HomeUncategorizedಖ್ಯಾತ ವಿಮರ್ಶಕ ಡಾ. ಜಿ ಎಸ್ ಅಮೂರ ನಿಧನ

ಖ್ಯಾತ ವಿಮರ್ಶಕ ಡಾ. ಜಿ ಎಸ್ ಅಮೂರ ನಿಧನ

ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅಮೂರ, ಕನ್ನಡ ಇಂಗ್ಲಿಷ್, ಸಂಸ್ಕೃತ, ಮರಾಠಿ ಭಾಷೆ ಸಾಹಿತ್ಯ ಬಲ್ಲವರಾಗಿದ್ದರು. ಕನ್ನಡ ಸಾಹಿತ್ಯ ವಿಮರ್ಶೆ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಜನಮನ್ನಣೆ ಗಳಿಸಿದ್ದರು.

- Advertisement -
- Advertisement -

ಕನ್ನಡದ ಹಿರಿಯ ವಿಮರ್ಶಕ ಡಾ. ಜಿ ಎಸ್ ಅಮೂರ (96) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಬೆಳಗಿನ ಜಾವ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಮೂರು ವಾರಗಳ ಹಿಂದೆಯಷ್ಟೇ ನೃಪತುಂಗ ಪ್ರಶಸ್ತಿಗೆ ಭಾಜನರಾಗಿದ್ದರು.

1925ರ ಮೇ 8 ರಂದು ಧಾರವಾಡ ಜಿಲ್ಲೆಯ ಬೊಮ್ಮನಹಳ್ಳಿಯಲ್ಲಿ ಜನಿಸಿದ ಇವರು ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರು. ಕನ್ನಡ, ಇಂಗ್ಲಿಷ್, ಸಂಸ್ಕೃತ, ಮರಾಠಿ ಭಾಷೆ ಸಾಹಿತ್ಯ ಬಲ್ಲವರಾಗಿದ್ದರು. ಕನ್ನಡ ಸಾಹಿತ್ಯ ವಿಮರ್ಶೆ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಜನಮನ್ನಣೆ ಗಳಿಸಿದ್ದರು. ಜಿ.ಎಸ್. ಆಮೂರ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ, ಬೇಂದ್ರೆ ಪ್ರಶಸ್ತಿ, ರಾಜ್ಯೋತ್ಸವ ಪುರಸ್ಕಾರ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿವೆ.

ಇದನ್ನೂ ಓದಿ: ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಗಣ್ಯರ ಕಂಬನಿ

ವಿಮರ್ಶಕ ಅಮೂರರವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಕಸಾಪ ಅಧ್ಯಕ್ಷ ಮನು ಬಳಿಗಾರ್ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಮುಖ್ಯಮಂತ್ರಿಗಳು, ಇತ್ತೀಚೆಗಷ್ಟೆ ಅವರಿಗೆ ನೃಪತುಂಗ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಪ್ರಶಸ್ತಿಯನ್ನು ಸ್ವೀಕರಿಸುವ ಮುನ್ನವೇ ಅವರು ಇಹಲೋಕ ತ್ಯಜಿಸಿರುವುದು ದು:ಖವನ್ನುಂಟು ಮಾಡಿದೆ. ಅವರ ನಿಧನದಿಂದ ಕನ್ನಡ ಸಾಹಿತ್ಯಲೋಕದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಅಭಿಮಾನಿಗಳಿಗೆ ಮತ್ತು ಶಿಷ್ಯವೃಂದಕ್ಕೆ ಭಗವಂತ ನೋವು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಸಂತಾಪ ಸೂಚಿಸಿದ್ದು, ಹಿರಿಯ ವಿಮರ್ಶಕ ಡಾ.ಜಿ.ಎಸ್.ಅಮೂರ ಅವರ ನಿಧನದಿಂದ ಕನ್ನಡ ಸಾಹಿತ್ಯ ಕ್ಷೇತ್ರ ನಿಜಕ್ಕೂ ಬಡವಾಗಿದೆ. ಎಲೆಮರೆ ಕಾಯಿಯಂತೆ ಸದ್ದುಗದ್ದಲ ಇಲ್ಲದೆ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದ ಡಾ.ಅಮೂರ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು. ಅವರ ಅಗಲಿಕೆಯಿಂದ ನೊಂದಿರುವ ಬಂಧು ಮಿತ್ರರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದಿದ್ದಾರೆ.


ಇದನ್ನೂ ಓದಿ: ತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆಗೆ ಕೇಸರಿ ಬಣ್ಣ: ಆಕ್ರೋಶ, ಖಂಡನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಯಲ್ಲಿ ಬೆಂಬಲಿಸಿಲ್ಲ ಎಂದು ದಲಿತರ ಮೇಲೆ ಹಲ್ಲೆ ಪ್ರಕರಣ: YSRCP ಮುಖಂಡನಿಗೆ ಜೈಲು

0
1996ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಮುಖಂಡ ತೋಟ ತ್ರಿಮೂರ್ತಿಲು ಸೇರಿದಂತೆ ಒಂಬತ್ತು ಮಂದಿಯನ್ನು ವಿಶಾಖಪಟ್ಟಣ ನ್ಯಾಯಾಲಯವು ದೋಷಿ ಎಂದು ಘೋಷಿಸಿ...