Homeಮುಖಪುಟಅನ್ನ ಭಾಗ್ಯ ಅಕ್ಕಿ ಕಡಿತ ಮಾಡಿ ಸೋತೆವು: ಬಿಜೆಪಿ ಸೋಲಿಗೆ 8 ಕಾರಣ ನೀಡಿದ ರೇಣುಕಾಚಾರ್ಯ

ಅನ್ನ ಭಾಗ್ಯ ಅಕ್ಕಿ ಕಡಿತ ಮಾಡಿ ಸೋತೆವು: ಬಿಜೆಪಿ ಸೋಲಿಗೆ 8 ಕಾರಣ ನೀಡಿದ ರೇಣುಕಾಚಾರ್ಯ

ಡಾ.ಕೆ.ಸುಧಾಕರ್​ ಕೆಲಸಕ್ಕೆ ಬಾರದ ಪ್ರಣಾಳಿಕೆ ಮಾಡಿದ್ದರು. ಅರ್ಧ ಲೀಟರ್ ಹಾಲು ಯಾರಿಗೆ ಬೇಕು ಹೇಳಿ?

- Advertisement -
- Advertisement -

ಬಡವರು ತಿನ್ನುವ ಅನ್ನ ಕಡಿತ ಮಾಡಿ, ಹೊಟ್ಟೆ ಮೇಲೆ ಹೊಡೆದರು. ಅನ್ನ ಭಾಗ್ಯ ಅಕ್ಕಿ ಕಡಿತ ಮಾಡಿದ್ದರಿಂದ ಕರ್ನಾಟಕದ ವಿಧಾನಸಭೆ ಚುನಾವಣೆ ಸೋತೆವು ಎಂದು ಹೊನ್ನಾಳಿಯ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಅಭಿಪ್ರಾಯಪಟ್ಟಿದ್ದಾರೆ.

ಕೇವಲ ರೇಣುಕಾಚಾರ್ಯ ಒಬ್ಬರು ಮಾತ್ರ ಸೋತಿಲ್ಲ. ಇಡೀ ಬಿಜೆಪಿಗೆ ಹೀನಾಯ ಸೋಲಾಗಿದೆ. ಸರ್ಕಾರದ ತಪ್ಪು ನಿರ್ಧಾರಗಳಿಂದ ಸೋಲು ಕಂಡಿದ್ದೇವೆ ಎಂದು ಬಿಜೆಪಿ ಸೋಲಿಗೆ ಎಂಟು ಕಾರಣಗಳನ್ನು ಪಟ್ಟಿ ಮಾಡಿದ್ದಾರೆ.

ನಮ್ಮ ಸರ್ಕಾರ ಎನ್‌ಪಿಎಸ್‌ ನೌಕರರ ಮನವಿ ಸ್ವೀಕರಿಸಲಿಲ್ಲ. ಅವರು ಬಂದು ನನ್ನನ್ನು ಭೇಟಿ ಮಾಡಿದ್ದರು. ನಾನು ಈ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ. ಅವರೆಲ್ಲರೂ ಬಿಜೆಪಿ ವಿರುದ್ಧ ಸಿಡಿದೆದ್ದರು.

ಒಳಮೀಸಲಾತಿ ಕೊಡಬ್ಯಾಡ್ರಿ ಅಂತ ಹೇಳಿದ್ದೆ. ಆದರೂ ಚುನಾವಣೆಗೆ ಮುಂಚೆ ಒಳಮೀಸಲಾತಿ ಘೋಷಣೆ ಮಾಡಿದರು. ಅದು ಬೇಕಿರಲಿಲ್ಲ, ಮೀಸಲಾತಿಗೆ ಕೈಹಾಕಿದರು. ಹಾಗಾಗಿ ನಮಗೆ ಉಲ್ಟಾ ಹೊಡೆಯಿತು.

ಹಿರಿಯ ನಾಯಕರಾದ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಇಳಿಸಿದ್ರು. ಹಾಗಾಗಿ ನಮಗೆ ಮುಳುವಾಯಿತು.

ಅಷ್ಟು ಮಾತ್ರವಲ್ಲದೇ 70 ಜನರಿಗೆ ಟಿಕೆಟ್ ತಪ್ಪಿಸಿದರು. ಜಗದೀಶ್ ಶೆಟ್ಟರ್, ಈಶ್ವರಪ್ಪನವರಿಗೆ ಟಿಕೆಟ್ ಕೊಡಲಿಲ್ಲ. ಇದು ನಮ್ಮ ಸೋಲಿಗೆ ಕಾರಣವಾಯಿತು. ಜಗದೀಶ್ ಶೆಟ್ಟರ್ ಸೋತಿರಬಹುದು. ಆದರೆ ಬಿಜೆಪಿಗೆ ಪೆಟ್ಟಾಗಿದೆ. ಉತ್ತರ ಕರ್ನಾಟಕದಲ್ಲಿ ಬಹಳಷ್ಟು ಜನ ಬಿಜೆಪಿ ವಿರುದ್ಧ ತಿರುಗಿಬಿದ್ದರು.

ಈಶ್ವರಪ್ಪನವರು ಕುರುಬ ಸಮಾಜದ ಏಕೈಕ ಬಿಜೆಪಿ ನಾಯಕರಾಗಿದ್ದರು. ಅವರಿಗೂ ಟಿಕೆಟ್ ಕೊಡದೇ ತಪ್ಪು ಮಾಡಲಾಯಿತು.

ಕಾಂಗ್ರೆಸ್‌ನವರು ಭರವಸೆಗಳನ್ನು ನೀಡಿದರು. ಆದರೆ ನಮ್ಮಲ್ಲಿ ಸುಧಾಕರ್‌ನನ್ನು ಪ್ರಣಾಳಿಕೆ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಲಾಯಿತು. ಬಹಳ ಜನ ಹಿರಿಯರಿದ್ರು ಸಹ ಕಡೆಗಣಿಸಲಾಯಿತು. ಡಾ.ಕೆ.ಸುಧಾಕರ್​ ಕೆಲಸಕ್ಕೆ ಬಾರದ ಪ್ರಣಾಳಿಕೆ ಮಾಡಿದ್ದರು. ಅರ್ಧ ಲೀಟರ್ ಹಾಲು ಯಾರಿಗೆ ಬೇಕು ಹೇಳಿ ಎಂದು ರೇಣುಕಾಚಾರ್ಯ ಪ್ರಶ್ನಿಸಿದರು.

ನಮ್ಮ ರಾಜ್ಯದ ಅಧ್ಯಕ್ಷರು ಅರ್ಥ ಮಾಡಿಕೊಳ್ಳಲಿಲ್ಲ. ಗೊಂದಲಕಾರಿ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಈಗಲೂ ರಾಜೀನಾಮೆ ಕೊಡ್ತಿವಿ ಅಂತಾರೆ, ಇಲ್ಲ ಅಂತಾರೆ. ಇದೆಲ್ಲವೂ ಬಿಜೆಪಿ ಸೋಲಿಗೆ ಕಾರಣ ಎಂದು ಅವರು ವಿವರಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷನಾಗಲು ನಾನು ಸಮರ್ಥನಿದ್ದೀನಿ. ಶಾಸಕನಾಗಿ, ಸಚಿವನಾಗಿ ಅನುಭವ ಇದೆ. ಅದರೆ ಒತ್ತಡ ಮಾಡೋದಿಲ್ಲ. ಸೋಮಣ್ಣ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಕೇಳಿದ್ದು ನನಗೆ ಗೊತ್ತಿಲ್ಲ ಎಂದು ರೇಣುಕಾಚಾರ್ಯ ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಕಡೆ ನನಗೆ ಎಂಪಿ ಚುನಾವಣೆಗೆ ಸ್ಪರ್ಧೆ ಮಾಡಿ ಎಂದು ಒತ್ತಡ ಹಾಕುತ್ತಿದ್ದಾರೆ. ಒತ್ತಡ ಹೆಚ್ಚಾದ ಕಾರಣ ನಾನು ಕೂಡ ದಾವಣಗೆರೆ ಎಂಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಆದರೆ ಯಡಿಯೂರಪ್ಪನವರು ಜಿ.ಎಂ ಸಿದ್ದೇಶ್ವರ್ ಗೆ ಎಂಪಿ ಟಿಕೆಟ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ನಾನು ಕೂಡ ಎಂಪಿ ಚುನಾವಣೆಯ ಪ್ರಬಲ ಅಕಾಂಕ್ಷಿ. ಹಿರಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು ಜೈಲಿಗೆ ಕಳುಹಿಸಿದರು. ಮಾಡಾಳ್ ಪುತ್ರ ಮಾಡಾಳ್ ಮಲ್ಲಿಕಾರ್ಜುನ್‌ಗೆ ಟಿಕೆಟ್ ಕೊಡಬೇಕಿತ್ತು, ಅಲ್ಲಿ ಕೂಡ ತಪ್ಪು ಮಾಡಿದ್ರು. ಈಗ ನನಗೆ ಟಿಕೆಟ್ ಕೊಡದಿದ್ದರೆ ಮತ್ತೆ ತಪ್ಪಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಮೇಲೆ ಅವ್ಯವ್ಯಹಾರಗಳ ಆರೋಪ: ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...