗತ್ತಿನಲ್ಲಿ ಯಾವುದೇ ಶಕ್ತಿಯೂ ನಾನು ನನ್ನ ಜನರೊಂದಿಗೆ ಇರುವುದನ್ನು ಮತ್ತು ಅವರ ನೋವನ್ನು ಹಂಚಿಕೊಳ್ಳುವುದನ್ನು ತಡೆಯಲಾಗದು” ಎಂದಿದ್ದಾರೆ.

“ಕೂಚ್ ಬೆಹಾರ್‌ನಲ್ಲಿರುವ ನನ್ನ ಸಹೋದರ ಸಹೋದರಿಯರನ್ನು 3 ದಿನಗಳವರೆಗೆ ಭೇಟಿ ಮಾಡುವುದನ್ನು ಅವರು ನಿರ್ಬಂಧಿಸಬಹುದು ಆದರೆ 4 ನೇ ದಿನ ನಾನು ಅಲ್ಲಿರುತ್ತೇನೆ” ಎಂದು  ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಕೂಚ್ ಬೆಹಾರ್‌ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಕಾರಣ 72 ಗಂಟೆಗಳ ಕಾಲ ಯಾವುದೇ ಪಕ್ಷದ ರಾಜಕಾರಣಿಗಳು ಜಿಲ್ಲೆಗೆ ಪ್ರವೇಶಿಸದಂತೆ ಚುನಾವಣಾ ಆಯೋಗವು ನಿರ್ಬಂಧಿಸಿದೆ.

ಕೂಚ್ ಬೆಹಾರ್‌ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗವು, ಮತದಾನ ಕೇಂದ್ರದಲ್ಲಿ ಕರ್ತವ್ಯದಲ್ಲಿದ್ದ ಕೇಂದ್ರ ಪಡೆಗಳ ಶಸ್ತ್ರಾಸ್ತ್ರಗಳನ್ನು ಕಸಿದುಕೊಳ್ಳಲು ಉದ್ವಿಗ್ನ ಗುಂಪು  ಪ್ರಯತ್ನಿಸಿದ್ದರಿಂದ ಗುಂಡು ಹಾರಿಸಲಾಯಿತು. ಮತದಾನ ಕೇಂದ್ರದಲ್ಲಿ ಸಾಲುಗಟ್ಟಿ ನಿಂತಿದ್ದ ಮತದಾರರ ಪ್ರಾಣವನ್ನು ಉಳಿಸಲು ಸಿಐಎಸ್ಎಫ್ ಸಿಬ್ಬಂದಿ ಗುಂಡು ಹಾರಿಸುವುದು ಸಂಪೂರ್ಣವಾಗಿ ಅಗತ್ಯವಾಗಿತ್ತು ಸಮೀಕ್ಷಾ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಮಾರ್ಚ್ 28 ಮತ್ತು ಏಪ್ರಿಲ್ 7 ರಂದು ನಡೆದ ಚುನಾವಣಾ ಪ್ರಚಾರ ರ್‍ಯಾಲಿಗಳಲ್ಲಿ ಕೇಂದ್ರದ ಪಡೆಗಳ ವಿರುದ್ದ ಮಮತಾ ಬ್ಯಾನರ್ಜಿ ನೀಡಿದ್ದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಏಪ್ರಿಲ್ 10 ರೊಳಗೆ ಉತ್ತರಿಸುವಂತೆ ಚುನಾವಣಾ ಆಯೋಗ ಬ್ಯಾನರ್ಜಿಗೆ ನೋಟಿಸ್ ನೀಡಿದೆ.


ಇದನ್ನೂ ಓದಿ: ಬೀದಿಬದಿ ವಾಸಿಸುವ ಬಾಲಕಿಯರಿಗೆ ಸಿಎಎ, ಎನ್‌ಆರ್‌ಸಿ ಪಾಠ ಮಾಡಿದ್ದಕ್ಕೆ ದೇಶದ್ರೋಹ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...