Homeಕರ್ನಾಟಕಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನ

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ನಿಧನ

- Advertisement -
- Advertisement -

ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ (57) ಇಂದು (ಜುಲೈ11) ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳು ಖಚಿತಪಡಿಸಿವೆ.

‘ಅಚ್ಚ ಕನ್ನಡದ ನಿರೂಪಕಿ’ ಎಂದೇ ಪ್ರಸಿದ್ದಿ ಪಡೆದಿದ್ದ ಅಪರ್ಣಾ ಅವರು, ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆ ಮಾತಾಗಿದ್ದರು.

ಸಿನಿಮಾ ಮತ್ತು ಧಾರಾವಾಹಿಗಳಲ್ಲಿಯೂ ನಟಿಸಿ ಅವರು ಖ್ಯಾತಿ ಪಡೆದಿದ್ದರು. ಕಿರುತೆರೆಯ ಅನೇಕ ಕಾರ್ಯಕ್ರಮಗಳನ್ನು ಕೂಡ ಅಪರ್ಣಾ ನಡೆಸಿಕೊಟ್ಟಿದ್ದರು. ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಕನ್ನಡದಲ್ಲಿ ಬರುವ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು.

1984ರಲ್ಲಿ ತೆರೆಕಂಡಿದ್ದ ಪುಟ್ಟಣ್ಣ ಕಣಗಾಲ್‌ ಅವರ ‘ಮಸಣದ ಹೂವು’ಚಿತ್ರದಲ್ಲಿ ಖ್ಯಾತ ನಟ ದಿವಂಗತ ಅಂಬರೀಶ್ ಹಾಗೂ ಜಯಂತಿ ಅವರ ಜೊತೆಗೆ ನಟಿಸುವ ಮೂಲಕ ಅಪರ್ಣಾ ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ನಂತರ ಇನ್ಸ್‌ಪೆಕ್ಟರ್‌ ವಿಕ್ರಮ್‌ ಸೇರಿದಂತೆ ಹಲವು ಚಿತ್ರಗಳಲ್ಲಿ ಅವರು ನಟಿಸಿದ್ದರು. ಆ ಬಳಿಕ 1989ರಲ್ಲಿ ನಿರೂಪಕಿಯಾಗಿ ಟಿವಿ ರಂಗಕ್ಕೆ ಪಾದಾರ್ಪಣೆ ಮಾಡಿದ್ದರು.

90ರ ದಶಕದಲ್ಲೇ ಚಂದನ ವಾಹಿನಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದವರು ಅಪರ್ಣಾ. ನಂತರ ರೇಡಿಯೋ ಜಾಕಿಯಾಗಿ ಕೂಡ ಕಾರ್ಯನಿರ್ವಹಿಸಿದ್ದರು. 1998ರಲ್ಲೇ ದೀಪಾವಳಿ ಕಾರ್ಯಕ್ರಮದಲ್ಲಿ 8 ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು.

2013ರಲ್ಲಿ ಬಿಗ್‌ಬಾಸ್‌ ಕನ್ನಡದ ಮೊದಲ ಸೀಸನ್‌ನಲ್ಲಿ ಸ್ಪರ್ಧಿಯಾಗಿ ಕೂಡ ಭಾಗವಹಿಸಿದ್ದರು. 2015ರಲ್ಲಿ ಸೃಜನ್‌ ಲೋಕೇಶ್‌ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್‌’ ಕಾರ್ಯಕ್ರಮದಲ್ಲಿ ವರಲಕ್ಷ್ಮೀ ಪಾತ್ರ ಮಾಡುವ ಮೂಲಕ ಗಮನ ಸೆಳೆದಿದ್ದರು.

ಸಿಎಂ ಸಂತಾಪ :

“ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆ ಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಮೂರನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಬಾಲಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...