Homeಕರ್ನಾಟಕಕೊಲೆ ಪ್ರಕರಣ: ನಟ ದರ್ಶನ್ ಸೇರಿ ನಾಲ್ವರು 12 ದಿನ ನ್ಯಾಯಾಂಗ ಬಂಧನಕ್ಕೆ

ಕೊಲೆ ಪ್ರಕರಣ: ನಟ ದರ್ಶನ್ ಸೇರಿ ನಾಲ್ವರು 12 ದಿನ ನ್ಯಾಯಾಂಗ ಬಂಧನಕ್ಕೆ

- Advertisement -
- Advertisement -

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಇತರ ಮೂವರನ್ನು 12 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆ, ಇಂದು (ಜೂನ್ 22) ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ವಿಚಾರಣೆ ವೇಳೆ ಪ್ರಕರಣ ತನಿಖಾಧಿಕಾರಿ ಎಸಿಪಿ ಎಲ್‌. ಚಂದನ್‌ ಕುಮಾರ್ ಪ್ರಕರಣದ ಸಿಡಿಯನ್ನು (ಕೇಸ್‌ ಡೈರಿ) ಮುಚ್ಚಿದ ಲಕೋಟೆಯಲ್ಲಿ ಹಾಗೂ ಮುಕ್ತ ರಿಮ್ಯಾಂಡ್ ಅರ್ಜಿಯ ದಸ್ತಾವೇಜನ್ನು ನ್ಯಾಯಾಧೀಶರಿಗೆ ಸಲ್ಲಿಸಿದರು.

ಅದನ್ನು ದಾಖಲಿಸಿಕೊಂಡ ನ್ಯಾಯಾಧೀಶರಾದ ವಿಜಯಕುಮಾರ್ ಎಸ್‌. ಜಾಟ್ಲಾ, 30 ನಿಮಿಷಗಳ ಕಾಲ ವಿಚಾರಣೆ ನಡಸಿ ಎಲ್ಲಾ ಆರೋಪಿಗಳನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪ್ರಕರಣ ಎರಡನೇ ಆರೋಪಿಯಾದ ನಟ ದರ್ಶನ್, 9 ಆರೋಪಿ ಡಿ. ಧನರಾಜ್, 10ನೇ ಆರೋಪಿ ವಿ.ವಿನಯ್ ಮತ್ತು 14ನೇ ಆರೋಪಿ ಪ್ರದೋಷ್ ಅನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಪೊಲೀಸರು ಎಲ್ಲಾ ಆರೋಪಿಗಳನ್ನು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ದಿದ್ದಾರೆ.

ಪ್ರಕರಣದಲ್ಲಿ ಒಂದನೇ ಆರೋಪಿಯಾಗಿರುವ ಪವಿತ್ರಾ ಗೌಡ ಸೇರಿ 12 ಆರೋಪಿಗಳನ್ನು ನ್ಯಾಯಾಲಯ ಗುರುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಅವರೆಲ್ಲರನ್ನು ಈಗಾಗಲೇ ಪರಪ್ಪನ ಅಗ್ರಹಾರದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ : ಭೂ ಕಬಳಿಕೆ ಆರೋಪ : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಗಾಯಕ ಲಕ್ಕಿ ಅಲಿ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...