Homeಮುಖಪುಟಹಿರಿಯ ವಿದ್ವಾಂಸ, ವಕೀಲ ಎಜಿ ನೂರಾನಿ ನಿಧನ

ಹಿರಿಯ ವಿದ್ವಾಂಸ, ವಕೀಲ ಎಜಿ ನೂರಾನಿ ನಿಧನ

- Advertisement -
- Advertisement -

ಹಿರಿಯ ವಿದ್ವಾಂಸ, ಸಂವಿಧಾನ ತಜ್ಞ, ವಕೀಲ ಹಾಗೂ ರಾಜಕೀಯ ವಿಶ್ಲೇಷಕ ಅಬ್ದುಲ್ ಗಫೂರ್ ಮಜೀದ್ ನೂರಾನಿ (ಎಜಿ ನೂರಾನಿ) ಇಂದು(ಆ.29) ಮುಂಬೈನಲ್ಲಿ ನಿಧನರಾಗಿದ್ದಾರೆ.

ಮುಂಬೈನಲ್ಲಿ 1930ರಲ್ಲಿ ಜನಿಸಿದ ನೂರಾನಿ ಅವರು ಹಿಂದೂಸ್ತಾನ್ ಟೈಮ್ಸ್, ದಿ ಹಿಂದೂ, ಡಾನ್, ದಿ ಸ್ಟೇಟ್ಸ್‌ಮನ್, ಫ್ರಂಟ್‌ಲೈನ್, ಎಕನಾಮಿಕ್ ಅಂಡ್ ಪೊಲಿಟಿಕಲ್ ವೀಕ್ಲಿ ಮತ್ತು ದೈನಿಕ್ ಭಾಸ್ಕರ್ ಸೇರಿದಂತೆ ವಿವಿಧ ಪತ್ರಿಕೆಗಳಿಗೆ ಅಂಕಣಗಳನ್ನು ಬರೆದಿದ್ದಾರೆ. 1960ರ ದಶಕದ ಆರಂಭದಲ್ಲಿ ಬರೆಯಲು ಪ್ರಾರಂಭಿಸಿದ್ದ ನೂರಾನಿ, ಸಾವಿರಾರು ಲೇಖನಗಳನ್ನು ಬರೆದು ಮುಗಿಸಿದ್ದಾರೆ.

“ದಿ ಕಾಶ್ಮೀರ್ ಕ್ವೆಶ್ಚನ್, ಬದ್ರುದ್ದೀನ್ ತೈಯ್ಯಿಬ್ಜಿ, ಮಿನಿಸ್ಟರ್ ಮಿಸ್‌ ಕಂಡಕ್ಟ್, ಬ್ರೆಝ್ನೇವ್ಸ್‌ ಪ್ಲ್ಯಾನ್ ಫಾರ್ ಏಷ್ಯನ್ ಸೆಕ್ಯೂರಿಟಿ, ದಿ ಪ್ರೆಸಿಡೆನ್ಸಿಯಲ್ ಸಿಸ್ಟಮ್, ದಿ ಟ್ರಯಲ್ ಆಫ್ ಭಗತ್ ಸಿಂಗ್, ಕಾನ್ಸಿಟ್ಯೂಶನಲ್ ಕ್ವೆಶ್ಚನ್ಸ್ ಇನ್ ಇಂಡಿಯಾ, ದಿ ಆರ್‌ಎಸ್‌ಎಸ್‌ ಅಂಡ್ ಬಿಜೆಪಿ: ಎ ಡಿವಿಶನ್ ಆಫ್ ಲೇಬರ್ ಮತ್ತು ದಿ ಆರ್‌ಎಸ್‌ಎಸ್‌ : ಮೆನಶ್ ಟು ಇಂಡಿಯಾ ಸೇರಿದಂತೆ ಹಲವಾರು ಪುಸ್ತಕಗಳನ್ನು ಎಜಿ ನೂರಾನಿ ಬರೆದಿದ್ದಾರೆ.

ಬದ್ರುದ್ದೀನ್ ತೈಯ್ಯಬ್ಜಿ ಮತ್ತು ಡಾ. ಝಾಕಿರ್ ಹುಸೇನ್ ಅವರ ಜೀವನಚರಿತ್ರೆಯನ್ನೂ ನೂರಾನಿ ರಚಿಸಿದ್ದಾರೆ.

ಸುಪ್ರೀಂ ಕೋರ್ಟ್ ಮತ್ತು ಬಾಂಬೆ ಹೈಕೋರ್ಟ್‌ನಲ್ಲಿ ವಕೀಲರಾಗಿದ್ದ ನೂರಾನಿ, ಕಾಶ್ಮೀರದ ಶೇಖ್ ಅಬ್ದುಲ್ಲಾ ಅವರ ದೀರ್ಘಾವಧಿಯ ಬಂಧನದ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ತಮಿಳುನಾಡು ಮಾಜಿ ಮುಖ್ಯಮಂತ್ರಿ ಕರುಣಾನಿಧಿ ಅವರ ಪ್ರಮುಖ ರಾಜಕೀಯ ಪ್ರತಿಸ್ಪರ್ಧಿಯಾಗಿದ್ದ ಜೆ.ಜಯಲಲಿತಾ ವಿರುದ್ಧ ಅವರು ಬಾಂಬೆ ಹೈಕೋರ್ಟ್‌ನಲ್ಲಿ ವಾದಿಸಿದ್ದರು.

ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದ ಎಜೆ ನೂರಾನಿ, ಮುಂಬೈನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಪ್ರಜಾಪ್ರಭುತ್ವ, ಸಾಂವಿಧಾನಿಕ ಮೌಲ್ಯಗಳು ಮತ್ತು ಮಾನವ ಹಕ್ಕುಗಳ ದೊಡ್ಡ ಪ್ರತಿಪಾದಕರಾಗಿದ್ದರು. ಕಾನೂನು ವಿಷಯದಲ್ಲಿ ಅಗಾದ ಜ್ಞಾನವನ್ನು ಹೊಂದಿದ್ದರು.

ನೂರಾನಿ ಅಗಲಿಕೆಗೆ ಹೈದರಾಬಾದ್ ಸಂಸದ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಓವೈಸಿ “ವಿದ್ವಾಂಸರಲ್ಲಿ ದಿಗ್ಗಜರಾದ ಎಜಿ ನೂರಾನಿ ಅವರು ನಿಧನರಾಗಿದ್ದಾರೆ. ನಾನು ಅವರಿಂದ ಸಂವಿಧಾನ, ಕಾಶ್ಮೀರ, ಚೀನಾ ಮತ್ತು ಉತ್ತಮ ಆಹಾರವನ್ನು ಮೆಚ್ಚುವ ಕಲೆಯನ್ನು ಕಲಿತುಕೊಂಡಿದ್ದೇನೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಹೆಚ್ಚುತ್ತಿರುವ ಮಹಿಳೆಯರ ಮೇಲಿನ ಅಪರಾಧ; ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...