Homeಕರ್ನಾಟಕ'ರಾಜಭವನ'ಗಳನ್ನು 'ಲೋಕಭವನ'ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

- Advertisement -
- Advertisement -

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಜೊತೆಗೆ ಕರ್ನಾಟಕದಲ್ಲಿ ಅದನ್ನು ರಾಜ್ಯಭವನ ಎಂದು ಬದಲಿಸಬೇಕೆಂದೂ ಆಗ್ರಹಿಸಿದೆ. 

ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಪ್ರಕಟಿಸಿರುವ ಜಾಗೃತ ಕರ್ನಾಟಕವು ‘ಭಾರತದ ರಾಜಕೀಯ ವ್ಯವಸ್ಥೆಯನ್ನು ಸಂವಿಧಾನಾತ್ಮಕ ಮೌಲ್ಯಗಳ ತಳಹದಿಯ ಮೇಲೆ ಮರುನಿರ್ಮಿಸಲು ಬದ್ಧವಾಗಿರುವ ರಾಜಕೀಯ ಸಂಘಟನೆಯಾದ ಜಾಗೃತ ಕರ್ನಾಟಕ, ‘ರಾಜಭವನ’ ಎಂಬ ಸ್ಥಾಪಿತ ಸಂವಿಧಾನಾತ್ಮಕ ಪದವನ್ನು ‘ಲೋಕಭವನ’ ಎಂದು ಮರುನಾಮಕರಣ ಮಾಡುವ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ತೀವ್ರವಾಗಿ ವಿರೋಧಿಸುತ್ತದೆ’ ಎಂದು ಹೇಳಿದೆ.

ಕೇಂದ್ರ ಸರ್ಕಾರದಿಂದ ಬಂದಿರುವ ಸೂಚನೆಗಳ ಹಿನ್ನೆಲೆಯಲ್ಲಿ ನಡೆಯುತ್ತಿರುವ ಈ ಕ್ರಮಗಳು ಸಾಂಕೇತಿಕ ಅಥವಾ ಆಡಳಿತಾತ್ಮಕವೆಂದು ತೋರಿಸಲ್ಪಟ್ಟರೂ, ಅದರ ಒಟ್ಟು ಪರಿಣಾಮ ಅಧಿಕೃತ ಸಾರ್ವಜನಿಕ ವಲಯದಲ್ಲಿ ವಿಶೇಷವಾಗಿ ಹಿಂದಿ ಆಡಳಿತ ಭಾಷೆಯಾಗಿರದ ರಾಜ್ಯಗಳಲ್ಲಿ ಹಿಂದಿಯ ಪರೋಕ್ಷ ಹೇರಿಕೆಯಾಗುತ್ತದೆ. ಇದು ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ತತ್ತ್ವ ಗಳಿಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಭಾರತೀಯ ಸಂವಿಧಾನವು ಬಹುಭಾಷಾತ್ಮಕ ಸ್ವರೂಪವನ್ನು ಸ್ಪಷ್ಟವಾಗಿ ಒಪ್ಪಿಕೊಂಡಿದೆ. ವಿಧಿ 343 ಹಿಂದಿ ಮತ್ತು ಇಂಗ್ಲಿಷ್ ಅನ್ನು ವ್ಯವಹಾರಿಕ ಭಾಷೆಗಳಾಗಿ ಗುರುತಿಸಿದರೂ, 345 ಮತ್ತು 346 ವಿಧಿಗಳು ಭಾಷಾ ವಿಚಾರದಲ್ಲಿ ರಾಜ್ಯಗಳಿಗೆ ಸ್ವಾಯತ್ತತೆಯನ್ನು ನೀಡುತ್ತವೆ. ಈ ಸಮತೋಲನವೇ ಭಾರತದ ಒಕ್ಕೂಟ ವ್ಯವಸ್ಥೆಯ ಮೂಲಾಧಾರವಾಗಿದೆ.

‘ರಾಜಭವನ’ಗಳನ್ನು ‘ಲೋಕಭವನ’ಗಳಾಗಿ ಮರುನಾಮಕರಣ ಮಾಡುವುದು ಪ್ರತ್ಯೇಕ ಕ್ರಮವಲ್ಲ ಕ್ರಮವಲ್ಲ; ಇದು ಇತ್ತೀಚಿನ ವರ್ಷಗಳಲ್ಲಿ ಕಾಣಿಸುತ್ತಿರುವ ಒಕ್ಕೂಟ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಪ್ರವೃತ್ತಿಯ ಭಾಗವಾಗಿದೆ ಎಂದಿರುವ ಜಾಗೃತ ಕರ್ನಾಟಕ ‘ದೀರ್ಘಕಾಲದ ಇಂಗ್ಲಿಷ್ ಶಾಸನಾತ್ಮಕ ಶೀರ್ಷಿಕೆಗಳನ್ನು ಹಿಂದಿ ಪದಗಳಿಂದ ಬದಲಾಯಿಸುವುದು, ಇಡೀ ದೇಶಕ್ಕೆ ಅನ್ವಯವಾಗುವ ಪ್ರಮುಖ ಕಾನೂನುಗಳನ್ನು ಮುಖ್ಯವಾಗಿ ಹಿಂದಿ ಶೀರ್ಷಿಕೆಗಳಡಿ ಜಾರಿಗೆ ತರುವುದು, ಮತ್ತು ಅಧಿಕೃತ ಪತ್ರವ್ಯವಹಾರಗಳಲ್ಲಿ ಹಿಂದಿಗೆ ಹೆಚ್ಚುತ್ತಿರುವ ಆದ್ಯತೆ-ಇವೆಲ್ಲವೂ ಭಾಷಾ ಸಮಾನತೆಯನ್ನು ದುರ್ಬಲಗೊಳಿಸುತ್ತವೆ’ ಎಂದು ಎಚ್ಚರಿಸಿದೆ.

ಕರ್ನಾಟಕದಲ್ಲಿ, ‘ರಾಜಭವನ’ವನ್ನು ‘ರಾಜ್ಯಭವನ’ ಎಂದು ಮರುನಾಮಕರಣ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿರುವ ಜಾಗೃತ ಕರ್ನಾಟಕ ಸಂಘಟನೆ, ರಾಜ್ಯಪಾಲರ ನಿವಾಸ ಮತ್ತು ಕಚೇರಿ ಸಂಕೀರ್ಣವು ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿದ್ದು, ಅದರ ನಿರ್ವಹಣೆ ಮತ್ತು ವೆಚ್ಚವನ್ನು ರಾಜ್ಯವೇ ಭರಿಸುತ್ತದೆ. ಆದ್ದರಿಂದ ಅದರ ಹೆಸರು ರಾಜ್ಯದ ಭಾಷೆ ಮತ್ತು ಗುರುತನ್ನು ಪ್ರತಿಬಿಂಬಿಸಬೇಕು ಎಂದು ಆಗ್ರಹಿಸಿದೆ. .

ಆಕ್ಷೇಪಾರ್ಹವಾಗಿರುವುದು ಮರುನಾಮಕರಣವಲ್ಲ, ಆದರೆ ಕೇಂದ್ರದಿಂದ ಹೇರಲಾಗುತ್ತಿರುವ ಏಕಸ್ವರೂಪದ ಹಿಂದಿ ನಾಮಕರಣವಾಗಿದೆ. ರಾಜ್ಯಗಳು ತಮ್ಮದೇ ಭಾಷೆಯಲ್ಲಿ ಸೂಕ್ತ ಹೆಸರನ್ನು ಆಯ್ಕೆಮಾಡುವ ಸಂವಿಧಾನಾತ್ಮಕ ಹಕ್ಕು ಹೊಂದಿವೆ ಎಂದಿರುವ ಸಂಘಟನೆ ಮೂರು ಆಗ್ರಹಗಳನ್ನು ರಾಜ್ಯ ಸರ್ಕಾರಗಳ ಮುಂದಿಟ್ಟಿದೆ. 

ಜಾಗೃತ ಕರ್ನಾಟಕ ಸಂಘಟನೆಯ ಆಗ್ರಹಗಳು: 

1. ‘ರಾಜಭವನ’ವನ್ನು ‘ಲೋಕಭವನ’ವಾಗಿ ಮರುನಾಮಕರಣ ಮಾಡುವ ಯಾವುದೇ ಕ್ರಮವನ್ನು ತಡೆಯಬೇಕು.

2. ಮರುನಾಮಕರಣ ಅಗತ್ಯವಿದ್ದಲ್ಲಿ, ರಾಜ್ಯದ ಭಾಷೆಯಲ್ಲೇ ಸೂಕ್ತ ಹೆಸರನ್ನು ಆಯ್ಕೆಮಾಡಬೇಕು.

3. ಭಾಷಾ ಹೇರಿಕೆಗೆ ವಿರುದ್ಧವಾಗಿ ಕೇಂದ್ರ ಸರ್ಕಾರಕ್ಕೆ ತಮ್ಮ ಆಕ್ಷೇಪಣೆಯನ್ನು ಅಧಿಕೃತವಾಗಿ ತಿಳಿಸಬೇಕು.

ಭಾರತದ ಐಕ್ಯತೆ ಏಕರೂಪತೆಯಲ್ಲಿ ಅಲ್ಲ, ಹೊಂದಾಣಿಕೆಯಲ್ಲಿ ನೆಲಸಿದೆ. ಭಾಷಾ ಬಹುತ್ವವನ್ನು ರಕ್ಷಿಸುವುದು ಸಂವಿಧಾನದ ಆಶಯವನ್ನು ನಿಜಾರ್ಥದಲ್ಲಿ ಎತ್ತಿ ಹಿಡಿಯುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...