Homeಮುಖಪುಟಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಗಾಯಕಿ ಪ್ರಭಾ ಅತ್ರೆ ನಿಧನ

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಗಾಯಕಿ ಪ್ರಭಾ ಅತ್ರೆ ನಿಧನ

- Advertisement -
ಖ್ಯಾತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕಿ ಡಾ. ಪ್ರಭಾ ಅತ್ರೆ ಅವರು ಇಂದು ಮುಂಜಾನೆ ಮಹಾರಾಷ್ಟ್ರದ ಪುಣೆಯ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಪ್ರಭಾ ಅವರಿಗೆ ಮುಂಜಾನೆ 3 ಗಂಟೆಯ ಸುಮಾರಿಗೆ ಹೃದಯಾಘಾತ ಆಗಿತ್ತು. ಅವರನ್ನು ನಗರದ ಕೊತ್ರುಡ್ ಪ್ರದೇಶದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, 5:30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಹಿಂದುಸ್ತಾನಿ ಶಾಸ್ತ್ರೀಯ ಸಂಗೀತದ ಕಿರಾನ ಘರಾನದವರಾಗಿದ್ದ ಪ್ರಭಾ ಅವರು, ಭಾರತ ಸರ್ಕಾರದ ಮೂರೂ ಪದ್ಮ ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಅವರಿಗೆ 1990ರಲ್ಲಿ ಪದ್ಮಶ್ರೀ ಪ್ರಶಸ್ತಿ, 2002ರಲ್ಲಿ ಪದ್ಮ ಭೂಷಣ ಪ್ರಶಸ್ತಿ ಮತ್ತು  2022ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. 1991ರಲ್ಲಿ ಪ್ರಭಾ ಅವರು ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು.
1932ರ ಸೆಪ್ಟೆಂಬರ್ 13ರಂದು ಜನಿಸಿದ ಪ್ರಭಾ ಅವರು, ಬಹುಮುಖ ಪ್ರತಿಭೆಯಿಂದ ಗುರುತಿಸಿಕೊಂಡಿದ್ದರು. ಶಾಸ್ತ್ರೀಯ ಗಾಯಕಿಯಾಗುವುದರ ಜೊತೆಗೆ, ಅವರು ಶಿಕ್ಷಣತಜ್ಞೆ, ಸಂಶೋಧಕಿ, ಸಂಯೋಜಕಿ ಮತ್ತು ಲೇಖಕಿಯೂ ಆಗಿದ್ದರು. ವಿಜ್ಞಾನ ಮತ್ತು ಕಾನೂನು ಪದವೀಧರರಾಗಿದ್ದ ಅವರು, ಸಂಗೀತದಲ್ಲಿ ಡಾಕ್ಟರೇಟ್ ಪಡೆದಿದ್ದರು.
ಪ್ರಭಾ ಅವರ ಕೆಲ ಸಂಬಂಧಿಕರು ವಿದೇಶದಲ್ಲಿದ್ದು, ಅವರು ಬಂದ ಬಳಿಕ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ವರದಿಗಳು ತಿಳಿಸಿವೆ.
- Advertisement -

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...